My Blog List

Tuesday, April 28, 2009

‘Baththa Utsav’ held

‘Baththa Utsav’ held

 A “Baththa Utsav” or rice festival was held at Hole Hanasawadi village near Shimoga,Karnatka  here on Sunday 19th April 2009. More than 150 traditional rice varieties from various States were on display. Expe
rts and farmers participated in a discussion held as part of the festival.

National Award-winning farmer of Channapatna, Lingamadaiah, who formally inaugurated the festival, emphasised the importance of paddy cultivation to enhance the economic condition of farmers.

 He called for introducing indigenous innovations to improve the quality and yield of paddy. The festival was organised by the “Save Rice Campaign” in association with Sahaja Samruddhi and Sirinadu Gramina  Janabhivruddhi Samsthe of Hole Hanasawadi.

Director of Sahaja Samruddhi G. Krishnaprasad said that with the impetus being given to a few high yielding hybrid rice varieties, the traditional rice varieties were being sidelined.

The website of Sirinadu Gramina Janabhivruddhi Samsthe was launched on the occasion. A 1,000-ft long “Baththa Torana” (paddy creeper) made by Sirivante Chandrasekhar of Sirivante of Sagar taluk was the centre of attraction at the festival. view the larger view photos of the programme by clicking the image.

-G. KRISHNA PRASAD
Sahaja Samrudha 
'Nandana', No-7, 2nd Cross,
7th Main, Sulthanpalya, Bangalore-560 032 Phone: 080-23655302 /
9880862058



ಇಂದಿನ ಇತಿಹಾಸ History Today ಏಪ್ರಿಲ್ 28

ಇಂದಿನ ಇತಿಹಾಸ

ಏಪ್ರಿಲ್ 28

 ಭಾರತ ಹಾಕಿ ಫೆಡರೇಷನ್ ಅಧ್ಯಕ್ಷ ಕೆ.ಪಿ.ಎಸ್. ಗಿಲ್ ಅವರ ಹದಿನೈದು ವರ್ಷಗಳ ಆಳ್ವಿಕೆಗೆ ಕೊನೆಗೂ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅಂತ್ಯ ಹಾಡಿತು. ಈದಿನ ನಡೆದ ತುರ್ತು ಸಭೆಯಲ್ಲಿ ಐಒಎ, ಭಾರತ ಹಾಕಿ ಫೆಡರೇಷನನ್ನು ಅಮಾನತು ಮಾಡುವುದರ ಜೊತೆಯಲ್ಲಿ ಒಲಿಂಪಿಯನ್ ಅಸ್ಲಮ್ ಷೇರ್ ಖಾನ್ ಅವರ ನೇತೃತ್ವದಲ್ಲಿ ತಾತ್ಕಾಲಿಕ ಆಯ್ಕೆ ಸಮಿತಿಯನ್ನು ನೇಮಿಸಲಾಯಿತು.

2008: ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈದಿನ ಬೆಳಗ್ಗೆ ಆಕಾಶಕ್ಕೆ ಚಿಮ್ಮಿದ ಇಸ್ರೋದ ಪಿ ಎಸ್ ಎಲ್ ವಿ ರಾಕೆಟ್ ಒಂದೇ ಸಲಕ್ಕೆ 10 ಉಪಗ್ರಹಗಳನ್ನು ಕಕ್ಷೆಗೆ ಯಶಸ್ವಿಯಾಗಿ ಬಿಡುವ ಮೂಲಕ ಭಾರತದ ಬಾಹ್ಯಾಕಾಶ ವಿಜ್ಞಾನವು ಐತಿಹಾಸಿಕ ವಿಶ್ವ ದಾಖಲೆಯನ್ನು ನಿರ್ಮಿಸಿತು. 230 ಟನ್ ಅಂದರೆ 50 ಆನೆ ತೂಕದ, 12 ಮಹಡಿ ಎತ್ತರದ ಪಿ ಎಸ್ ಎಲ್ ವಿ ಯು ನಮ್ಮ ದೇಶದ ಒಂದು ನಕ್ಷೆ ಉಪಗ್ರಹ `ಕಾರ್ಟೋಸ್ಯಾಟ್-2ಎ' ಒಂದು ದೂರ ಸಂವೇದಿ ಮಿನಿ ಉಪಗ್ರಹ ಹಾಗೂ ವಿದೇಶಗಳ ಎಂಟು ನ್ಯಾನೋ ಉಪಗ್ರಹಗಳನ್ನು ಹಾಗೂ ಒಂದು ದೂರಸಂವೇದಿ ಉಪಗ್ರಹವನ್ನು ನಿಶ್ಚಿತ ಕಕ್ಷೆಗೆ ಸೇರಿಸಿತು. ಉಡಾವಣಾ ಹಲಗೆ ಮೇಲಿನಿಂದ 9.23ಕ್ಕೆ ಚಿಮ್ಮಿದ ಈ ರಾಕೆಟ್ ಯಾವುದೇ ಆತಂಕಕ್ಕೆ ಎಡೆ ಮಾಡಿಕೊಡದೆ ಸುಮಾರು 14 ನಿಮಿಷಗಳ ಅವದಿಯಲ್ಲಿ 635 ಕಿ.ಮೀ. ದೂರದ `ಪೋಲಾರ್ ಸನ್ ಸಿಂಕ್ರೋನಸ್  ಕಕ್ಷೆ'ಗೆ ಉಪಗ್ರಹಗಳನ್ನು ಹಾರಿಸಿತು. ಈದಿನದ ಉಡಾವಣೆಯೂ ಸೇರಿ ಪಿ ಎಸ್ ಎಲ್ ವಿ 12 ಸಲ ಯಶಸ್ವಿಯಾಗಿ ಉಡಾವಣೆಗಳನ್ನು ಮಾಡಿದೆಯಾದರೂ, ಒಂದೇ ಬಾರಿಗೆ 10 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದ್ದು ಇದೇ ಮೊದಲು. ರಷ್ಯಾದ ರಾಕೆಟ್ ಒಂದು ಕಳೆದ ವರ್ಷ ಒಂದೇ ಸಲಕ್ಕೆ 16 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿತ್ತಾದರೂ ಅವುಗಳ ಒಟ್ಟು ತೂಕ ಕೇವಲ 300 ಕಿ.ಲೋ. ಮಾತ್ರ. ಆದರೆ ಪಿ ಎಸ್ ಎಲ್ ವಿ ಕಕ್ಷೆಗೆ ಸೇರಿಸಿದ ಉಪಗ್ರಹಗಳ ತೂಕ ಒಟ್ಟು 824 ಕೆ.ಜಿ.

2008: ವೇಗಿ ಎಸ್. ಶ್ರೀಶಾಂತ್ ಅವರ ಕೆನ್ನೆಗೆ ಬಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಭಜನ್ ಸಿಂಗ್ ಅವರ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ 11 ಪಂದ್ಯಗಳನ್ನು ಆಡದಂತೆ ನಿಷೇಧ ಹೇರಲಾಯಿತು. ಐಪಿಎಲ್ ಮ್ಯಾಚ್ ರೆಫರಿ ಹಾಗೂ ಮಾಜಿ ಆಟಗಾರ ಫಾರೂಕ್ ಎಂಜಿನಿಯರ್ ಅವರು ಈದಿನ ಮಧ್ಯಾಹ್ನ ನವದೆಹಲಿಯ ಹೋಟೆಲ್ ಒಂದರಲ್ಲಿ ಎರಡು ಗಂಟೆ ಕಾಲ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬಂದರು. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಭಜ್ಜಿ ಕ್ಷಮೆಯಾಚಿಸಿದರು. ಬಳಿಕ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಭಜ್ಜಿ ಮೇಲೆ ಐಪಿಎಲ್ `ಟ್ವೆಂಟಿ-20' ಟೂರ್ನಿಯ 11 ಪಂದ್ಯಗಳ ನಿಷೇಧದ ತೀರ್ಪನ್ನು ಪ್ರಕಟಿಸಿತು.

2008: ಭಾರತ ಹಾಕಿ ಫೆಡರೇಷನ್ ಅಧ್ಯಕ್ಷ ಕೆ.ಪಿ.ಎಸ್. ಗಿಲ್ ಅವರ ಹದಿನೈದು ವರ್ಷಗಳ ಆಳ್ವಿಕೆಗೆ ಕೊನೆಗೂ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅಂತ್ಯ ಹಾಡಿತು. ಈದಿನ ನಡೆದ ತುರ್ತು ಸಭೆಯಲ್ಲಿ ಐಒಎ, ಭಾರತ ಹಾಕಿ ಫೆಡರೇಷನನ್ನು ಅಮಾನತು ಮಾಡುವುದರ ಜೊತೆಯಲ್ಲಿ ಒಲಿಂಪಿಯನ್ ಅಸ್ಲಮ್ ಷೇರ್ ಖಾನ್ ಅವರ ನೇತೃತ್ವದಲ್ಲಿ ತಾತ್ಕಾಲಿಕ ಆಯ್ಕೆ ಸಮಿತಿಯನ್ನು ನೇಮಿಸಲಾಯಿತು. ಐ ಎಚ್ ಎಫ್ ಕಾರ್ಯದರ್ಶಿ ಕೆ. ಜ್ಯೋತಿಕುಮಾರನ್ ಅಜ್ಲನ್ ಷಾ ಕಪ್ ಹಾಕಿ ಚಾಂಪಿಯನ್ ಶಿಪ್ಪಿನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಆಯ್ಕೆಗಾಗಿ ಲಂಚ ಸ್ವೀಕರಿಸುತ್ತಿದ್ದಾಗ ಟಿ.ವಿ. ಸ್ಟಿಂಗ್ ಆಪರೇಷನ್ನಿನಲ್ಲಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಐಒಎ ತುರ್ತು ಸಭೆ ನಡೆಸಿ ಐ ಎಚ್ ಎಫ್ನ ಪ್ರಸ್ತುತ ಆಡಳಿತ ಮಂಡಳಿಯನ್ನು ಕಿತ್ತೊಗೆಯುವುದಕ್ಕೆ ಸರ್ವಾನುಮತದಿಂದ ಸಮ್ಮತಿಸಿತು. 

2008: ಮಲೇಷ್ಯಾದ ಸಂಸತ್ತಿಗೆ  ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಭಾರತೀಯ ಮೂಲದ 10 ಶಾಸಕರು ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಿ ಹೊಸ ಇತಿಹಾಸ ನಿರ್ಮಿಸಿದರು. ಮಾರ್ಚ್ 8ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಶಾಲಿಗಳಾಗಿದ್ದ ಭಾರತೀಯ ಮೂಲದ 10ಮಂದಿ ಈದಿನ ಆರಂಭವಾದ ಮಲೇಷ್ಯಾದ ಸಂಸತ್ತಿನ 12ನೇ ಅಧಿವೇಶನದಲ್ಲಿ ಶಾಸಕರಾಗಿ  ಪ್ರಮಾಣ ವಚನ ಸ್ವೀಕರಿಸಿದರು. ಅಬ್ದುಲ್ಲಾ ಅಹಮದ್ ಬದಾವಿ ನೇತೃತ್ವದ್ಲಲಿ ಆಡಳಿತಾರೂಢ ಬರಿಸಾನ್ ನಾಸಿಯೊನಾಲ್ (ಬಿಎನ್) ಪಕ್ಷ ಮಲೇಷ್ಯಾದ ಇತಿಹಾಸದಲ್ಲೇ ಎರಡನೇ ಬಾರಿಗೆ ಮೂರನೇ ಎರಡರಷ್ಟು ಬಹುಮತ ಗಳಿಸಿತು.

2008: ಪ್ರತಿಷ್ಠಿತ ಫೋರ್ಬ್ಸ್ ಪತ್ರಿಕೆಯ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಸ್ಥಾನ ಗಳಿಸಿದ್ದಾನೆ! ಸೌಂದರ್ಯ ಅಥವಾ ಆಕರ್ಷಕ ಪುರುಷ ಎಂಬ ಕಾರಣಕ್ಕಾಗಿ ಅಲ್ಲ, ದೇಶಭ್ರಷ್ಟತೆಯ ಕಾರಣಕ್ಕಾಗಿ. ಫೋರ್ಬ್ಸ್ ತಯಾರಿಸಿದ ವಿಶ್ವದ ಪ್ರಮುಖ ಹತ್ತು ದೇಶಭ್ರಷ್ಟರ ಪಟ್ಟಿಯಲ್ಲಿ ಅಲ್ ಖೈದಾದ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್  ಮೊದಲ ಸ್ಥಾನದಲ್ಲಿದ್ದರೆ, ಮುಂಬೈ ಮೂಲದ ದಾವೂದ್ ಇಬ್ರಾಹಿಂ ಮತ್ತು ಆತನ `ಡಿ' ಕಂಪನಿ ನಾಲ್ಕನೇ ಸ್ಥಾನ ಗಳಿಸಿತು. 1993ರ ಮುಂಬೈ ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ಎನ್ನಲಾದ ಭೂಗತ ದೊರೆ ದಾವೂದ್ (52) ಈಗ ಪಾಕಿಸ್ಥಾನದಲ್ಲಿ ಇರಬಹುದು ಎಂಬ ಶಂಕೆ ಇದ್ದು, ಈತ ಅಲ್ ಖೈದಾ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಅಮೆರಿಕ ಘೋಷಿಸಿದೆ.  ಪೊಲೀಸರಿಗೆ ತನ್ನ ಗುರುತು ಸಿಗಬಾರದೆಂದು ದಾವೂದ್ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರಬಹುದೆಂದೂ `ಫೋರ್ಬ್ಸ್' ಹೇಳಿತು.

2008: ತನ್ನ ಸ್ವಂತ ಮಗಳನ್ನೇ 24 ವರ್ಷಗಳ ಕಾಲ ಮನೆಯಲ್ಲಿ ಸೆರೆಯಾಗಿಟ್ಟು, ಮಗಳಿಗೇ 7 ಮಕ್ಕಳನ್ನು ಕರುಣಿಸಿದ ಆಸ್ಟ್ರೇಲಿಯಾದ 73 ವರ್ಷದ ಜೋಸೆಫ್ ಎಂಬ ತಂದೆಯೊಬ್ಬ ಇದೀಗ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದು ತನ್ನ `ಪಾಪಕೃತ್ಯ'ಕ್ಕೆ ಪಶ್ಚಾತ್ತಾಪ ಪಟ್ಟಿದ್ದಾನೆ ಎಂದು ಆಸ್ಟ್ರಿಯಾ ಸುದ್ದಿ ವಾಹಿತಿನಯೊಂದು ವರದಿ ಮಾಡಿತು. ತಂದೆಯಿಂದಲೇ ಮಕ್ಕಳನ್ನು ಪಡೆದಿರುವ ಮಗಳು ಎಲಿಜಬೆತ್ ಫ್ರಿಜ್ ಹಾಗೂ ಆಕೆಯ ಮಕ್ಕಳು  ಸೆರೆಯಾಗಿರುವ ಸ್ಥಳವನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದು ವರದಿ ಹೇಳಿತು.

 2008:  ಚೀನಾದ ಪೂರ್ವ ಭಾಗದ ಶಾಂಡೊಂಗ್ ಪ್ರಾಂತ್ಯದಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಪಕ್ಷ 60 ಮಂದಿ ಸತ್ತು 400ಕ್ಕೂ ಹೆಚ್ಚು ಮಂದಿ ಗಾಯಗೊಂಡರು. 57 ಜನರು ಸ್ಥಳದಲ್ಲಿಯೇ ಮೃತರಾದರೆ ಮೂವರು ಆಸ್ಪತ್ರೆಯಲ್ಲಿ ಅಸು ನೀಗಿದರು. ಬೀಜಿಂಗಿನಿಂದ ಕ್ವಿಂಗಾಡೊಗೆ ತೆರಳುತ್ತಿದ್ದ ಪ್ರಯಾಣಿಕರ ರೈಲು ಹಳಿ ತಪ್ಪಿ ಯಂತಾಯಿ  ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತು.

2008: ಪಾಕಿಸ್ಥಾನದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪನೆಗೆ ನಡೆಸಿದ ಹೋರಾಟಕ್ಕಾಗಿ ಮಾಜಿ ಪ್ರಧಾನಿ ದಿ. ಬೆನಜೀರ್ ಭುಟ್ಟೊ ಅವರಿಗೆ ಪ್ರತಿಷ್ಠಿತ  ತಿಪ್ಪೆರರಿ ಅಂತಾರಾಷ್ಟ್ರೀಯ ಶಾಂತಿ ಪ್ರಶಸ್ತಿಯನ್ನು ಮರಣೋತ್ತರವಾಗಿ      ನೀಡಲಾಯಿತು. ಭುಟ್ಟೊ ಅವರ ದೀರ್ಘ ಕಾಲದ ನಿಕಟವರ್ತಿ ಬಶೀರ್ ರೈಜಾ ಅವರು ಭುಟ್ಟೊ ಕುಟುಂಬದ ಪರವಾಗಿ ಐರ್ಲೆಂಡಿನಲ್ಲಿ ನಡೆದ  ಹೃದಯಸ್ಪರ್ಶಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡರು.

2008: ಕರ್ನಾಟಕದಲ್ಲಿನ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಘವು ಸಲ್ಲಿಸಿದ್ದ `ಸೂತ್ರ'ಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತು. ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಘವು ವೈದ್ಯಕೀಯ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಳೆದ ವರ್ಷ ಜಾರಿಗೆ ತಂದಿದ್ದ `ಸೂತ್ರ'ವನ್ನೇ ಒಪ್ಪಿಕೊಂಡಿವೆ ಎಂದು ನ್ಯಾಯಮೂರ್ತಿ ಬಿ.ಎನ್.ಅಗರವಾಲ್ ನೇತೃತ್ವದ ನ್ಯಾಯಪೀಠವು ತಿಳಿಸಿತು.

2008: ರೋಗಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಡಾ. ಪ್ರಕಾಶ್ ಕಪಾಟೆ ಅವರಿಗೆ ಒಂದು ವರ್ಷ ಶಿಕ್ಷೆ ಮತ್ತು ಎರಡು ಸಾವಿರ ರೂಪಾಯಿ ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ನೀಡಿತು. ಕ್ಯಾನ್ಸರಿನಿಂದ ಬಳಲುತ್ತಿದ್ದ ಚಿಂತಾಮಣಿಯ ಐಮರೆಡ್ಡಿಹಳ್ಳಿಯ ರಾಮಣ್ಣ ಎಂಬುವರು 2000ನೇ ಸಾಲಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ರಾಮಣ್ಣ ಅವರಿಗೆ ರೆಡಿಯೋಥೆರೆಫಿ ಮಾಡಲು ಪ್ರಕಾಶ್ ಎರಡು ಸಾವಿರ ರೂಪಾಯಿ ಲಂಚ ಕೇಳಿದ್ದರು. ಈ ಬಗ್ಗೆ ರಾಮಣ್ಣ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಒಂದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ್ದ ತನಿಖಾ ತಂಡ ಪ್ರಕಾಶ್ ಅವರನ್ನು ಬಂಧಿಸಿತ್ತು. ಲೋಕಾಯುಕ್ತದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೈ.ಆರ್. ಜಗದೀಶ್ ವಾದ ಮಂಡಿಸಿದ್ದರು. ವಿಶೇಷ ನ್ಯಾಯಾಧೀಶರಾದ ಆರ್.ಎಂ. ಶೆಟ್ಟರ್ ಅವರು ಮೇಲಿನ ಆದೇಶ ನೀಡಿದರು.

2006: ಎಚ್. ಟಿ. ಮೀಡಿಯಾ ಲಿಮಿಟೆಡ್ ಉಪಾಧ್ಯಕ್ಷೆ ಶೋಭನಾ ಭಾರ್ತಿಯಾ ಮತ್ತು ಪಯೋನೀರ್ ಸಂಪಾದಕ ಚಂದನ್ ಮಿತ್ರ ಅವರನ್ನು ರಾಜ್ಯಸಭಾ ಸದಸ್ಯರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿತು. ಸಾರ್ವಜನಿಕ ಹಿತಾಸಕ್ತಿ ವ್ಯಾಜ್ಯಗಳ ಕೇಂದ್ರ (ಸಿಪಿಐಎಲ್) ತನ್ನ ಅರ್ಜಿಯಲ್ಲಿ ಮೇಲ್ಮನೆಗೆ ಮಾಡಲಾದ ಇವರಿಬ್ಬರ ನಾಮಕರಣ ಸಂವಿಧಾನದ 80 (3) ವಿಧಿಯಡಿಯಲ್ಲಿ ಸೂಚಿತವಾಗಿರುವ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಮಾಜ ಸೇವೆ ಈ ವರ್ಗಗಳ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತ್ತು. ನ್ಯಾಯಮೂರ್ತಿ ರುಮಾ ಪಾಲ್ ನೇತೃತ್ವದ ಪೀಠವು ಸಮಾಜ ಸೇವೆ ಶಬ್ಧದ ಅರ್ಥವ್ಯಾಪ್ತಿ ಇಂತಹ ಪ್ರಕರಣಗಳು ಒಳಗೊಳ್ಳುವಷ್ಟು ವಿಶಾಲವಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದರು.

2006: ಯುತ್ ಐಕಾನ್ ಹೆಸರಿನ ಮೊಹರು ಮಾಡಲಾದ ಸ್ಪೈಟ್ ಬಾಟಲಿಯೊಳಗೆ ಸತ್ತ ಕೀಟಗಳು ಇದ್ದುದಕ್ಕಾಗಿ 1.20 ಲಕ್ಷ ರೂಪಾಯಿಗಳ ಪರಿಹಾರವನ್ನು ಗ್ರಾಹಕನಿಗೆ ನೀಡುವಂತೆ ದೆಹಲಿಯ ಗ್ರಾಹಕ ನ್ಯಾಯಾಲಯವೊಂದು ಕೋಕಾ-ಕೋಲಾ ಕಂಪೆನಿಗೆ ಆದೇಶಿಸಿತು.

2006: ಹೌ ಓಪಲ್ ಮೆಹ್ತಾ ಗಾಟ್ ಕಿಸ್ಡ್, ಗಾಟ್ ವೈಲ್ಡ್ ಅಂಡ್ ಗಾಟ್ ಎ ಲೈಫ್ ಕಾದಂಬರಿ ಕರ್ತೃ ಭಾರತೀಯ ಮೂಲದ ಲೇಖಕಿ ಕಾವ್ಯ ವಿಶ್ವನಾಥನ್ ಕೃತಿಚೌರ್ಯ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕಾದಂಬರಿ ಪ್ರಕಟಿಸಿದ ಪ್ರಕಾಶನ ಸಂಸ್ಥೆಯ ಲಿಟ್ಲ್ ಬ್ರೌನ್ ಕಾದಂಬರಿಯ ಎಲ್ಲ ಪ್ರತಿಗಳನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯಲು ನಿರ್ಧರಿಸಿತು. 

2006: ಪಣಜಿ ಸಮೀಪದ ವಾಸೊದಲ್ಲಿ ಭಾರತೀಯ ಕರಾವಳಿ ಕಾವಲು ಪಡೆಗೆ ಅತ್ಯಂತ ದೊಡ್ಡದಾದ ಅತ್ಯಾಧುನಿಕ ಕರಾವಳಿ ಕಡಲು ಪಹರೆ ನೌಕೆ 105 ಮೀಟರ್ ಉದ್ದದ ಐಜಿಜಿಎಸ್ ಸಂಕಲ್ಪ ಸೇರ್ಪಡೆಗೊಂಡಿತು.

2006: ಲಾಟರಿ ಟಿಕೆಟ್ಟುಗಳ ಮಾರಾಟದ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ವಿಧಿಸುವಂತಿಲ್ಲ ಎಂದು ಭಾರತದ ಸುಪ್ರೀಂಕೋರ್ಟ್ ತೀರ್ಪು ನೀಡಿತು. ನ್ಯಾಯಮೂರ್ತಿ ರುಮಾ ಪಾಲ್ ನೇತೃತ್ವದ ಪಂಚಸದಸ್ಯ ಸಂವಿಧಾನ ಪೀಠವು 1986ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ  ತೀರ್ಪನ್ನು ತಳ್ಳಿಹಾಕಿ ಈ ತೀರ್ಪನ್ನು ನೀಡಿತು. ಲಾಟರಿ ಟಿಕೆಟ್ಟುಗಳ ಮಾರಾಟವನ್ನು ವಸ್ತುಗಳ ಮಾರಾಟಕ್ಕೆ ಸಮಾನವಾಗಿ ನೋಡಲಾಗದು. ಆದ್ದರಿಂದ ಅದರ ಮೇಲೆ ತೆರಿಗೆ ವಿಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ ಹೇಳಿತು. ಲಾಟರಿ ಟಿಕೆಟ್ಟುಗಳ ಮಾರಾಟದ ಮೇಲೆ ತೆರಿಗೆ ವಿಧಿಸಬಹುದು ಎಂದು 1986ರಲ್ಲಿ ನೀಡಲಾಗಿದ್ದ ತನ್ನ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಹೇಳಿತ್ತು. 

1946: ಭಾಷೆ ಹಾಗೂ ಕೋಶ ವಿಜ್ಞಾನಿ, ಸಂಶೋಧಕ ಪ್ರೊ. ಎ.ವಿ. ನಾವಡ ಅವರು ಮಂಗಳೂರು ಸಮೀಪದ ಕೋಟೆಕಾರಿನಲ್ಲಿ ಕವಿ ಅಮ್ಮೆಂಬಳ ಶಂಕರನಾರಾಯಣ ನಾವಡ- ಪಾರ್ವತಿ ದಂಪತಿಯ ಪುತ್ರರಾಗಿ ಜನಿಸಿದರು. 

1945: ಇಟೆಲಿಯ ಸರ್ವಾಧಿಕಾರಿ ಬೆನಿಟೋ ಮುಸ್ಸೋಲಿನಿ ಮತ್ತು ಆತನ ಪ್ರೇಯಸಿ ಕ್ಲಾರಾ ಪೆಟಾಸ್ಸಿಯನ್ನು ಅವರು ರಾಷ್ಟ್ರದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಕೊಲ್ಲಲಾಯಿತು. ತಲೆಕೆಳಗಾಗಿ ನೇತಾಡುತ್ತಿದ್ದ ಅವರ ಶವಗಳು ಮಿಲಾನಿನ ಪಿಯಾಝಾ ಲೊರೆಟೊದಲ್ಲಿ ಪತ್ತೆಯಾದವು.

1937: ಇರಾಕಿನ ಪದಚ್ಯುತ ಅಧ್ಯಕ್ಷ ಸದ್ದಾಂ ಹುಸೇನ್ ಜನ್ಮದಿನ. 1979ರಿಂದ ಇತ್ತೀಚೆಗೆ ಅಮೆರಿಕ ಪಡೆಗಳು ದಾಳಿ ನಡೆಸುವವರೆಗೂ ಈತ ಇರಾಕಿನ ಅಧ್ಯಕ್ಷನಾಗಿದ್ದ.

1928: ಇ.ಎಂ. ಶೂಮೇಕರ್ (1928-97) ಹುಟ್ಟಿದ ದಿನ.  ಅಮೆರಿಕದ ಖಭೌತ ತಜ್ಞನಾದ ಈತ ಚಂದ್ರನ ಮಣ್ಣಿನ ಪದರ ಹಾಗೂ ಒಡೆದ ಕಲ್ಲುಗಳಿಗೆ `ರಿಗೋಲಿತ್' ಎಂದು ಹೆಸರಿಟ್ಟ. 1994ರಲ್ಲಿ ಗುರುಗ್ರಹಕ್ಕೆ ಡಿಕ್ಕಿ ಹೊಡೆದ ಪಿ/ಶೂಮೇಕರ್-ಲೆವಿ 9 ಧೂಮಕೇತುವನ್ನೂ ಈತ ಸಂಶೋಧಿಸಿದ.

1924: ಕೆನ್ನೆತ್ ಕೌಂಡಾ ಜನ್ಮದಿನ. 1961ರಲ್ಲಿ ಜಾಂಬಿಯಾಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಈತ 1991ರವರೆಗೂ ಅಲ್ಲಿನ ಅಧ್ಯಕ್ಷನಾಗಿದ್ದ.

1865: ಸ್ಯಾಮುಯೆಲ್ ಕ್ಯುನಾರ್ಡ್ 77ನೇ ವಯಸಿನಲ್ಲಿ ಮೃತನಾದ. ಬ್ರಿಟಿಷ್ ವರ್ತಕನಾದ ಈತ ಬ್ರಿಟಿಷ್ ಸ್ಟೀಮ್ ಶಿಪ್ ಕಂಪೆನಿಯ ಸ್ಥಾಪಕ. ಈ ಕಂಪೆನಿಗೆ ಆತನ ಹೆಸರನ್ನೇ ಇಡಲಾಗಿತ್ತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Monday, April 27, 2009

Do you Know Sambar deer ?

Do you Know Sambar deer ?

Some days back Mr. Mohan Pai wrote about the Mouse deer, the smallest deer in the world.This time he wrote about the Sambar deer, The largest of India's deers with grandest horns! Enjoy and enlighten yourself  by going through it. Click the images below for larger view.

Mohan Pai's  book on Goa Temples:

Book entitled "The Flight of Gods - Hindu Temples and Shrines of Goa" is being serialised in Mohan Pai's blogs. Those of you who may be interested in the topic may log on to any one of the following links:








ಇಂದಿನ ಇತಿಹಾಸ History Today ಏಪ್ರಿಲ್ 27

ಇಂದಿನ ಇತಿಹಾಸ

ಏಪ್ರಿಲ್ 27

ಜಗತ್ತಿನ ಅತಿ ಕಿರಿಯ ಪೈಲಟ್ ಮತ್ತು ಅತಿ ಕಿರಿಯ ಗಗನಯಾತ್ರಿ ಎಂಬ ಕೀರ್ತಿಗೆ ಪಾತ್ರರಾದ ಬೆಂಗಳೂರು ನಗರದ ಶ್ರೀಯಾ ದಿನಕರ್ ಅವರಿಗೆ ಭವಿಷ್ಯದ ಶಿಕ್ಷಣಕ್ಕಾಗಿ ಸ್ಲೋವೆನಿಯಾದ ವರ್ಲ್ಡ್ ಆಫ್ ಆರ್ಟ್ ಯೂರೋಪ್ ಸಂಸ್ಥೆ ಒಂದು ಲಕ್ಷ ಯೂರೋಗಳನ್ನು ದೇಣಿಗೆಯಾಗಿ ನೀಡಿತು. ಬೆಂಗಳೂರಿನ ವರ್ಡ್ ಆರ್ಟ್ಫೌಂಡೇಶನ್ ಮತ್ತು ವರ್ಡ್ ಆಫ್ ಆರ್ಟ್ ಯೂರೋಪ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಕಬ್ಬನ್ ಉದ್ಯಾನದ ಬಾಲಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಕಲಾ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಶ್ರೀಯಾ ಬಹುಮಾನದ ಚೆಕ್ ಸ್ವೀಕರಿಸಿದರು.

2008: ಆಫ್ಘಾನಿಸ್ಥಾನ ಅಧ್ಯಕ್ಷ ಹಮೀದ್ ಕರ್ಜೈ ಅವರ ಹತ್ಯೆಗೆ ಕಾಬೂಲಿನಲ್ಲಿ ತಾಲಿಬಾನ್ ಉಗ್ರಗಾಮಿಗಳು ಗುಂಡು ಮತ್ತು ರಾಕೆಟ್ ದಾಳಿಮೂಲಕ ಯತ್ನಿಸಿದರು. ಆದರೆ ಕರ್ಜೈ ಪ್ರಾಣಾಪಾಯವಿಲ್ಲದೆ ಪಾರಾದರು. ದೇಶದಲ್ಲಿ ಕಮ್ಯುನಿಸ್ಟ್ ಸರ್ಕಾರ ಪತನಗೊಂಡು, ಆಡಳಿತ ಮುಜಾಹಿದೀನ್ ಗಳ ವಶವಾದ 16ನೇ ವರ್ಷಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ಜೈ ಮತ್ತು ಅವರ ಸಚಿವ ಸಹದ್ಯೋಗಿಗಳು, ರಾಜತಾಂತ್ರಿಕರು, ಉನ್ನತ ಮಟ್ಟದ ಅಧಿಕಾರಿಗಳು, ಮಾಜಿ ಯುದ್ಧ ವೀರರು ಭಾಗವಹಿಸಿದ್ದಾಗ ಈ ದಾಳಿ ನಡೆಯಿತು. ತಕ್ಷಣ ಜಾಗೃತಗೊಂಡ ಸೇನಾ ಸಿಬ್ಬಂದಿ ಕೆಲವು ಶಂಕಿತರನ್ನು ಬಂಧಿಸಿದರು. ದಾಳಿಯಲ್ಲಿ ಒಬ್ಬ ನಾಗರಿಕ ಮೃತನಾಗಿ, ಸಂಸದ ಸೇರಿದಂತೆ 11 ಮಂದಿ ಗಾಯಗೊಂಡರು. ಈ ದಾಳಿಗೆ ತಾನೇ ಕಾರಣ ಎಂದು ಹೊಣೆ ಹೊತ್ತುಕೊಂಡ ತಾಲಿಬಾನ್, ತನ್ನ ಕಡೆಯ ಮೂವರು ಯೋಧರು ಈ ಸಂದರ್ಭದಲ್ಲಿ ಸತ್ತರು.

 2008: ಭಾರತೀಯ ಮೂಲದ ಉಕ್ಕು ದೊರೆ ಲಕ್ಷ್ಮಿ ಮಿತ್ತಲ್ ಯೂರೋಪಿನ ಅತ್ಯಂತ ಶ್ರೀಮಂತ ವ್ಯಕ್ತಿ. ಅವರ ಒಟ್ಟು ಆಸ್ತಿ 27.7 ಶತಕೋಟಿ ಪೌಂಡ್ ಮೌಲ್ಯದಷ್ಟಿದ್ದು,  ಬ್ರಿಟನ್ನಿನ ಅತಿ ಶ್ರೀಮಂತ ಉದ್ಯಮಿ ಎನ್ನುವ ಹೆಗ್ಗಳಿಕೆಗೆ ಸತತ ನಾಲ್ಕನೇ ವರ್ಷವೂ ಭಾಜನರಾಗಿದ್ದಾರೆ ಎಂದು ವಿಶ್ವದ ಅತಿ ದೊಡ್ಡ ಶ್ರೀಮಂತರ ಪಟ್ಟಿ ಸಿದ್ಧಪಡಿಸಿದ `ಸಂಡೆ ಟೈಮ್ಸ್' ಪತ್ರಿಕೆ ತಿಳಿಸಿತು. ಒಂದು ವರ್ಷದಲ್ಲಿ 8.5 ಶತಕೋಟಿ  ಪೌಂಡುಗಳಷ್ಟು ಸಂಪತ್ತು ವೃದ್ಧಿ ಕಂಡ ಮಿತ್ತಲ್, ವಿಶ್ವದ  ಕುಬೇರರ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದರು. ಅಂಬಾನಿ ಸಹೋದರರಾದ ಮುಖೇಶ್ ಹಾಗೂ ಅನಿಲ್ ಅವರ  ಒಟ್ಟು ಆಸ್ತಿ ಸೇರಿಸಿದರೆ ಅವರೇ ಜಗತ್ತಿನ ಅತಿ ದೊಡ್ಡ ಶ್ರೀಮಂತರಾಗುತ್ತಾರೆ. ಇವರ ಆಸ್ತಿ ಮೌಲ್ಯ 43 ಶತಕೋಟಿ ಪೌಂಡ್. ಇದು ಅಮೆರಿಕದ ವಾಲ್ ಮಾರ್ಟ್ ನ ಒಡೆಯರಾದ ವಾಲ್ಟನ್ ಕುಟುಂಬದ 38.4 ಶತಕೋಟಿ ಪೌಂಡ್ ಹಾಗೂ ಮೈಕ್ರೋಸಾಫ್ಟ್ ನ ಮುಖ್ಯಸ್ಥ ಬಿಲ್ ಗೇಟ್ಸ್ ಅವರ  29 ಶತಕೋಟಿ ಪೌಂಡಿಗಿಂತಲೂ ಹೆಚ್ಚು ಎಂದು ವರದಿ ಹೇಳಿತು.

2008: ಬೆಳಗಾವಿ ರೋಲರ್ ಸ್ಕೇಟಿಂಗ್ ಅಕಾಡೆಮಿಯ ಏಳು ವರ್ಷದ ಬಾಲಕ ಅನಿಕೇತ ರಮೇಶ  ಚಿಂಡಕ ಬೆಳಗಾವಿಯ ಆದರ್ಶನಗರದಲ್ಲಿ 82 ಟಾಟಾ ಸುಮೋ ವಾಹನಗಳಡಿ ಲಿಂಬೋ ಸ್ಕೇಟಿಂಗ್ ಮೂಲಕ ತೂರಿಬಂದು ದಾಖಲೆ ನಿರ್ಮಿಸಿದನು. ರೋಟರಿ ಕ್ಲಬ್ ಆಫ್ ಬೆಳಗಾವಿ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 57 ಸೆಕೆಂಡುಗಳಲ್ಲಿ 82 ಟಾಟಾ ಸುಮೋ ವಾಹನಗಳಡಿ ತೂರಿಬಂದು ತನ್ನ ಹಿಂದಿನ ದಾಖಲೆಯನ್ನು  ಅನಿಕೇತ ಮುರಿದನು. 2007ರ ಫೆಬ್ರುವರಿ 28 ರಂದು ಬೆಳಗಾವಿ ನಗರದಲ್ಲಿ 45.31 ಸೆಕೆಂಡುಗಳಲ್ಲಿ 57 ಟಾಟಾ ಸುಮೋ ವಾಹನಗಳಡಿ ತೂರಿಬಂದು ಬೆರಗುಗೊಳಿಸಿದ್ದ ಬಾಲಕ ಈದಿನ ಮಧ್ಯಾಹ್ನ 53 ಸೆಕೆಂಡುಗಳಲ್ಲಿ 81 ಸುಮೋ ವಾಹನಗಳಡಿ ತೂರಿಬಂದನು. ಬಳಿಕ 82 ವಾಹನಗಳಡಿ ತೂರಿಬಂದು ತನ್ನ ದಾಖಲೆಯನ್ನು ಮತ್ತಷ್ಟು ಎತ್ತರಕ್ಕೆ ಒಯ್ದನು. `ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ' ನಿರ್ದೇಶಕ ಸುರೇಶ ಹರ್ಮಿಲಾ, ಯೋಜನಾ ಅಧಿಕಾರಿ ಎಂ.ಎಸ್. ತ್ಯಾಗಿ ಹಾಗೂ ರೋಲ್ ಬಾಲ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯದರ್ಶಿ ರಾಜು ದಾಬಡೆ ಅವರು ಅನಿಕೇತ ಚಿಂಡಕ ಸಾಧನೆಯನ್ನು ದಾಖಲು ಮಾಡಿಕೊಂಡರು. ಅನಿಕೇತನ ಪ್ರತಿಭೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ನಗರದಲ್ಲಿ ಸುಮಾರು ಒಂದು ಲಕ್ಷ ರೂ. ವೆಚ್ಚದಲ್ಲಿ ಸ್ಕೇಟಿಂಗ್ ಟ್ರ್ಯಾಕ್ ನಿರ್ಮಿಸಲಾಗಿತ್ತು. 100ಕ್ಕೂ ಹೆಚ್ಚು ಸುಮೋ ವಾಹನಗಳನ್ನು ಬಾಡಿಗೆಗೆ  ಪಡೆಯಲಾಗಿತ್ತು. ಲಿಂಬೋ ಸ್ಕೇಟಿಂಗ್ ದೃಶ್ಯ ವೀಕ್ಷಣೆಗೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು   ಜಮಾಯಿಸಿದ್ದರು. ಅನಿಕೇತ ಈ ಕಿರಿಯ ವಯಸ್ಸಿನಲ್ಲೇ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ 300ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿದ್ದಾನೆ. ಲಿಂಬೋ ಸ್ಕೇಟಿಂಗ್ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಈ ಬಾಲಕನಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

2008: ಚಿತ್ರನಟ ಜೈಜಗದೀಶ್ ಅವರು ಮಡಿಕೇರಿಯಲ್ಲಿ ನಡೆದ ಬಿಜೆಪಿ ಬಹಿರಂಗಸಭೆಯಲ್ಲಿ ಸುಷ್ಮಾ ಸ್ವರಾಜ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಬಿಎಸ್ಪಿಯಿಂದ ಮಡಿಕೇರಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಜೈಜಗದೀಶ್, `ಬಿ' ಫಾರಂ ಗೊಂದಲದಿಂದ ನಾಮಪತ್ರ ತಿರಸ್ಕೃತವಾದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದರು. 

2008: ಮೈಸೂರು ನಗರದ ಅಪರಾಧ ಪತ್ತೆ ದಳದ ಪೊಲೀಸರು ಮತ್ತು ಮಣಿಪುರಿ ಪೊಲೀಸರು ಜಂಟಿ ಕಾರ್ಯಾಚರಣೆ ಮೈಸೂರಿನ ವಸತಿ ಗೃಹವೊಂದರಲ್ಲಿದ್ದ 6 ಮಂದಿ ಶಂಕಿತ ಉಲ್ಫಾ ಉಗ್ರಗಾಮಿಗಳನ್ನು ಬಂದಿಸಿದರು. ಈಶಾನ್ಯ ರಾಜ್ಯದ 6 ಮಂದಿಯನ್ನು ವಶಕ್ಕೆ ತೆಗೆದುಕೊಂಡದ್ದನ್ನು ನಗರ ಪೊಲೀಸ್ ಆಯಕ್ತ ಡಾ.ಪಿ.ರವೀಂದ್ರನಾಥ್ ದೃಢಪಡಿಸಿದರು.

 2008: ಜಗತ್ತಿನ ಅತಿ ಕಿರಿಯ ಪೈಲಟ್ ಮತ್ತು ಅತಿ ಕಿರಿಯ ಗಗನಯಾತ್ರಿ ಎಂಬ ಕೀರ್ತಿಗೆ ಪಾತ್ರರಾದ ಬೆಂಗಳೂರು ನಗರದ ಶ್ರೀಯಾ ದಿನಕರ್ ಅವರಿಗೆ ಭವಿಷ್ಯದ ಶಿಕ್ಷಣಕ್ಕಾಗಿ ಸ್ಲೋವೆನಿಯಾದ ವರ್ಲ್ಡ್ ಆಫ್ ಆರ್ಟ್ ಯೂರೋಪ್ ಸಂಸ್ಥೆ ಒಂದು ಲಕ್ಷ ಯೂರೋಗಳನ್ನು ದೇಣಿಗೆಯಾಗಿ ನೀಡಿತು. ಬೆಂಗಳೂರಿನ ವರ್ಡ್ ಆರ್ಟ್ಫೌಂಡೇಶನ್ ಮತ್ತು ವರ್ಡ್ ಆಫ್ ಆರ್ಟ್ ಯೂರೋಪ್ ಸಂಸ್ಥೆಗಳ ಸಹಯೋಗದಲ್ಲಿ ಬೆಂಗಳೂರಿನ ಕಬ್ಬನ್ ಉದ್ಯಾನದ ಬಾಲಭವನದಲ್ಲಿ ನಡೆದ ಅಂತಾರಾಷ್ಟ್ರೀಯ ಕಲಾ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಶ್ರೀಯಾ ಬಹುಮಾನದ ಚೆಕ್ ಸ್ವೀಕರಿಸಿದರು. ವರ್ಲ್ಡ್ ಆಫ್ ಆರ್ಟ್ ಯೂರೋಪ್ ನಿರ್ದೇಶಕರಾದ ಮಿಹಾಲಿಯೋ ಲಿಸಾನಿನ್ ಮತ್ತು ಬೊಜಿಕಾ ಹ್ರೊಸೇವೆಕ್ ಬಹುಮಾನದ ಚೆಕ್ ಹಸ್ತಾಂತರಿಸಿದರು. ವರ್ಲ್ಡ್ ಆಫ್ ಆರ್ಟ್ ಯೂರೋಪ್ ಆಯೋಜಿಸಿದ್ದ ಅಂತಾರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀಯಾ ದಿನಕರ್ ಪ್ರಥಮ ಬಹುಮಾನ ಗಳಿಸಿದ್ದರು. ಬಹುಮಾನಿತ ಕೃತಿ 77 ಲಕ್ಷ ರೂಪಾಯಿಗೆ ಮಾರಾಟವಾಗಿದ್ದು, ಈ ಹಣವನ್ನು ಅವರು ಸ್ವಯಂಸೇವಾ ಸಂಸ್ಥೆಯೊಂದಕ್ಕೆ ನೀಡಿದ್ದರು.
ಜಗತ್ತಿನ ಕಿರಿಯ ಚಿತ್ರ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಮಾಸ್ಟರ್ ಕಿಶನ್ ಸೇರಿದಂತೆ ಹಲವು ಕಿರಿಯ ಕಲಾವಿದರಿಗೆ ಈ ಸಂದರ್ಭದಲ್ಲಿ `ಲಿಯೋನಾರ್ಡೊ ಡಾ ವಿಂಚಿ ಅಂತಾರಾಷ್ಟ್ರೀಯ ಕಲಾ ಪ್ರಶಸ್ತಿ'ಯನ್ನು ಪ್ರದಾನ ಮಾಡಲಾಯಿತು.

2007: ಗಾಲಿ ಕುರ್ಚಿಗೆ ಅಂಟಿಕೊಂಡೇ ಜೀವಿಸುತ್ತಿರುವ ಖಭೌತ ವಿಜ್ಞಾನಿ ಸ್ಟೀಫನ್ ಹಾಕಿನ್ಸ್ ಅವರು `ಬಾಹ್ಯಾಕಾಶದಲ್ಲಿ ತೂಕರಹಿತ ಅನುಭವ'ದ ತಮ್ಮ ಕನಸನ್ನು ನನಸಾಗಿಸಿಕೊಂಡರು. ಫ್ಲಾರಿಡಾ ಮೂಲದ ಜೀರೋ ಗ್ರಾವಿಟಿ ಕಾರ್ಪೊರೇಷನ್ ಬೋಯಿಂಗ್ 747 ವಿಮಾನದಲ್ಲಿ ಶೂನ್ಯ ಗುರುತ್ವಾಕರ್ಷಣೆ ನಿರ್ಮಿಸಿ ಸ್ಟೀಫನ್ ಅವರಿಗೆ ಈ ವಿಶಿಷ್ಟ ಅನುಭವ ದಕ್ಕುವಂತೆ ಮಾಡಿತು. `ವೊರ್ಮಿಟ್ ಕಾಮೆಟ್' ಹೆಸರಿನ ಪರಿವರ್ತಿತ ವಿಮಾನದಲ್ಲಿ ಅಟ್ಲಾಂಟಿಕ್ ಸಾಗರದ ಮೇಲೆ ಸಾಗುವಾಗ ಈ ಅನುಭವವನ್ನು ಹಾಕಿನ್ಸ್ ಪಡೆದರು. 9,754 ಮೀಟರ್ (32,000 ಅಡಿ ಎತ್ತರಕ್ಕೆ ಏರಿ 7315 ಮೀಟರಿನಷ್ಟು ಕೆಳಕ್ಕೆ ವಿಶಿಷ್ಟ ರೀತಿಯಲ್ಲಿ ಬರುವಾಗ ಹಾಕಿನ್ಸ್ ಜೊತೆಗಿದ್ದ ವೈದ್ಯರು ಮತ್ತು ದಾದಿಯರೂ ಈ ತೂಕರಹಿತ ಅನುಭವ ಪಡೆದರು.

2007: ಬ್ರಿಟಿಷರ ಒಡೆದು ಆಳುವ ಕುಟಿಲ ನೀತಿಯಿಂದಾಗಿಯೇ ಗೋಹತ್ಯೆ ಕಾಯ್ದೆ ಜಾರಿಗೆ ಬಂತು ಎಂದು ಸ್ವದೇಶೀ ಬಚಾವೋ ಆಂದೋಲನದ ನೇತಾರ ರಾಜೀವ ದೀಕ್ಷಿತ್ ಶಿವಮೊಗ್ಗದ ಹೊಸನಗರದಲ್ಲಿ ಶ್ರೀರಾಮಚಂದ್ರಾಪುರ ಮಠ ಸಂಘಟಿಸಿದ ವಿಶ್ವ ಗೋ ಸಮ್ಮೇಳನದಲ್ಲಿ ಅಭಿಪ್ರಾಯ ಪಟ್ಟರು. ಸಮ್ಮೇಳನದ ಏಳನೇ ದಿನ ಅವರು ಗೋ ಮಹಿಮಾ ಗೋಷ್ಠಿಯಲ್ಲಿ ಪಾಲ್ಗೊಂಡರು.

2007: ನಕಲಿ ಪಾಸ್ ಪೋರ್ಟ್ ಬಳಸಿ ಮಾನವ ಕಳ್ಳಸಾಗಣೆ ನಡೆಸಿದ ಆರೋಪಕ್ಕೆ ಒಳಗಾದ ತೆಲಂಗಾಣ ರಾಷ್ಟ್ರ ಸಮಿತಿ (ಟಿ ಆರ್ ಎಸ್) ಶಾಸಕ ಕೆ. ಲಿಂಗಯ್ಯ ಅವರು ಹೈದರಾಬಾದಿನ 7ನೇ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಶರಣಾಗತರಾದರು.

2007: ಕೃಷ್ಣಾ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಆಂಧ್ರಪ್ರದೇಶ ಸಲ್ಲಿಸಿದ್ದ ಅರ್ಜಿಯನ್ನು ಕೃಷ್ಣಾ ಜಲ ನ್ಯಾಯ ಮಂಡಳಿಯು ವಜಾ ಮಾಡಿತು.

2007: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರನ್ನು ಬಹಿರಂಗವಾಗಿ ಚುಂಬಿಸಿ ವಿವಾದಕ್ಕೆ ಗುರಿಯಾಗಿದ್ದ ಹಾಲಿವುಡ್ ನಟ ರಿಚರ್ಡ್ ಗೇರ್ ಅವರು ಈ ಘಟನೆಗೆ ಕ್ಷಮೆ ಯಾಚಿಸಿದರು. ಯಾವುದೇ ಮನ ನೋಯಿಸುವಂತಹ ತಪ್ಪು ಮಾಡಿದ್ದರೆ ದಯವಿಟ್ಟು ಕ್ಷಮಿಸಿ ಎಂಬುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದರು.

2007: ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ ಇ ಟಿ) ತಮಿಳುನಾಡಿನಲ್ಲಿ ರದ್ದು ಪಡಿಸಿದ ತಮಿಳುನಾಡು ಸರ್ಕಾರದ  ನಿರ್ಣಯವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿಯಿತು.  ತಮಿಳುನಾಡು ಸರ್ಕಾರವು ಅಂಗೀಕರಿಸಿದ ತಮಿಳುನಾಡು (ವೃತ್ತಿ ಶಿಕ್ಷಣ ಸಂಸ್ಥೆಗಳ ಪ್ರವೇಶ) ಕಾಯ್ದೆಯ (2006) ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿತು.

2006: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 6000 ಕೋಟಿ ರೂಪಾಯಿ ಅಂದಾಜು ವೆಚ್ಚದ ಬೆಂಗಳೂರು ಮೆಟ್ರೊ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಮಂಜೂರಾತಿ ನೀಡಿತು. ಇದರೊಂದಿಗೆ 33 ಕಿ.ಮೀ. ಉದ್ದದ ಮೆಟ್ರೊ ರೈಲು ಯೋಜನೆಗೆ ಇದ್ದ ಕೊನೆಯ ಅಡ್ಡಿ ನಿವಾರಣೆ ಆಯಿತು. ಈ ಯೋಜನೆ 2011ಕ್ಕೆ ಪೂರ್ಣಗೊಳ್ಳಬೇಕು.

2006: ಹಿರಿಯ ಸಾಹಿತಿ, ಸಂಶೋಧಕ ಪ್ರೊ. ಎಲ್. ಬಸವರಾಜು ಅವರಿಗೆ ರಾಜ್ಯ ಸರ್ಕಾರದ 2005ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಲಭಿಸಿತು.

2006: ನೇಪಾಳದ ಹಿರಿಯ ಮುಖಂಡ ಗಿರಿಜಾ ಪ್ರಸಾದ್ ಕೊಯಿರಾಲ ಅವರು ನೇಪಾಳ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಅವಿರೋಧ ಆಯ್ಕೆಯಾದರು. ಇದೇ ವೇಳೆಯಲ್ಲಿ ಬಾಲಿವುಡ್ ನಟಿ ಮನಿಶಾ ಕೊಯಿರಾಲ ಅವರ ತಂದೆ, ಪ್ರಕಾಶ ಕೊಯಿರಾಲ ಅವರನ್ನು ನೇಪಾಳ ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಯಿತು. ಈ ಇಬ್ಬರೂ ಧುರೀಣರು ಸಮೀಪ ಸಂಬಂಧಿಗಳು.

2006: ಹಿರಿಯ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರು ಪ್ರತಿಷ್ಠಿತ 2006ನೇ ಸಾಲಿನ ಮಾಸ್ತಿ ಪ್ರಶಸ್ತಿಗೆ ಆಯ್ಕೆಯಾದರು.

2006: ಜಮ್ಮುವಿನ ಭದೇವ್ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ದಾಖಲೆ ಜಯ ಸಾಧಿಸಿದರು. ಎದುರಾಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದ ಅವರು 66,129 ಮತಗಳ ಪೈಕಿ 62,072 ಮತಗಳನ್ನು ಬಗಲಿಗೆ ಹಾಕಿಕೊಂಡರು.

2006: ಗಂಗೊಳ್ಳಿಯಿಂದ ಮಂಗಳೂರಿನವರೆಗೆ ಅರಬ್ಬಿ ಸಮುದ್ರದಲ್ಲಿ 150 ಕಿ.ಮೀ. ದೂರವನ್ನು ಸತತ 24 ಗಂಟೆಗಳ ಕಾಲ ಈಜಿ ಕ್ರಮಿಸುವ ಮೂಲಕ ಬೆಂಗರೆ ದಯಾನಂದ ಖಾರ್ವಿ ಹೊಸ ದಾಖಲೆ ನಿರ್ಮಿಸಿದರು.

2006: ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ ಐ ಎಲ್) 9069 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಖಾಸಗಿ ಕ್ಷೇತ್ರದಲ್ಲಿನ ಭಾರತೀಯ ಕಂಪೆನಿಯೊಂದು ಗಳಿಸಿದ ಅತ್ಯಧಿಕ ಲಾಭ ಇದು ಎಂದು ಆರ್ ಐ ಎಲ್ ಅಧ್ಯಕ್ಷ , ಆಡಳಿತ ನಿರ್ದೇಶಕ ಮುಖೇಶ ಅಂಬಾನಿ ಮುಂಬೈಯಲ್ಲಿ ಪ್ರಕಟಿಸಿದರು.

1960: ರಕ್ಷಣಾ ಪಡೆಗಳ ಉನ್ನತಾಧಿಕಾರಿಗಳಿಗೆ ತರಬೇತಿ ನೀಡುವ ಸಲುವಾಗಿ ನವದೆಹಲಿಯಲ್ಲಿ ನ್ಯಾಷನಲ್ ಡಿಫೆನ್ಸ್ ಕಾಲೇಜನ್ನು ಆರಂಭಿಸಲಾಯಿತು.

1959: ಕಮಾಂಡರ್ ಕವಾಸ್ ಮಣೇಕ್ ಶಾ ನಾನಾವತಿ ತನ್ನ ಬ್ರಿಟಿಷ್ ಪತ್ನಿ ಸಿಲ್ವಿಯಾಳ ಪ್ರಿಯಕರ ಪ್ರೇಮ್ ಅಹುಜಾನನ್ನು ಗುಂಡಿಟ್ಟು ಕೊಂದ. ಈ ಪ್ರಕರಣ ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿತು. ಇದೊಂದು ಅಪಘಾತ ಎಂದು ಬಿಂಬಿಸಿದ ಪರಿಣಾಮವಾಗಿ ಆತನ ಪರ ಅನುಕಂಪದ ಹೊಳೆ ಹರಿಯಿತು. ಮುಂಬೈ ಸೆಷನ್ಸ್ ಕೋರ್ಟ್ ಆತ ನಿರಪರಾಧಿ ಎಂದೂ ತೀರ್ಪಿತ್ತಿತು. ನಂತರ ಸುಪ್ರೀಂಕೋರ್ಟ್ ಅದನ್ನು ತಳ್ಳಿಹಾಕಿ ನಾನಾವತಿ ಅಪರಾಧಿ ಎಂದು ತೀರ್ಪು ನೀಡಿತು. ಈ ಘಟನೆ ನಡೆಯದೇ ಇರುತ್ತಿದ್ದರೆ ನಾನಾವತಿ ಭಾರತದ ಮೊದಲ ಏರ್ ಕ್ರಾಫ್ಟ್ ಕ್ಯಾರಿಯರ್ ಐ ಎನ್ ಎಸ್ ವಿಕ್ರಾಂತ್ ನ ಮೊದಲ ಕಮಾಂಡರ್ ಆಗುತ್ತಿದ್ದ.

1897: ಅಮೋಘ ಭಾಷಣಕಾರ, ಸಾಹಿತ್ಯ, ಪತ್ರಿಕಾರಂಗಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸಿದ ತಿರುಮಲೆ ತಾತಾಚಾರ್ಯ ಶರ್ಮ (ತಿ.ತಾ. ಶರ್ಮ) (27-4-1897 ರಿಂದ 20-10-1973) ಅವರು ಚಿಕ್ಕಬಳ್ಳಾಪುರದ ರಾಜಗುರು ಮನೆತನದಲ್ಲಿ ಶ್ರೀನಿವಾಸ ತಾತಾಚಾರ್ಯ- ಜಾನಕಿಯಮ್ಮ ತಿರುಮಲ ದಂಪತಿಯ ಪುತ್ರರಾಗಿ ಈ ದಿನ ಜನಿಸಿದರು.

1896: ನೈಲಾನ್ ಕಂಡು ಹಿಡಿದ ವ್ಯಾಲೇಸ್ ಹ್ಯೂಂ ಕ್ಯಾರೂತರ್ಸ್ ಈ ದಿನ ಜನಿಸಿದರು.

1882: ಅಮೆರಿಕದ ತತ್ವಜ್ಞಾನಿ, ಕವಿ, ಪ್ರಬಂಧಕಾರ ರಾಲ್ಫ್ ವಾಲ್ಡೊ ಎಮರ್ಸನ್ 78ನೇ ವಯಸ್ಸಿನಲ್ಲಿ ಮೆಸಾಚ್ಯುಸೆಟ್ಸಿನ ಕಾಂಕಾರ್ಡಿನಲ್ಲಿ ಮೃತನಾದ.

1857: ಆಧುನಿಕ ಸಂಖ್ಯಾಶಾಸ್ತ್ರದ ಹರಿಕಾರ ಕಾರ್ಲ್ ಪಿಯರ್ಸನ್ ಜನನ.

1521: ಪೋರ್ಚುಗೀಸ್ ಸಂಶೋಧಕ ಫರ್ಡಿನಾಂಡ್ ಮೆಗೆಲ್ಲನ್ ವಿಶ್ವ ಪರ್ಯಟನೆಗಾಗಿ ಹೊರಟಿದ್ದಾಗ ಫಿಲಿಪ್ಪೀನ್ಸ್ ಜನರಿಂದ ಹತನಾದ. ಫಿಲಿಪ್ಪೀನ್ಸಿನಲ್ಲೇ ಆತ ಹತನಾದರೂ ಆತನ ನೌಕೆ ಬಾಸ್ಕಿನ ಜುವಾನ್ ಸೆಬಾಸ್ಟಿಯನ್ ಡೆಲ್ ಕ್ಯಾನೊ ನೇತೃತ್ವದಲ್ಲಿ ಪಶ್ಚಿಮಾಭಿಮುಖವಾಗಿ ಸ್ಪೇನಿನತ್ತ ಯಾನ ಮುಂದುವರಿಸಿ ಜಗತ್ತಿಗೆ ಸುತ್ತು ಹಾಕಿದ ಮೊದಲ ನೌಕೆ ಎಂಬ ಹೆಗ್ಗಳಿಕೆಯನ್ನು ಪಡೆಯಿತು. 

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, April 26, 2009

ಇಂದಿನ ಇತಿಹಾಸ History Today ಏಪ್ರಿಲ್ 26

ಇಂದಿನ ಇತಿಹಾಸ

ಏಪ್ರಿಲ್ 26

ಸರ್ಕಾರದ ನಿಷೇಧವನ್ನು ಉಲ್ಲಂಘಿಸಿ ಗೋ ಹತ್ಯೆ  ಮಾಡಿ  ಅದರ ಮಾಂಸ ಸೇವಿಸುವುದು ಷರಿಯತ್ ಕಾನೂನು ಪ್ರಕಾರ ಅಕ್ರಮ ಎಂದು ಇಸ್ಲಾಂ  ಧಾರ್ಮಿಕ ಮಂಡಳಿ  ದಾರುಲ್ ಉಲೂಮ್ ಫತ್ವಾ ಹೊರಡಿಸಿತು. ಈ ಸಂಬಂಧ ಮುಜಾಫರ್ ನಗರ ಜಿಲ್ಲೆಯ ಮುಸ್ಲಿಂ ಧರ್ಮಗುರು ಹಾಜಿ ಮೊಹಮ್ಮದ್ ಇಸಾರ್ ಅವರು  ಕೇಳಿದ   ಪ್ರಶ್ನೆಗೆ ದಾರುಲ್ ಉಲೂಮ್ ಈ ಫತ್ವಾ ಹೊರಡಿಸಿತು.  

2008: ಸರ್ಕಾರದ ನಿಷೇಧವನ್ನು ಉಲ್ಲಂಘಿಸಿ ಗೋ ಹತ್ಯೆ  ಮಾಡಿ  ಅದರ ಮಾಂಸ ಸೇವಿಸುವುದು ಷರಿಯತ್ ಕಾನೂನು ಪ್ರಕಾರ ಅಕ್ರಮ ಎಂದು ಇಸ್ಲಾಂ  ಧಾರ್ಮಿಕ ಮಂಡಳಿ  ದಾರುಲ್ ಉಲೂಮ್ ಫತ್ವಾ ಹೊರಡಿಸಿತು. ಈ ಸಂಬಂಧ ಮುಜಾಫರ್ ನಗರ ಜಿಲ್ಲೆಯ ಮುಸ್ಲಿಂ ಧರ್ಮಗುರು ಹಾಜಿ ಮೊಹಮ್ಮದ್ ಇಸಾರ್ ಅವರು  ಕೇಳಿದ   ಪ್ರಶ್ನೆಗೆ ದಾರುಲ್ ಉಲೂಮ್ ಈ ಫತ್ವಾ ಹೊರಡಿಸಿತು.  

 2008: ಕರ್ನಾಟಕದಲ್ಲಿ ಮೇ 22ರಂದು ನಡೆಯಲಿರುವ ಮೂರನೇ ಹಂತದ 69 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಗೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸುವ ಮೂಲಕ ಚಾಲನೆ ನೀಡಿತು. ಉತ್ತರ ಕರ್ನಾಟಕ ಪ್ರದೇಶದ ಬೆಳಗಾವಿ, ಬಾಗಲಕೋಟೆ, ವಿಜಾಪುರ, ಗುಲ್ಬರ್ಗ, ಬೀದರ, ಗದಗ, ಧಾರವಾಡ ಮತ್ತು ಹಾವೇರಿ ಈ ಎಂಟು ಜಿಲ್ಲೆಗಳಲ್ಲಿ ಮೂರನೇ ಹಂತದ ಚುನಾವಣೆ ನಡೆಯುವುದು.

2008: ಜಮ್ಮು ಮತ್ತು ಕಾಶ್ಮೀರದ ನೂತನ ಕಿಶ್ತ್ ವಾರ್ ಜಿಲ್ಲೆಯಲ್ಲಿ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಯಲ್ಲಿನ 390 ಮೆ.ವಾ. ಸಾಮರ್ಥ್ಯದ ಜಲ ವಿದ್ಯುತ್ ಯೋಜನೆಯನ್ನು ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಕ್ಕೆ ಅರ್ಪಿಸಿದರು. 25 ವರ್ಷಗಳ ಹಿಂದೆ ಆಗಿನ ಪ್ರಧಾನಿ ಇಂದಿರಾಗಾಂಧಿ ಅವರು ಅಡಿಗಲ್ಲು ಹಾಕಿದ್ದ ಈ ಯೋಜನೆಯನ್ನು ಉದ್ಘಾಟಿಸಿದ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಅಪರಿಮಿತ ಜಲ ವಿದ್ಯುತ್ ಶಕ್ತಿಯನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಇದು ಇನ್ನೊಂದು ಮೈಲುಗಲ್ಲು ಎಂದು ಬಣ್ಣಿಸಿದರು. ದುಲ್ ಹಸ್ತಿ ಜಲ ವಿದ್ಯುತ್ ಯೋಜನೆಯು, 1994ರಲ್ಲಿ ಕಾರ್ಯಾರಂಭ ಮಾಡಿದ 360 ಮೆ.ವಾ. ಸಾಮರ್ಥ್ಯದ ಸಲಾಲ್ ಯೋಜನೆಯ ಬಳಿಕ ಚೇನಾಬ್ ನದಿಯ ಮೇಲೆ ನಿರ್ಮಿಸಲಾದ ಎರಡನೆಯ ದೊಡ್ಡ ವಿದ್ಯುತ್ ಯೋಜನೆ. ಇನ್ನೆರಡು ಜಲ ವಿದ್ಯುತ್ ಯೋಜನೆಗಳಾದ 450 ಮೆ.ವಾ. ಸಾಮರ್ಥ್ಯದ ಬಗ್ಲಿಯಾರ್ ಜಲ ವಿದ್ಯುತ್ ಯೋಜನೆ ಮತ್ತು  600 ಮೆ.ವಾ. ಸಾಮರ್ಥ್ಯದ ಸವಾಲ್ ಕೋಟ್ ಜಲವಿದ್ಯುತ್ ಯೋಜನೆಗಳು ರಾಮಬನ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿವೆ.

2008: ಅತಿ ಪ್ರಮುಖರ ಮಕ್ಕಳು ನಡೆಸುವ ಅಪಘಾತ ಪ್ರಕರಣಗಳಿಗೆ ಇದು ಇನ್ನೊಂದು ಸೇರ್ಪಡೆ. ಉತ್ತರ ಪ್ರದೇಶ ಶಾಸಕಿ ಶಾದಬ್ ಫಾತಿಮಾ ಅವರ ಪುತ್ರ ಕಾಸಿಫ್ ಅಬ್ಬಾಸ್ ನಸುಕಿನ ವೇಳೆಯಲ್ಲಿ ಕುಡಿದ ಮತ್ತಿನಲ್ಲಿ ಕಾರನ್ನು ಯದ್ವಾತದ್ವ ಓಡಿಸಿದ ಪರಿಣಾಮವಾಗಿ ಸಂಭವಿಸಿದ ಅಪಘಾತಗಳಲ್ಲಿ ಮೂವರು ಸತ್ತು ಇತರ 9 ಮಂದಿ ಗಾಯಗೊಂಡರು. 17ರ ಹರೆಯದ ಅಬ್ಬಾಸ್ ತನ್ನಮ್ಮನ ಕೆಂಪು ದೀಪದ ಕಾರನ್ನು ಕುಡಿದ ಮತ್ತಿನಲ್ಲಿ ಓಡಿಸುತ್ತಿದ್ದಾಗ ನಿಯಂತ್ರಣ ತಪ್ಪಿ, ವಾಹನವು ಮೂವರ ಮೇಲೆ ಚಲಿಸಿ ಅವರೆಲ್ಲರೂ ಸ್ಥಳದಲ್ಲೇ ಅಸು ನೀಗಿದರು ಎಂದು ಪೊಲೀಸರು ತಿಳಿಸಿದರು.

2008: ದಶಕದ ಹಿಂದೆ ನಾಪತ್ತೆಯಾದ ನಿವೃತ್ತ ಉದ್ಯೋಗಿಯ ಪತ್ನಿಗೆ 50,000 ರೂಪಾಯಿಗಳ ಪರಿಹಾರ ನೀಡುವಂತೆ ಕಲ್ಕತ್ತಾ ಹೈಕೋರ್ಟ್ ಪೂರ್ವ ರೈಲ್ವೇಯ ಕೇಂದ್ರೀಯ ಆಸ್ಪತ್ರೆ ಅಧಿಕಾರಿಗಳಿಗೆ ಆದೇಶ ನೀಡಿತು. ಕಣ್ಮರೆಯಾದ ವ್ಯಕ್ತಿಯ ಪತ್ತೆ ಬಗ್ಗೆ ನಿರ್ಲಕ್ಷ್ಯ ತಾಳಿದ ಬಿ.ಆರ್. ಸಿಂಗ್ ರೈಲ್ವೇ ಆಸ್ಪತ್ರೆಯ ಆಡಳಿತ ವರ್ಗದ ಅಸಡ್ಡೆಯ ಧೋರಣೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಾಲಯದ ವಿಭಾಗೀಯ ಪೀಠವು ಪೊಲೀಸರ ಬಳಿ ವ್ಯಕ್ತಿ ಕಾಣೆಯಾಗಿದ್ದಾನೆ ಎಂದು ದಾಖಲಿಸಿ ಸುಮ್ಮನಾಗುವ ಮೂಲಕ ತಮ್ಮ ಕರ್ತವ್ಯ ಮಾಡಿದ್ದೇವೆ ಎಂದು ಅಧಿಕಾರಿಗಳು ಹೇಳುವಂತಿಲ್ಲ ಎಂದು ಅಭಿಪ್ರಾಯ ಪಟ್ಟಿತು. ನ್ಯಾಯಮೂರ್ತಿ ಅಮೃತ್ ತಾಲೂಕ್ದರ್ ಮತ್ತು ಪಿ.ಎಸ್. ಬ್ಯಾನರ್ಜಿ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಕಾಣೆಯಾಗಿರುವ ವ್ಯಕ್ತಿಯ ಬಗ್ಗೆ ಭಾವಚಿತ್ರ ಸಹಿತವಾಗಿ ಪತ್ರಿಕೆಗಳು ಮತ್ತು ಟೆಲಿವಿಷನ್ನಿನಲ್ಲಿ ಜಾಹೀರಾತುಗಳನ್ನು ನೀಡುವಂತೆಯೂ ಕೋಲ್ಕತ ಪೊಲೀಸ್ ಮತ್ತು ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶಿಸಿತು. ನಂದ ಕುಮಾರ ಸರ್ಕಾರ್ ಎಂಬ ಪೂರ್ವ ರೈಲ್ವೇ ನೌಕರ 1993ರಲ್ಲಿ ನಿವೃತ್ತರಾಗಿದ್ದು, ರೈಲ್ವೇ ನಿಯಮಗಳ ಪ್ರಕಾರ ವೈದ್ಯಕೀಯ ಸವಲತ್ತುಗಳಿಗೆ ಅರ್ಹರಾಗಿದ್ದರು. 1999ರ ಸೆಪ್ಟೆಂಬರ್ 22ರಂದು ಅಸ್ವಸ್ಥರಾದಾಗ ಅವರನ್ನು ಬಿ.ಆರ್. ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 7ರಂದು ಸರ್ಕಾರ್ ಪತ್ನಿ ಶಂಕರಿ ಆಸ್ಪತ್ರೆಗೆ ಬಂದಾಗ ಆತನಿದ್ದ ಮಂಚ ಖಾಲಿಯಾಗಿತ್ತು. ಆಕೆ ತತ್ ಕ್ಷಣವೇ ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಿ ವಿಚಾರಿಸಿದಳು. ಆದರೆ ಅಧಿಕಾರಿಗಳು ಸರ್ಕಾರ್ಗೆ ಏನಾಗಿದೆ ಎಂದು ವಿವರಿಸಲು ಸಮರ್ಥರಾಗಲಿಲ್ಲ. ಆ ಬಳಿಕ ತನ್ನ ಪತಿಯ ಪತ್ತೆಗಾಗಿ ಶಂಕರಿ ಅವರು ಕಂಬದಿಂದ ಕಂಬಕ್ಕೆ ಸುತ್ತಿದ್ದಲ್ಲದೆ, ಆಸ್ಪತ್ರೆಗೆ ಹಾಗೂ ರೈಲ್ವೇ ಅಧಿಕಾರಿಗಳಿಗೆ ಹಾಗೂ ನಗರ ಪೊಲೀಸರಿಗೆ ಲಿಖಿತ ಮನವಿಗಳನ್ನೂ ಸಲ್ಲಿಸಿದಳು ಎಂದು ಆಕೆಯ ವಕೀಲ ಇದ್ರಿಸ್ ಅಲಿ ಪ್ರತಿಪಾದಿಸಿದ್ದರು. ಪತಿಯ ಪತ್ತೆಗೆ ವಿಫಲಳಾದಾಗ ಆಕೆ ಹೈಕೋರ್ಟಿನಲ್ಲಿ `ಹೇಬಿಯಸ್ ಕಾರ್ಪಸ್' ಅರ್ಜಿ ಸಲ್ಲಿಸಿದ್ದಳು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ 15 ದಿನಗಳ ಒಳಗಾಗಿ ಪರಿಹಾರ ನೀಡುವಂತೆ ಬಿ.ಆರ್. ಸಿಂಗ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಿಗೆ ಆದೇಶಿಸಿತು.

2008: ಮೊಹಾಲಿಯಲ್ಲಿ ವೇಗಿ ಶ್ರೀಶಾಂತ್ ಕೆನ್ನೆಗೆ ಬಾರಿಸಿದ ಆರೋಪಕ್ಕೆ ಒಳಗಾದ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಷೋಕಾಸ್ ನೋಟಿಸ್ ಜಾರಿ ಮಾಡಿತು.

 2008: ವಿಶ್ವ ವಿಖ್ಯಾತ ಇಸ್ಲಾಂ ವಿದ್ವಾಂಸ ಮೌಲಾನಾ ಅಂಜರ್ ಷಾ ಕಾಶ್ಮೀರಿ (81) ಅವರು ನವದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದೀರ್ಘ ಕಾಲದ ಅಸೌಖ್ಯದ ಬಳಿಕ ನಿಧನರಾದರು. ಅಂಜರ್ ಷಾ ಅವರು ದಾರುಲ್ ಉಲೂಮ್ ದೇವಬಂದ್ನ ಇಸ್ಲಾಮಿಕ್ ನ್ಯಾಯ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದರು. `ಹದಿತ್', `ಫಿಕ್' ಮತ್ತು ಇಸ್ಲಾಮಿಕ್ ಕಾನೂನಿನ ಮೇಲೆ ಹಲವು ಪುಸ್ತಕಗಳನ್ನು ರಚಿಸಿದ್ದರು.

2008: ತಂದೆಯೊಬ್ಬ ತನ್ನ ಹದಿನಾಲ್ಕರ ಹರೆಯದ ಮಗಳ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ, ಪ್ರಕರಣ ಬೆಳಕಿಗೆ ಬಂದ ಮೇಲೆ ಆಕೆಯನ್ನು ಮದುವೆಯಾಗುವುದಾಗಿ ಹೇಳಿದ ವಿಲಕ್ಷಣ ಘಟನೆಯೊಂದು ಒರಿಸ್ಸಾದ ಮಲ್ಕನ್ ಗಿರಿಗೆ 70 ಕಿ.ಮೀ. ದೂರದ ಕೂಡುಮುಲುಗುಮ ಗ್ರಾಮದಲ್ಲಿ ಹಿಂದಿನ ದಿನ ರಾತ್ರಿ ನಡೆಯಿತು. ಅತ್ಯಾಚಾರವೆಸಗಿದ ಆರೋಪದ ಮೇಲೆ ಭಗವಾನ್ ಡಕುವಾ (37) ಎಂಬುವನನ್ನು ಮಲ್ಕನ್ ಗಿರಿ ಪೊಲೀಸರು ಬಂಧಿಸಿದರು. ತನ್ನ ಮಗಳ ಬಗೆಗಿನ ಗಂಡನ ವರ್ತನೆಯನ್ನು ಗಮನಿಸಿದ ಪತ್ನಿ ವನಿತ, ಮಗಳನ್ನು ಪ್ರಶ್ನಿಸಿದಾಗ ಆಕೆ `ನಡೆದ ಘಟನೆ'ಯನ್ನು ಬಿಚ್ಚಿಟ್ಟಳು. ವಿಷಯ ತಿಳಿದ ಗ್ರಾಮದ ಮಹಿಳಾ ಸ್ವಸಹಾಯ ಗುಂಪಿನವರು ಮಧ್ಯಪ್ರವೇಶಿಸಿ ಗ್ರಾಮಸಭೆ  ಮುಂದೆ ಅತ್ಯಾಚಾರದ ವಿಚಾರವನ್ನು ಮಂಡಿಸಿದರು. ಗ್ರಾಮಸಭೆಗೆ ಹಾಜರಾದ ಡಕುವಾನನ್ನು ಘಟನೆ ಬಗ್ಗೆ ಪ್ರಶ್ನಿಸಿದಾಗ, ಅತ್ಯಾಚಾರವೆಸಗಿದ ಮಗಳನ್ನೇ ಮದುವೆಯಾಗುವ ಬಯಕೆ ವ್ಯಕ್ತಪಡಿಸಿ, ಆಕೆಯನ್ನು ಎರಡನೇ ಪತ್ನಿಯನ್ನಾಗಿ ಸ್ವೀಕರಿಸುವುದಾಗಿ ಹೇಳಿದ. ಗ್ರಾಮಸ್ಥರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪೊಲೀಸರಿಗೆ ಮುಟ್ಟಿಸಿದರು. ಸ್ವಸಹಾಯ ಗುಂಪಿನ ನಾಯಕಿ ಬಾಲಮಣಿ ನಾಲಿ ಅವರ ಹೇಳಿಕೆ ಮೇರೆಗೆ ಪೊಲೀಸರು ಡಕುವಾನನ್ನು ಬಂಧಿಸಿದರು.

2008: ಹಿರಿಯ ವೃತ್ತಿ ರಂಗ ಕಲಾವಿದೆ ಹಾಗೂ ಖ್ಯಾತ ಹಿಂದೂಸ್ತಾನಿ ಗಾಯಕಿ ಬಳ್ಳಾರಿಯ ಸುಭದ್ರಮ್ಮ ಮನ್ಸೂರು (69) ಅವರನ್ನು 2007ನೇ ಸಾಲಿನ ಪ್ರತಿಷ್ಠಿತ ಗುಬ್ಬಿ ವೀರಣ್ಣ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಏಣಗಿ ಬಾಳಪ್ಪ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಸುಭದ್ರಮ್ಮ ಅವರ ಹೆಸರನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಶಿಫಾರಸು ಮಾಡಿತು.  

2008:  ವಿಶ್ವ ಬೌದ್ಧಿಕ ಆಸ್ತಿ ದಿನದ ಪ್ರಯುಕ್ತ ಅಹಮದಾಬಾದಿನಲ್ಲಿ `ಬೌದ್ಧಿಕ ಆಸ್ತಿ ಹಕ್ಕು- ಕಾನೂನು ಹಾಗೂ ಪ್ರಯೋಗ' ಎಂಬ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಬೌದ್ಧಿಕ ಆಸ್ತಿ ಹಕ್ಕು ಪರಿಣತರಾದ ಜತಿನ್ ತ್ರಿವೇದಿ ಹಾಗೂ ಜಿ.ಡಿ.ದೇವ್ ಅವರು ಬರೆದ ಈ ಕೃತಿಯಲ್ಲಿ ಬೌದ್ಧಿಕ ಆಸ್ತಿ ಹಕ್ಕು ಕಾನೂನಿನ ಬಗ್ಗೆ ಭಾರತದ ವಿವಿಧ ನ್ಯಾಯಾಲಯಗಳು ನೀಡಿದ ತೀರ್ಪಿನ ಕುರಿತ ವಿವರಣೆಗಳಿವೆ. ಹಣಕಾಸು ಸಚಿವಾಲಯದ ನೇರ ತೆರಿಗೆ  ಸಲಹಾ ಸಮಿತಿಯ ಮಾಜಿ ಸದಸ್ಯ, ಸೆಬಿ ಸೆಕೆಂಡರಿ ಮಾರ್ಕೆಟ್ ಸಲಹಾ ಸಮಿತಿ ಸದಸ್ಯ ಚಿನ್ನುಭಾಯ್ ಶಾ ಈ ಕೃತಿ ಬಿಡುಗಡೆ ಮಾಡಿದರು.

2008:  ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ರಾಕೇಶ್ ಸಿಂಗ್ ಅಲಿಯಾಸ್ ಪಪ್ಪು ಸಿಂಗ್ ಮತ್ತು ಇತರ ನಾಲ್ವರು ಮೃತಪಟ್ಟ ಘಟನೆ ಉತ್ತರ ಪ್ರದೇಶ ಅಜಂಗಢದ ಜಹನ್ಗಂಜ್ ಪೊಲೀಸ್ ವೃತ್ತ ವ್ಯಾಪ್ತಿಯ ಶಂಶುದ್ದೀನ್ ಪುರದಲ್ಲಿ ಘಟಿಸಿತು.

2007: ಸೇಂಟ್ ಲೂಸಿಯಾದ ಗ್ರಾಸ್ ಐಲೆಟಿನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಅನುಭವಿ ವೇಗಿ ಗ್ಲೆನ್ ಮೆಕ್ ಗ್ರಾ ಅವರು ತನ್ನ ಕೊನೆಯ ಅಂತಾರಾಷ್ಟ್ರೀಯ ಪಂದ್ಯದಲ್ಲಿ ನೂತನ ವಿಶ್ವಕಪ್ ದಾಖಲೆ ನಿರ್ಮಿಸಿದರು. ಒಂಬತ್ತನೇ ವಿಶ್ವಕಪ್ ಕ್ರಿಕೆಟಿನಲ್ಲಿ `ಶ್ರೇಷ್ಠ ಆಟಗಾರ' ಶ್ರೇಯ ಪಡೆದು ಮುಂಚೂಣಿಯಲ್ಲಿ ನಿಂತಿರುವ ಮೆಕ್ ಗ್ರಾ ಈ ಟೂರ್ನಿಯಲ್ಲಿ 25 ವಿಕೆಟ್ಗಳನ್ನು ಕಬಳಿಸಿ ವಿಶ್ವದಾಖಲೆ ಸ್ಥಾಪಿಸಿದರು. ಶ್ರೀಲಂಕೆಯ ಮುತ್ತಯ್ಯ ಮುರಳೀಧರನ್ (23) ಮತ್ತು ಆಸ್ಟ್ರೇಲಿಯಾದ ಇನ್ನೊಬ್ಬ ಬೌಲರ್ ಶಾನ್ ಟೈಟ್ (23) ಅವರು ಮೆಕ್ ಗ್ರಾ ಜೊತೆಗೆ ಪೈಪೋಟಿಯಲ್ಲಿ ಇರುವ ಇತರ ಪಟುಗಳು.

2007: ಬಹುಸಂಖ್ಯಾತ ಜನರನ್ನು ಕಾಡುವ ಮಧುಮೇಹ ರೋಗಕ್ಕೆ ಕಾರಣವಾಗುವ ವಂಶವಾಹಿಯನ್ನು (ಜೀನ್) ಪತ್ತೆ ಹಚ್ಚಿರುವುದಾಗಿ ವಿಜ್ಞಾನಿಗಳ ತಂಡವೊಂದು `ಜನರಲ್ ಸೈನ್ಸ್ ಅಂಡ್ ನೇಚರ್ ಜೆನೆಟಿಕ್ಸ್' ನಿಯತಕಾಲಿಕದಲ್ಲಿ ಪ್ರಕಟಿಸಿತು. ವಿಶ್ವದಲ್ಲಿ ಮಧುಮೇಹದಿಂದ ಬಳಲುತ್ತಿರುವ 20 ಕೋಟಿಗೂ ಅಧಿಕ ಮಂದಿಗೆ ಇದು ವರದಾನ ಆಗಬಲ್ಲುದು.

2007: ರಾಯಚೂರಿನ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಗ್ರಾಮದಲ್ಲಿ ಕೊಳವೆ ಬಾವಿಯೊಳಕ್ಕೆ ಬಿದ್ದ ಸಂದೀಪ ಕಡೆಗೂ ಜೀವಂತವಾಗಿ ಮೇಲೆ ಬರಲಾಗದೆ ಕೊಳವೆ ಬಾವಿಯಲ್ಲೇ ಅಸು ನೀಗಿದ. ಸತತ 57 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಕೊನೆಗೂ ಫಲ ನೀಡಲಿಲ್ಲ.

 2007: ಭಾರತದರ್ಶನ ಉಪನ್ಯಾಸ ಮಾಲಿಕೆಯಿಂದ ಖ್ಯಾತರಾಗಿದ್ದ ರಾಷ್ಟ್ರೋತ್ಥಾನ ಪರಿಷತ್ ಕಾರ್ಯಕರ್ತ, ಅವಿವಾಹಿತ ವಿದ್ಯಾನಂದ ಶೆಣೈ (56) ಅವರು ಬೆಂಗಳೂರಿನಲ್ಲಿ ನಿಧನರಾದರು. ಶೃಂಗೇರಿ ಪುರಸಭೆಯ ಸದಸ್ಯರೂ ಆಗಿದ್ದ ವಿದ್ಯಾನಂದ ಶೆಣೈ ರಾಜ್ಯದಲ್ಲಿ ಭಾರತ ದರ್ಶನ ಉಪನ್ಯಾಸ ಮಾಲಿಕೆಯ ಮೂಲಕ 1100ಕ್ಕೂ ಅಧಿಕ ಉಪನ್ಯಾಸ ನೀಡಿದ್ದರು. ಅವರು ಹೊರತಂದಿದ್ದ `ಭಾರತ ದರ್ಶನ' ಧ್ವನಿಸುರುಳಿಯ 50,000 ಸೆಟ್ಗಳು ಮಾರಾಟವಾಗಿ ದಾಖಲೆ ನಿರ್ಮಾಣವಾಗಿತ್ತು.

2007: ಮಲೇಶ್ಯಾವು ಈದಿನ ಕ್ವಾಲಾಲಂಪುರದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 45 ವರ್ಷದ ಥಂಕು ಮಿಜಾನ್ ಜೈನಲ್ ಅಬಿದಿನ್ ಅವರನ್ನು ತನ್ನ ನೂತನ  ದೊರೆಯಾಗಿ ಘೋಷಿಸಿತು. ತೈಲ ಸಮೃದ್ಧ ತೆರೆಂಗ್ಗನು ರಾಜ್ಯದದವರಾದ ಥಂಕು ಮಿಜಾನ್ ಅವರು ಎರಡನೆಯ ಅತ್ಯಂತ ಕಿರಿಯ ದೊರೆಯಾಗಿದ್ದು ಹೊಸ ತಲೆಮಾರಿನ  ಶ್ರದ್ಧಾವಂತ ಮುಸ್ಲಿಮ. ಮಲೇಶ್ಯಾದ ಸಂವಿಧಾನಬದ್ಧವಾದ ವಿಶಿಷ್ಠ ಸರದಿ ದೊರೆತನ ವ್ಯವಸ್ಥೆ ಪ್ರಕಾರ ಥಂಕು ಅವರು ಐದು ವರ್ಷ ಕಾಲ ರಾಜ್ಯಭಾರ ಮಾಡುವರು. ಮಲೇಶ್ಯಾವು ಒಂಬತ್ತು ಮಂದಿ ಸುಲ್ತಾನರನ್ನು ಹೊಂದಿದ್ದು ಪ್ರತಿಯೊಬ್ಬರೂ ಸರದಿಯಂತೆ ಐದು ವರ್ಷಗಳ  ಕಾಲ ಆಳ್ವಿಕೆ  ನಡೆಸುತ್ತಾರೆ. ಆದರೆ ಈ ಸಲದ ಸುಲ್ತಾನರು ಅತ್ಯಂತ ಯುವ ತಲೆಮಾರಿನವರೂ ಶ್ರದ್ಧಾವಂತ ಮುಸ್ಲಿಮರೂ ಆಗಿರುವುದು ವಿಶೇಷ. 2.60 ಕೋಟಿ ಜನಸಂಖ್ಯೆಯಲ್ಲಿ ಅರ್ಧದಷ್ಟು  ಮುಸ್ಲಿಮರನ್ನು  ಹೊಂದಿರುವ  ಮಲೇಶ್ಯಾ, ಆಧುನಿಕ ರಾಷ್ಟ್ರವಾಗ್ದಿದರೂ, 1980ರಿಂದ ಇಸ್ಲಾಮಿಕ್ ಸಂಪ್ರದಾಯ ಹೆಚ್ಚು ಬಲವಾಗಿ ಬೇರೂರಿದೆ.   

2007: ಖ್ಯಾತ ಕೃಷಿ  ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್  ಅವರು ರಾಜ್ಯಸಭಾ ಸದಸ್ಯರಾಗಿ  ಪ್ರಮಾಣವಚನ ಸ್ವೀಕರಿಸಿದರು. 81 ವರ್ಷದ ಸ್ವಾಮಿನಾಥನ್ ಅವರನ್ನು ಈ ತಿಂಗಳ ಆದಿಯಲ್ಲಿ ಮೇಲ್ಮನೆ ಸದಸ್ಯರಾಗಿ ನಾಮಕರಣ ಮಾಡಲಾಗಿತ್ತು. ಅವರು ಇಂಗ್ಲಿಷಿನಲ್ಲಿ ಪ್ರತಿಜ್ಞೆ  ಸ್ವೀಕರಿಸಿದರು.

2007: ಛತ್ರಪತಿ  ಶಿವಾಜಿ  ಕುರಿತ ವಿವಾದಾತ್ಮಕ  `ಎ ಹಿಂದು ಕಿಂಗ್ ಇನ್  ಇಸ್ಲಾಮಿಕ್  ಇಂಡಿಯಾ' ಪುಸ್ತಕದ ಮೇಲೆ ಮಹಾರಾಷ್ಟ್ರ ಸರ್ಕಾರವು ವಿಧಿಸಿದ್ದ ನಿಷೇಧವನ್ನು  ಮುಂಬೈ  ಹೈಕೋರ್ಟ್ ತಳ್ಳಿ ಹಾಕಿತು. ಅಮೆರಿಕನ್  ಲೇಖಕ ಜೇಮ್ಸ್ ಲೈನ್ ಈ ಪುಸ್ತಕವನ್ನು  ಬರೆದಿದ್ದಾರೆ. ಪುಸ್ತಕದಲ್ಲಿ ಶಿವಾಜಿ  ಬಗ್ಗೆ  ಕೆಲವು ಟೀಕೆಗಳಿವೆ ಎಂಬ ಕಾರಣಕ್ಕಾಗಿ  ಸರ್ಕಾರವು ಅದನ್ನು  ನಿಷೇಧಿಸಿತ್ತು. ನ್ಯಾಯಮೂರ್ತಿ ಎಫ್. ಐ. ರೆಬೆಲ್ಲೋ, ನ್ಯಾಯಮೂರ್ತಿ ವಿ.ಕೆ. ತಾಹಿಲ್ ರಮಣಿ ಮತ್ತು  ನ್ಯಾಯಮೂರ್ತಿ ಅಭಯ್ ಓಕ್ ಅವರನ್ನು  ಒಳಗೊಂಡ ಪೂರ್ಣಪೀಠವು 2004ರಲ್ಲಿ ವಿಧಿಸಲಾದ  ನಿಷೇಧವನ್ನು  ತಳ್ಳಿಹಾಕಿ  ತೀರ್ಪು ನೀಡಿತು.

2006: ಕೊಲಂಬೊ ಸೇನಾ ಮುಖ್ಯ ಕಚೇರಿ ಮೇಲೆ ಮಾನವಬಾಂಬ್ ದಾಳಿ ನಡೆದ ಹಿನ್ನೆಲೆಯಲ್ಲಿ ಶ್ರೀಲಂಕಾ ವಾಯುಪಡೆಯು ಈಶಾನ್ಯ ಪ್ರದೇಶದ ತಮಿಳು ಬಂಡುಕೋರರ ಆಯ್ದ ನೆಲೆಗಳ ಮೇಲೆ ವಾಯುದಾಳಿ ಆರಂಭಿಸಿತು.

2006: ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಪಿ. ವೆಂಕೋಬರಾವ್ (84) ಬೆಂಗಳೂರಿನ ಶ್ರೀರಾಮಪುರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾದರು. ಮಹಾತ್ಮ ಗಾಂಧೀಜಿ ಮತ್ತು ವಿನೋಬಾ ಭಾವೆ ಅವರ ಶಿಷ್ಯರಾಗಿ ಅವರ ಆಶ್ರಮಗಳಲ್ಲಿ ನೆಲೆಸಿದ್ದ ವೆಂಕೋಬರಾವ್ ಕ್ವಿಟ್ ಇಂಡಿಯಾ ಚಳವಳಿ, ವಿನೋಬಾ ಭಾವೆ ಅವರ ಭೂದಾನ ಯಾತ್ರೆಗಳಲ್ಲಿ ಪಾಲ್ಗೊಂಡ್ದಿದರು. ಜೀವನ ಚರಿತ್ರೆ, ಅನುವಾದ, ಕವನ ಪ್ರಾಕಾರಗಳಲ್ಲಿ 25 ಪುಸ್ತಕಗಳನ್ನು ರಚಿಸಿದ್ದು, ಅವರ 1200 ಪುಟಗಳ ಗಾಂಧಿ ಚರಿತ ಮಾನಸ ಗ್ರಂಥಕ್ಕೆ ದೇಜಗೌ ಟ್ರಸ್ಟ್ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಿತ್ತು.

2006: ತಮ್ಮ 17ನೇ ವಯಸ್ಸಿನಲ್ಲಿ ಹೌ ಓಪಲ್ ಮೆಹ್ತಾ ಗಾಟ್ ಕಿಸ್ಸಡ್, ಗಾಟ್ ವೈಲ್ಡ್ ಅಂಡ್ ಗಾಟ್ ಎ ಲೈಫ್ ಕಾದಂಬರಿ ಬರೆದು ಅಪಾರ ಖ್ಯಾತಿಯ ಜೊತೆಗೇ ಕೃತಿ ಚೌರ್ಯದ ವಿವಾದದಲ್ಲಿಯೂ ಸಿಲುಕಿದ ಭಾರತೀಯ ಮೂಲದ ಹಾರ್ವರ್ಡ್ ಯುವತಿ ಹಾರ್ವರ್ಡ್ ವಿವಿ ವಿದ್ಯಾರ್ಥಿನಿ ಕಾವ್ಯ ವಿಶ್ವನಾಥನ್ ಅವರು ತಮ್ಮ ಕಾದಂಬರಿಯಲ್ಲಿ ಬೇರೆ ಕಾದಂಬರಿಯ ಕೆಲವೊಂದು ಬರಹಗಳನ್ನು ಬಳಸಿಕೊಂಡಿದ್ದಾಗಿ ಒಪ್ಪಿಕೊಂಡರು. ಓಪಲ್ ಮೆಹ್ತಾ ಪ್ರಕಟಿಸಿದ ಲಿಟಲ್ ಬ್ರೌನ್ ಕಂಪೆನಿಗೆ ಪತ್ರ ಬರೆದ ಇನ್ನೊಂದು ಪ್ರಕಾಶನ ಸಂಸ್ಥೆ ರ್ಯಾಂಡಮ್ ಹೌಸ್ ಓಪಲ್ ಮೆಹ್ತಾ ಹಾಗೂ ಅಮೆರಿಕದ ಬರಹಗಾರ ಮೆಗನ್ ಮ್ಯಾಕ್ ಕ್ಯಾಫರ್ಟಿ ಅವರ ಸ್ಲೊಪ್ಪಿ ಫರ್ಸ್ಟ್ ಮತ್ತು ಸೆಕೆಂಡ್ ಹೆಲ್ಪಿಂಗ್ ನಡುವೆ ಸಾಮ್ಯತೆ ಇದೆ ಎಂದು ಆಕ್ಷೇಪಿಸಿತ್ತು.

2006: ಗುಜರಾತ್ ಸಹಕಾರ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ನೂತನ ಅಧ್ಯಕ್ಷರಾಗಿ ಪಾರ್ಥಿ ಭಟೋಲ್ ಆಯ್ಕೆಯಾದರು. 33 ವರ್ಷಗಳಿಂದ ಅಧ್ಯಕ್ಷರಾಗಿದ್ದ ಡಾ. ವರ್ಗೀಸ್ ಕುರಿಯನ್ ಅವರು ಹಿಂದಿನ ತಿಂಗಳು ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2006: ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಜೆ. ಸೊರಾಬ್ಜಿ ಅವರು ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ ಚಾರಿಟಬಲ್ ಫೌಂಡೇಷನ್ ಪ್ರಶಸ್ತಿಗೆ ಆಯ್ಕೆಯಾದರು  

1992: ಜ್ಞಾನಪೀಠ ಪ್ರಶಸ್ತಿ ವಿಜೇತ ವಿ.ಕೃ. ಗೋಕಾಕ್ ಅವರು ಈದಿನ ನಿಧನರಾದರು.

1986: ಸೋವಿಯತ್ ಒಕ್ಕೂಟದ ಚೆರ್ನೋಬಿಲ್ ಪರಮಾಣು ಸ್ಥಾವರದಲ್ಲಿ ಜಗತ್ತಿನ ಅತಿಭೀಕರ ವಿಕಿರಣ ಸೋರಿಕೆ ದುರಂತ ಘಟಿಸಿತು. ಸ್ಥಾವರದ ರಿಯಾಕ್ಟರಿನಲ್ಲಿ ಸ್ಫೋಟ ಹಾಗೂ ಬೆಂಕಿ ಸಂಭವಿಸಿ ಸೋರಿಕೆಯಾದ ವಿಕಿರಣ ಪರಿಸರವನ್ನು ಸೇರಿ ಕನಿಷ್ಠ 31 ಮಂದಿ ತತ್ ಕ್ಷಣವೇ ಅಸುನೀಗಿದರು.

1955: ಕಲಾವಿದೆ ಜಯಶ್ರೀ ಅರವಿಂದ್ ಜನನ.

1954: ಕಲಾವಿದ ರವೀಂದ್ರ ಕುಮಾರ ವಿ. ಜನನ.

1946: ಭಾರತೀಯ ಕ್ರಿಕೆಟ್ ಅಂಪೈರ್ ವಿ.ಕೆ. ರಾಮಸ್ವಾಮಿ ಜನ್ಮದಿನ.

1937: ಖ್ಯಾತ ಇತಿಹಾಸ ತಜ್ಞ, ಸಂಶೋಧಕ, ಸಾಹಿತಿ, ಪ್ರಾಧ್ಯಾಪಕ ಸೂರ್ಯನಾಥ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಉಪೇಂದ್ರ ಕಾಮತ್- ಪದ್ಮಾವತಮ್ಮ ದಂಪತಿಯ ಪುತ್ರನಾಗಿ ಜನಿಸಿದರು. 70ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಕಾಮತ್ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬೆಂಗಳೂರು ವಿವಿಯ ಸಂಶೋಧನಾ ಪ್ರಶಸ್ತಿ, ತುಳು ಅಕಾಡೆಮಿ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಚಿದಾನಂದ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಇತ್ಯಾದಿ ಗೌರವಗಳಿಗೆ ಪಾತ್ರರಾಗಿದ್ದಾರೆ.

1937: ಸ್ಪಾನಿಷ್ ಅಂತರ್ಯುದ್ಧದ ಸಂದರ್ಭದಲ್ಲಿ ಜರ್ಮನ್ ವಿಮಾನಗಳು ಗುಯೆರ್ನಿಕಾದ ಬಾಸ್ಕ್ ಟೌನ್ ಮೇಲೆ ದಾಳಿ ನಡೆಸಿದವು. ನಾಗರಿಕ ಪ್ರದೇಶದ ಮೇಲೆ ನಡೆದ ಮೊತ್ತ ಮೊದಲ ಬಾಂಬ್ ದಾಳಿ ಇದು. ಈ ದಾಳಿಯಿಂದ ಆದ ಜೀವಹಾನಿಯನ್ನು ಪಾಬ್ಲೊ ಪಿಕಾಸೋ ತನ್ನ `ಗುಯೆರ್ನಿಕಾ' ಗೋಡೆ ಚಿತ್ರಗಳಲ್ಲಿ ಚಿತ್ರಿಸಿದ್ದಾನೆ.

1931: ಕಲಾವಿದ ವಿ. ರಾಮಸ್ವಾಮಿ ಜನನ.

1927: ಕಲಾವಿದ ಶಿವಪ್ಪ ಎಚ್. ತರಲಘಟ್ಟಿ ಜನನ.

1920: ಭಾರತೀಯ ಗಣಿತ ತಜ್ಞ ಶ್ರೀನಿವಾಸ ರಾಮಾನುಜಂ ಅವರು ತಮ್ಮ 32ನೇ ವಯಸ್ಸಿನಲ್ಲಿ ಕ್ಷಯ ರೋಗಕ್ಕೆ ತುತ್ತಾಗಿ ನಿಧನರಾದರು.

1887: ಮೈಸೂರಿನ ವೀಣಾವಾದನ ಝೇಂಕಾರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದ ವೀಣೆ ವೆಂಕಟಗಿರಿಯಪ್ಪ (26-4-
1887  ರಿಂದ   30-1-1952) ಅವರು ವೆಂಕಟರಾಮಯ್ಯ- ನರಸಮ್ಮ ದಂಪತಿಯ ಮಗನಾಗಿ ಹೆಗ್ಗಡದೇವನ ಕೋಟೆಯಲ್ಲಿ ಜನಿಸಿದರು. ತಾತ ದೊಡ್ಡ ಸುಬ್ಬರಾಯರಿಂದಲೇ ವೀಣೆ ಪಾಠ ಆರಂಭಿಸಿದ ವೆಂಕಟರಾಮಯ್ಯ ಮುಂದೆ ಮೈಸೂರು ಮಹಾರಾಜರ ಆಸ್ಥಾನ ವಿದ್ವಾಂಸರಾಗಿ ನೇಮಕಗೊಂಡು ಮಹಾರಾಜರ ಪ್ರೋತ್ಸಾಹದಿಂದ ಪಾಶ್ಚಾತ್ಯ ಸಂಗೀತ ಪಿಯಾನೋ, ಕೆರಮಿಮ್ ವಾದನ ಕಲೆಯನ್ನೂ ಕಲಿತು ವೀಣೆಯೊಂದಿಗೆ ಅವುಗಳಲ್ಲೂ ಪ್ರವೀಣರಾದರು.

1806: ಸ್ಕಾಟಿಷ್ ಮತಪ್ರಚಾರಕ ಅಲೆಗ್ಸಾಂಡರ್ ಡಫ್ (1806-78) ಹುಟ್ಟಿದ ದಿನ. ಈತ ಕಲಕತ್ತಾ ವಿಶ್ವವಿದ್ಯಾಲಯ ಸ್ಥಾಪನೆಗೆ ನೆರವಾದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Saturday, April 25, 2009

Look at this cartoon..!

Look at this cartoon..!


This is the cartoon sent by Dr. Mohan (Email:mohangs2007@gmail.com), Assistant Professor, Agricultural Research Station, Ponnampet, Coorg District in Karnataka State, India. It  appeared in ‘Shakti’ daily newspaper from Coorg. Dr. Mohan says one must appreciate the sense of concern and irony that this cartoonist has built in to. He always comes with catchy cartoons. However, most of the times, talents in local newspapers will not come to limelight...

Thanks Dr. Mohan, your opinion is correct. I think PARYAYA readers also feel the same.
-Nethrakere Udaya Shankara 

ಇಂದಿನ ಇತಿಹಾಸ History Today ಏಪ್ರಿಲ್ 25

ಇಂದಿನ ಇತಿಹಾಸ

ಏಪ್ರಿಲ್ 25

ಬಾಲಿವುಡ್  ನಟ ಡಾ. ಶ್ರೀರಾಮ್ ಲಾಗೂ ಅವರಿಗೆ ಮುಂಬೈಯಲ್ಲಿ ಗಾಯಕಿ ಲತಾ ಮಂಗೇಶ್ಕರ್ ಅವರು ದೀನಾನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.

2008: ಬಾಲಿವುಡ್  ನಟ ಡಾ. ಶ್ರೀರಾಮ್ ಲಾಗೂ ಅವರಿಗೆ ಮುಂಬೈಯಲ್ಲಿ ಗಾಯಕಿ ಲತಾ ಮಂಗೇಶ್ಕರ್ ಅವರು ದೀನಾನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಿದರು.

2008: ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಕ್ರೀಡಾಂಗಣಗಳಲ್ಲಿ `ಚಿಯರ್ ಗರ್ಲ್ಸ್' ತಂಡಗಳು ನೃತ್ಯ ಪ್ರದರ್ಶನ ನೀಡುವುದಕ್ಕೆ ನಿಷೇಧ ಹೇರುವ ಯೋಚನೆಯನ್ನು ಮಹಾರಾಷ್ಟ್ರ ಸರ್ಕಾರ ಕೈಬಿಟ್ಟಿತು. `ಅಶ್ಲೀಲ' ಭಾವ-ಭಂಗಿಗಳನ್ನು ತೋರಿದರೆ ಮಾತ್ರ ಕ್ರಮ ಕೈಗೊಳ್ಳುವುದಾಗಿ ಅದು ಎಚ್ಚರಿಸಿತು.

2008: ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದ (ಎನ್ ಎಫ್ ಡಿ ಸಿ) ಅಧ್ಯಕ್ಷರನ್ನಾಗಿ ಹಿರಿಯ ನಟ ಓಂಪುರಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತು. ಏಪ್ರಿಲ್ 4ರಿಂದ ಅನ್ವಯವಾಗುವಂತೆ ಅವರ ನೇಮಕಾತಿ ಆಗಿದ್ದು, ಮುಂದಿನ ಮೂರು ವರ್ಷಗಳ ಕಾಲ ಅವರು ಈ ಸ್ಥಾನದಲ್ಲಿ ಮುಂದುವರೆಯುವರು. 1980ರ ದಶಕದಿಂದಲೂ ಎನ್ ಎಫ್ ಡಿ ಸಿ ಜತೆಗೆ ಸಂಪರ್ಕ ಇಟ್ಟುಕೊಂಡ ಓಂಪುರಿ ಅವರು, `ಅರ್ಧ ಸತ್ಯ', `ಜಾನೆ ಭಿ ದೋ ಯಾರ್ಹೊ...', `ಮಿರ್ಚ್ ಮಸಾಲಾ', `ಧಾರಾವಿ', `ಭವಾನಿ ಭವಾಯಿ', `ಕರೆಂಟ್' ಮೊದಲಾದ ಚಿತ್ರಗಳಲ್ಲಿ ನಟಿಸಿದವರು. ಈ ಹಿಂದೆ ಅಡಲ್ಯಾಬ್ಸಿನ ಮನಮೋಹನ ಶೆಟ್ಟಿ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಹೃಷಿಕೇಶ ಮುಖರ್ಜಿ, ಬಾಲಿವುಡ್ಡಿನ ಕನಸಿನ ಕನ್ಯೆ ಹೇಮಾಮಾಲಿನಿ ಅವರು ಎನ್ ಎಫ್ ಡಿ ಸಿ ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

 2008: ವಾಯುದಳಕ್ಕೆ ಬೆಂಬಲವಾಗಿ ಕಾರ್ಯ ನಿರ್ವಹಿಸಲು ಭೂಮಿಯಿಂದ ಆಕಾಶದತ್ತ ನಿಗದಿತ ಗುರಿಯತ್ತ ಬಹು ವೇಗವಾಗಿ ಚಿಮ್ಮುವ ಸಾಮರ್ಥ್ಯದ ಕ್ಷಿಪಣಿಗಳನ್ನು ಖರೀದಿಸಲು ಭಾರತೀಯ ಸೇನೆಯು 3,800 ಕೋಟಿ ರೂಪಾಯಿಗಳ ಜಾಗತಿಕ ಟೆಂಡರ್ ಕರೆಯಿತು. ಗಗನದಲ್ಲಿ 8ರಿಂದ 9 ಕಿ. ಮೀ. ಎತ್ತರದಲ್ಲಿ ಹಾರಾಡುವ ಯುದ್ಧ ವಿಮಾನಗಳನ್ನು ಹಾಗೂ ಮಾನವರಹಿತ ವಿಮಾನಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಈ ಕ್ಷಿಪಣಿಗಳು ಹೊಂದಿರುತ್ತವೆ ಎಂದು ಸೇನಾ ಮೂಲಗಳು ತಿಳಿಸಿದವು.

2008: ಇಂಗ್ಲೆಂಡಿನ ಬ್ರಿಸ್ಟಲ್ ನಗರದಲ್ಲಿರುವ ಭಾರತದ ಸಮಾಜ ಸುಧಾರಕ ರಾಜಾರಾಮ್ ಮೋಹನ್ ರಾಯ್ ಅವರ ಸಮಾಧಿ ಪುನರುಜ್ಜೀವನಕ್ಕೆ 165 ವರ್ಷಗಳ ಬಳಿಕ ಚಾಲನೆ ನೀಡಲಾಯಿತು. ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿ ರಾಜಾರಾಮ್ ಮೋಹನ್ ರಾಯ್ ಅವರು 1833ರ ಸೆಪ್ಟೆಂಬರ್ 27ರಂದು ಬ್ರಿಸ್ಟಲ್ ನಗರದಲ್ಲಿ ಅಸುನೀಗಿದ್ದು ಅವರ ಸಮಾಧಿಯನ್ನು ಇಲ್ಲಿಯೇ ನಿರ್ಮಿಸಲಾಗಿತ್ತು. ರಾಯ್ ಸಮಾಧಿ ಪುನರುಜ್ಜೀವನಕ್ಕಾಗಿ ಕೋಲ್ಕತ ಮಹಾನಗರ ಪಾಲಿಕೆಯು 50 ಸಾವಿರ ಪೌಂಡ್ ಸಂಗ್ರಹಿಸಿ ನೀಡಿತು. ಈ ಸ್ಥಳವು ಬಂಗಾಳ ಹಾಗೂ ಭಾರತದ ಇತರೆಡೆಯಿಂದ ಇಂಗ್ಲೆಂಡಿಗೆ ಬರುವ ಪ್ರವಾಸಿಗರಿಗೆ ಮುಖ್ಯ ದಾರ್ಶನಿಕ ಕೇಂದ್ರವಾಗಿದೆ.  

2008: ಭಯೋತ್ಪಾದನೆ ಪರಿಣಾಮವಾಗಿ ಕಣಿವೆಯಿಂದ ಗುಳೇ ಹೋಗಿದ್ದ ಕಾಶ್ಮೀರಿ ವಲಸಿಗರು ಆದಷ್ಟೂ ಬೇಗನೆ ಹಿಂತಿರುಗುವಂತಾಗಲು ಕೇಂದ್ರ ಸರ್ಕಾರವು 1600 ಕೋಟಿ ರೂಪಾಯಿಗಳ ಕೊಡುಗೆಯನ್ನು ಪ್ರಕಟಿಸಿತು. ವಾಪಸಾಗುವ ಕಾಶ್ಮೀರಿಗಳಿಗೆ ವಸತಿ ವ್ಯವಸ್ಥೆ, ನೌಕರಿ ಸವಲತ್ತು ಮತ್ತು  ಸಾಲದ ಮೇಲಿನ ಬಡ್ಡಿ ಮನ್ನಾ ಕೂಡಾ ಈ ಕೊಡುಗೆಗಳಲ್ಲಿ ಸೇರಿದೆ.

2008: ದಕ್ಷಿಣ ದೆಹಲಿಯ  ಲೋಧಿ ರಸ್ತೆಯಲ್ಲಿರುವ ಕೇಂದ್ರೀಯ ತನಿಖಾ ದಳ (ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್- ಸಿಬಿಐ) ಕಚೇರಿಯಲ್ಲಿ ಈದಿನ  ಮುಂಜಾನೆ ಭಾರಿ  ಬೆಂಕಿ  ಕಾಣಿಸಿಕೊಂಡಿತು. ಬೆಳಗ್ಗೆ  8.50ರ ಸುಮಾರಿಗೆ ಸಿಜಿಓ ಕಾಂಪ್ಲೆಕ್ಸಿನ  ಆರನೇ ಮಹಡಿಯ  ಕೊಠಡಿಯೊಂದರಲ್ಲಿ ಈ ಬೆಂಕಿ ಕಾಣಿಸಿಕೊಂಡಿತು. ಬೆಳಗ್ಗೆ  10.05ರ ವೇಳೆಗೆ ಬೆಂಕಿಯನ್ನು  ನಿಯಂತ್ರಿಸಲಾಯಿತು.

2008: ಹತ್ತನೇ ದರ್ಜೆಯ ಇಂಗ್ಲಿಷ್ ಬೋರ್ಡ್ ಪರೀಕ್ಷೆಯ ಸುಮಾರು 22,000ಕ್ಕೂ ಹೆಚ್ಚು  ಉತ್ತರ ಪತ್ರಿಕೆಗಳು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಮೌಲ್ಯ ಮಾಪನ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ  ಅನಾಹುತದಲ್ಲಿ ಭಸ್ಮವಾದವು.

2007; ಸೌರವ್ಯೂಹದಿಂದ 20 ಜ್ಯೋತಿರ್ ವರ್ಷಗಳಷ್ಟು ದೂರದಲ್ಲಿ ಒಂದು ಗ್ರಹವನ್ನು ಖಗೋಳ ಶಾಸ್ತ್ರಜ್ಞರು ಪತ್ತೆ ಹಚ್ಚಿದ್ದು ಅದರಲ್ಲಿ ಜೈವಿಕಾಂಶ  ಇರಬಹುದು ಎಂದು ಪ್ರಕಟಿಸಿದರು. ಹೊಸ ಗ್ರಹವು ಭೂಗ್ರಹಕ್ಕಿಂತ ಐದು ಪಟ್ಟು ದೊಡ್ಡದಾಗಿದ್ದು, ಸೌರವ್ಯೂಹಕ್ಕೆ ಸನಿಹದಲ್ಲಿರುವ ಕೆಂಪು ಕುಬ್ಜ ತಾರೆ ಗ್ಲೆಸೆ-581ನ್ನು ಸುತ್ತುತ್ತಿದೆ, ಇದು ತುಲಾ ನಕ್ಷತ್ರ ರಾಶಿಯಲ್ಲಿದೆ ಎಂದು ಹೊಸ ಗ್ರಹವನ್ನು ಪತ್ತೆ ಹಚ್ಚಿದ ಸ್ವಿಜರ್ಲೆಂಡಿನ ಜಿನೀವಾ ಖಗೋಳಾಲಯದ ವಿಜ್ಞಾನಿಗಳಾದ ಸಿಫೈನ್ ಉಡ್ರಿ ಮತ್ತು ಸಹೋದ್ಯೋಗಿಗಳು ಹೇಳಿದರು.

2006: ಡಕಾಯತಿಯಿಂದ ರಾಜಕೀಯಕ್ಕೆ ಸೇರಿದ್ದ ಚಂಬಲ್ ರಾಣಿ ಕುಖ್ಯಾತಿಯ ಫೂಲನ್ ದೇವಿಯನ್ನು ಹತ್ಯೆಗೈದ ಪ್ರಮುಖ ಆರೋಪಿ ಶೇರ್ ಸಿಂಗ್ ರಾಣಾನನ್ನು ದೆಹಲಿ ಪೊಲೀಸರ ತನಿಖಾ ತಂಡವು ದೆಹಲಿಯಲ್ಲಿ ಬಂಧಿಸಿತು. ತಿಹಾರ್ ಸೆರೆಮನೆಯಿಂದ ಪರಾರಿಯಾಗಿ, ಎರಡು ವರ್ಷಗಳ ಬಳಿಕ ಆರೋಪಿ ಸೆರೆ ಸಿಕ್ಕಿದ. ಫೂಲನ್ ದೇವಿಯನ್ನು ದೆಹಲಿಯಲ್ಲಿ ಅವರ ಮನೆ ಎದುರಲ್ಲಿ
2001ರ ಜುಲೈಯಲ್ಲಿ ಹತ್ಯೆ ಮಾಡಲಾಗಿತ್ತು ಹತ್ಯೆಯಾದ ಎರಡೇ ದಿನದಲ್ಲಿ ಶೇರ್ ಸಿಂಗನನ್ನು ಡೆಹರಾಡೂನಿನಲ್ಲಿ ಪೊಲೀಸರು ಬಂದಿಸಿದ್ದರು. 2004ರಲ್ಲಿ ಆತ ತಿಹಾರ್ ಸೆರೆಮನೆಯಿಂದ ಪರಾರಿಯಾಗಿದ್ದ.

2006: ನೇಪಾಳದ ನೂತನ ಪ್ರಧಾನಿ ಸ್ಥಾನಕ್ಕೆ ನೇಪಾಳಿ ಕಾಂಗ್ರೆಸ್ ಅಧ್ಯಕ್ಷ , ಮಾಜಿ ಪ್ರಧಾನಿ ಗಿರಿಜಾ ಪ್ರಸಾದ್ ಕೊಯಿರಾಲ (84) ಅವರನ್ನು ಪ್ರಸ್ತಾಪಿಸಿ ಸಪ್ತಪಕ್ಷ ಮೈತ್ರಿಕೂಟ ನಿರ್ಣಯ ಅಂಗೀಕರಿಸಿತು. 19 ದಿನಗಳ ಪ್ರಜಾಪ್ರಭುತ್ವ ಪರ ಚಳವಳಿಯನ್ನೂ ಹಿಂತೆಗೆದುಕೊಂಡ ಮೈತ್ರಿಕೂಟ, ಸಂಸತ್ತಿಗೆ ಮರುಜೀವ ನೀಡುವುದಾಗಿ ದೊರೆ ಜ್ಞಾನೇಂದ್ರ ಅವರು ನೀಡಿದ ಆಹ್ವಾನಕ್ಕೆ ಒಪ್ಪಿ ಸರ್ಕಾರ ರಚನೆಗೆ ಮುಂದಾಯಿತು.

2006: ಗರ್ಭಿಣಿಯ ಪೋಷಾಕಿನಲ್ಲಿ ಶ್ರೀಲಂಕಾ ಸೇನೆಯ ಕೊಲಂಬೊ ಕೇಂದ್ರ ಕಚೇರಿ ಆವರಣದೊಳಕ್ಕೆ ಪ್ರವೇಶಿಸಿದ ಎಲ್ ಟಿಟಿಇ ಸಂಘಟನೆಯ ಮಹಿಳಾ ಮಾನವ ಬಾಂಬ್ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಹತ್ತು ಮಂದಿ ಸೈನಿಕರು ಮೃತರಾಗಿ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಶರತ್ ಫಾನ್ಸೆಕಾ ತೀವ್ರವಾಗಿ ಗಾಯಗೊಂಡರು.

2006: ಲಾಭದ ಹುದ್ದೆ ಹೊಂದಿರುವ ಲೋಕಸಭಾ ಅಧ್ಯಕ್ಷ ಸೋಮನಾಥ ಚಟರ್ಜಿ, ಪಂಜಾಬ್, ಮಧ್ಯಪ್ರದೇಶ, ಒರಿಸ್ಸಾ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಛತ್ತೀಸ್ ಗಢ ಈ 6 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಪ್ರಣವ್ ಮುಖರ್ಜಿ, ಶರದ್ ಪವಾರ್ ಮತ್ತು ಮೀರಾಕುಮಾರ್ ಸೇರಿದಂತೆ ಒಟ್ಟು 43 ಲೋಕಸಭೆ ಸದಸ್ಯರು ಮತ್ತು 200ಕ್ಕೂ ಹೆಚ್ಚು ಶಾಸಕರ ಹೆಸರನ್ನು  ಚುನಾವಣಾ ಆಯೋಗವು ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿತು.

2006: ಬಸವ ವೇದಿಕೆಯು ಪ್ರತಿವರ್ಷ ನೀಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಈ ವರ್ಷ ಕೇರಳ ಹೈಕೋರ್ಟಿನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ.ವಿ.ಎಸ್. ಮಳಿಮಠ ಆಯ್ಕೆಯಾದರು. ವಚನ ಸಾಹಿತ್ಯ ಶ್ರೀ ಪ್ರಶಸ್ತಿಗೆ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಅಜಯಕುಮಾರ್ ಸಿಂಗ್ ಆಯ್ಕೆಯಾದರು.

2006: ಶ್ರೀಶ್ರೀ ರವಿಶಂಕರ ಗುರೂಜಿ ಅವರಿಗೆ ತೈವಾನ್ ಸಾಂಸ್ಕತಿಕ ಮತ್ತು ಮಾನವ ಜೀವನ ಶಿಕ್ಷಣ ಸಂಸ್ಥೆಯು ಫರ್ವೆಂಟ್ ಗ್ಲೋಬಲ್ ಲವ್ ಆಫ್ ಲೈಫ್-2006 ಪ್ರಶಸ್ತಿಯನ್ನು ನೀಡಿತು.

2005: ಜಪಾನಿನ ಆಮ್ ಅಗಾಸಾಕಿ ನಿಲ್ದಾಣದ ಬಳಿ ಪ್ರಯಾಣಿಕ ರೈಲು ದುರಂತದಲ್ಲಿ 107 ಜನರ ಸಾವು.

1982: ಸತ್ಯಜಿತ್ ರೇ ಅವರ `ಶತ್ ರಂಜ್ ಕಿ ಖಿಲಾಡಿ' ಸಿನಿಮಾ ಪ್ರಸಾರದೊಂದಿಗೆ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ವರ್ಣರಂಜಿತ ರಾಷ್ಟ್ರೀಯ ಪ್ರಸಾರ ಆರಂಭವಾಯಿತು. 

1973: ಕಲಾವಿದ ರಮೇಶ ಕುಲಕರ್ಣಿ ಜನನ.

1968: ಭಾರತದ ಶಾಸ್ತ್ರೀಯ ಸಂಗೀತಗಾರ ಬಡೇ ಗುಲಾಂ ಅಲಿ ಅವರು ತಮ್ಮ 66ನೇ ವಯಸ್ಸಿನಲ್ಲಿ ಮೃತರಾದರು. ಪಾಟಿಯಾಲ ಘರಾಣಾ ಮತ್ತು ಖಯಾಲ್ ಹಾಡುಗಾರಿಕೆಯನ್ನು ಜನಪ್ರಿಯಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

1945: ವಿಶ್ವಸಂಸ್ಥೆಯ ಸಂಘಟನೆಗಾಗಿ ಸುಮಾರು 50 ರಾಷ್ಟ್ರಗಳ ಪ್ರತಿನಿಧಿಗಳು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಸಭೆ ಸೇರಿದರು. 

1926: ಕಲಾವಿದ ಅಂಬಳೆ ಸುಬ್ಬರಾವ್ ಜನನ.

1924: ಕಲಾವಿದ ಎಸ್. ರಾಘವೇಂದ್ರರಾವ್ ಕದಿರೆ ಜನನ.

1922: ಕಲಾವಿದ ಎಂ.ಆರ್. ದೊರೆಸ್ವಾಮಿ ಜನನ.

1916: ಗಮಕ ಗಂಧರ್ವರೆನಿಸಿದ್ದ ಬಿ. ಎಸ್. ಎಸ್. ಕೌಶಿಕ್ ಅವರು ಸುಬ್ಬಯ್ಯ- ಸುಬ್ಬಮ್ಮ ದಂಪತಿಯ ಮಗನಾಗಿ ಕೃಷ್ಣರಾಜಪೇಟೆ ತಾಲ್ಲೂಕು ಹೇಮಗಿರಿ ಕುಪ್ಪಹಳ್ಳಿಯಲ್ಲಿ ಜನಿಸಿದರು. 

1859: ಸುಯೆಜ್ ಕಾಲುವೆಗಾಗಿ ಅದರ ಯೋಜಕ ಫರ್ಡಿನಾಂಡ್ ಡಿ ಲೆಸ್ಸೆಪ್ಸ್ ಮಾರ್ಗದರ್ಶನದಲ್ಲಿ ನೆಲ ಅಗೆಯಲು ಆರಂಭಿಸಲಾಯಿತು. ಸರಿಯಾಗಿ 100 ವರ್ಷಗಳ ಬಳಿಕ 1959ರಲ್ಲಿ ಅಟ್ಲಾಂಟಿಕ್ ಸಾಗರಕ್ಕೆ ಗ್ರೇಟ್ ಲೇಕ್ಸ್ ನ್ನು ಸಂಪರ್ಕಿಸುವ ಸೇಂಟ್ ಲಾರೆನ್ಸ್ ಸಮುದ್ರಮಾರ್ಗವನ್ನು (ಸೀವೇ) ರಾಣಿ ಎರಡನೇ ಎಲಿಜಬೆತ್ ಹಾಗೂ ಅಧ್ಯಕ್ಷ ಐಸೆನ್ ಹೊವರ್ ಜಂಟಿಯಾಗಿ ಉದ್ಘಾಟಿಸಿದರು.

(ಸಂಗ್ರಹ: ನೆತ್ರಕೆರೆ ಉದಯಶಂಕರ) 

Friday, April 24, 2009

ಇಂದಿನ ಇತಿಹಾಸ History Today ಏಪ್ರಿಲ್ 24

ಇಂದಿನ ಇತಿಹಾಸ

ಏಪ್ರಿಲ್ 24

ಪ್ರಜಾಪ್ರಭುತ್ವ ಸ್ಥಾಪನೆಗಾಗಿ ಎಡಬಿಡದೆ ನಡೆದ ಚಳವಳಿಗೆ ನೇಪಾಳದ ರಾಜಸತ್ತೆ ಕೊನೆಗೂ ಮಣಿಯಿತು. ಈ ದಿನ ರಾತ್ರಿ ಟೆಲಿವಿಷನ್ನಿನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ದೊರೆ ಜ್ಞಾನೇಂದ್ರ 2002ರಲ್ಲಿ ತಾವು ವಿಸರ್ಜಿಸಿದ್ದ ಸಂಸತ್ತಿಗೆ ಮರುಜೀವ ನೀಡಿ ಮತ್ತೆ ಸಮಾವೇಶ  ಗೊಳಿಸುವುದಾಗಿಯೂ, ಮುಷ್ಕರ ನಿರತ ಸಪ್ತಪಕ್ಷಗಳ ಮೈತ್ರಿಕೂಟ ಮಾತುಕತೆಗೆ ಬರಬೇಕು ಎಂದೂ ಆಹ್ವಾನ ನೀಡಿದರು. ಚಳವಳಿ ನಿರತ ಪಕ್ಷಗಳು ಈ ಪ್ರಕಟಣೆಯನ್ನು ಸ್ವಾಗತಿಸಿದವು. 

2008: ಪುಣೆಗೆ ಸಮೀಪದ ಭಟ್ಗರ್ ಸರೋವರದಲ್ಲಿ ಹಿಂದಿನ ದಿನ ರಾತ್ರಿ ಮದುವೆ ಮುಗಿಸಿ ಬರುತ್ತಿದ್ದ ಜನರನ್ನು ಹೊತ್ತಿದ್ದ ದೋಣಿಯೊಂದು ಮಗುಚಿ ಬಿದ್ದುದರಿಂದ 19 ಮಂದಿ ನೀರುಪಾಲಾದ ದಾರುಣ ಘಟನೆ ನಡೆಯಿತು.ಭೋರ್ ತಾಲ್ಲೂಕಿನ ವೆಲ್ವಂಡ ಹಳ್ಳಿಯಲ್ಲಿ ಮದುವೆ ನಡೆದಿತ್ತು. ವಕಾಂಬಾ ಹಳ್ಳಿಗೆ 28 ಮಂದಿ ದೋಣಿಯಲ್ಲಿ ವಾಪಸ್ ಹೊರಟಿದ್ದರು. ಬಲವಾದ  ಗಾಳಿ ಬೀಸಿದ್ದರಿಂದ ದೋಣಿ ಆಯತಪ್ಪಿ ಮಗುಚಿ ಬಿತ್ತು.

2008: ಭಾರತೀಯ ಜನತಾ ಪಕ್ಷದ 68 ಪುಟಗಳ ಚುನಾವಣಾ ಪ್ರಣಾಳಿಕೆಯನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಪಕ್ಷದ ಹಿರಿಯ ಮುಖಂಡ ಡಾ.ವಿ.ಎಸ್.ಆಚಾರ್ಯ ನೇತೃತ್ವದ ಸಮಿತಿ ತಯಾರಿಸಿದ `ಸಮೃದ್ಧ ಕರ್ನಾಟಕಕ್ಕಾಗಿ ಸಂಕಲ್ಪ- ನಮ್ಮ ಪ್ರಣಾಳಿಕೆ'ಯನ್ನು ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅರುಣ್ ಜೇಟ್ಲಿ ಬಿಡುಗಡೆ ಮಾಡಿದರು.

 2008: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಜೈಜಗದೀಶ್ ಅವರ ನಾಮಪತ್ರ ತಿರಸ್ಕೃತವಾಯಿತು. ರಾಜ್ಯ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯುವ 89 ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಈದಿನ ನಡೆಯಿತು. ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುಸ್ತಾಕ್ ಹುಸೇನ್, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಜೈಜಗದೀಶ್ ಅವರ ನಾಮಪತ್ರ ತಿರಸ್ಕೃತವಾದುದು ಬಿಟ್ಟರೆ ಬಹುತೇಕ ಎಲ್ಲ ಪ್ರಮುಖ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾದವು.

2008: ಇಂಫಾಲ ನಗರದ ಗಣ್ಯಾತಿಗಣ್ಯ ವ್ಯಕ್ತಿಗಳು ವಾಸವಿದ್ದ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡು ಮೂವರು  ಗಾಯಗೊಂಡರು. ಮಣಿಪುರದ ಮುಖ್ಯಮಂತ್ರಿ ಹಾಗೂ ಪೊಲೀಸ್ ಮುಖ್ಯ ಕಚೇರಿಯಿಂದ ನೂರು ಮೀಟರ್ ದೂರದಲ್ಲಿ ಬಾಂಬ್ ಸ್ಫೋಟಗೊಂಡಿತು. ಪ್ರವಾಸೋದ್ಯಮ ಸಚಿವ ಟಿ.ಹೋಕಿಪ್ಸ್ ಅವರ ಮನೆಯಿಂದ ಅತ್ಯಂತ ಸಮೀಪದಲ್ಲಿ ಅಂದರೆ 50 ಮೀಟರಿನಷ್ಟು ಅಂತರದಲ್ಲಿ ಬಾಂಬ್ ಸ್ಪೋಟಗೊಂಡಿತು. ರಾಜ್ಯಪಾಲರು ಭಾಗವಹಿಸಬೇಕಿದ್ದ ಕಾರ್ಯಕ್ರಮದ ಸಮೀಪದಲ್ಲೂ ಬಾಂಬ್ ಹುದುಗಿಸಿ ಇಡಲಾಗಿತ್ತು, ಆದರೆ ಅದು ಸ್ಫೋಟಗೊಳ್ಳುವಲ್ಲಿವಿಫಲವಾಯಿತು.

2008: ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ನೀಡಲಾಗುವ `ಮಾಸ್ತಿ ಪ್ರಶಸ್ತಿ'ಗೆ ಸಂಶೋಧಕ ಡಾ. ಟಿ.ವಿ.ವೆಂಕಟಾಚಲಶಾಸ್ತ್ರಿ ಅವರು ಆಯ್ಕೆಯಾದರು. 75ರ ಹರೆಯದ ವೆಂಕಟಾಚಲಶಾಸ್ತ್ರಿ ಅವರು ಕನಕಪುರದ ಕಾನಕಾನಹಳ್ಳಿಯಲ್ಲಿ 1933ರಲ್ಲಿ ಜನಿಸಿದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ ಆನರ್ಸ್, ಕನ್ನಡ ಎಂ.ಎ. ಪದವಿ ಗಳಿಸಿದ ಅವರು `ಕನ್ನಡ ನೇಮಿನಾಥ ಪುರಾಣಗಳ ತೌಲನಿಕ ಅಧ್ಯಯನ' ಎಂಬ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪಡೆದಿದ್ದಾರೆ. `ಕನ್ನಡ ಛಂದಸ್ಸು', `ಕನ್ನಡ ಚಿತ್ರಕಾವ್ಯ', `ಕನ್ನಡ ಛಂದೋವಿಹಾರ', `ಸಾಹಿತ್ಯ ಮಂಥನ', `ಎಸ್.ಜೆ. ನರಸಿಂಹಾಚಾರ್ಯರ ಕವಿತೆಗಳು' ಕೃತಿಗಳಿಗೆ ಪುರಸ್ಕಾರಗಳು ಸಂದಿವೆ.

2008: ಗಲ್ಲು ಶಿಕ್ಷೆಗೆ ಒಳಗಾಗಿರುವ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರನ್ನು ಭೇಟಿ ಮಾಡಲು ಅವರ ಕುಟುಂಬದ ಸದಸ್ಯರಿಗೆ ಪಾಕಿಸ್ಥಾನ ಸರ್ಕಾರ ಅನುಮತಿ ನೀಡಿತು. ಲಾಹೋರಿನ ಕೋಟ್ ಲಖಪತ್ ಕಾರಾಗೃಹದಲ್ಲಿ ಸರಬ್ಜಿತ್ ಬಂಧಿಯಾಗಿದ್ದು, ಅವರನ್ನು ಭೇಟಿ ಮಾಡುವ ಉದ್ದೇಶದಿಂದ ಅವರ ಕುಟುಂಬದ ಸದಸ್ಯರು ಇಸ್ಲಾಮಾ   ಬಾದಿಗೆ ಬಂದಿದ್ದರು. ಸರಬ್ಜಿತ್ ಅವರ ಪತ್ನಿ ಸುಖ್ ಪ್ರೀತ್ ಕೌರ್, ಪುತ್ರಿಯರಾದ ಸ್ವಪ್ನದೀಪ್ ಮತ್ತು ಪೂನಮ್ ಹಾಗೂ ಸಹೋದರಿ ದಲ್ಬೀರ್ ಕೌರ್ ಅವರ ಪತಿ ಬಲದೇವ್ ಸಿಂಗ್ ವಾಘಾ ಗಡಿಯ ಮೂಲಕ ಪಾಕಿಸ್ಥಾನಕ್ಕೆ ಬಂದರು.

2008: ಬ್ರಿಟನ್ನಿನ `ಡೈಲಿ ಟೆಲಿಗ್ರಾಫ್' ಪತ್ರಿಕೆ ಪ್ರಕಟಿಸಿದ ನೂರು ಪ್ರತಿಷ್ಠಿತ ಪ್ರಭಾವಿಗಳ ಪಟ್ಟಿಯಲ್ಲಿ ಐವರು ಭಾರತೀಯರು ಸ್ಥಾನ ಪಡೆದರು. ವೊಡಾಫೋನ್ ಕಂಪೆನಿಯ ಕಾರ್ಯ ನಿರ್ವಾಹಕ ಅಧಿಕಾರಿ (ಸಿಇಓ) ಅರುಣ್ ಸರೀನ್ ಅವರು ಬ್ರಿಟನ್ ತಂತ್ರಜ್ಞಾನ ಮತ್ತು ಟೆಲಿಕಾಂ ಉದ್ಯಮದ ಅತ್ಯಂತ ಪ್ರಭಾವಿ ಎಂಬ ಹೆಮ್ಮೆಗೆ ಪಾತ್ರರಾಗುವ ಮೂಲಕ ಪ್ರಥಮ ಸ್ಥಾನ ಪಡೆದರು. ಗೂಗಲ್ ಕಂಪೆನಿಯ ಯುರೋಪ್, ಮಧ್ಯಪ್ರಾಚ್ಯ ಹಾಗೂ ಆಫ್ರಿಕಾ ದೇಶಗಳ ವಿಭಾಗೀಯ ಅಧ್ಯಕ್ಷ ನಿಕೇಶ್ ಅರೋರಾ ಎಂಬ ಮತ್ತೊಬ್ಬ ಭಾರತೀಯ ಟೆಲಿಕಾಂ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದರು. ಬ್ಯಾಂಕಿಂಗ್ ಮತ್ತು ವಿಮಾ ಉದ್ಯಮದ ಅನ್ಶು ಜೈನ್ ಆ ರಂಗದ ಪ್ರತಿಷ್ಠಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದರೆ, ಬಿ.ಟಿ. ಗ್ರೂಪಿನ ಹಣಕಾಸು ನಿರ್ದೇಶಕ ಹನೀಫ್ ಲಾಲನಿ 22ನೇ ಸ್ಥಾನದಲ್ಲಿ ಮತ್ತು ಕೋಲ್ಟ್ ಟೆಲಿಕಾಂನ ರಾಕೇಶ್ ಭಾಸಿನ್ 75ನೇ ಸ್ಥಾನ ಪಡೆದರು. ಇವರೆಲ್ಲರೂ ಭಾರತೀಯ ಮೂಲದವರು.  

 2008: ವ್ಯಾಯಾಮದಿಂದ ಹೃದಯಕ್ಕೆ ಸುರಕ್ಷೆ ಸಿಗುತ್ತದೆ. ದೈಹಿಕ ವ್ಯಾಯಾಮ ಹೃದಯದ ಸಂರಚನೆ ಮತ್ತು ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾಷಿಂಗ್ಟನ್ನಿನ ಸಂಶೋಧನೆಯೊಂದು ಬಹಿರಂಗಪಡಿಸಿತು. ಸುಮಾರು 90 ದಿನಗಳ ಕಾಲ ಕಠಿಣ ಅಥ್ಲೆಟಿಕ್ ಚಟುವಟಿಕೆಯಲ್ಲಿ ತೊಡಗುವ ವ್ಯಕ್ತಿಗಳ ಹೃದಯ ಮತ್ತು ಅದರ ಕಾರ್ಯದ ಮೇಲೆ ಆದ ಭಾರಿ ಪರಿಣಾಮಗಳನ್ನು ಸಂಶೋಧಕರು ಗುರುತಿಸಿದರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿನ ಅಥ್ಲೆಟಿಕ್ಸ್ ವಿದ್ಯಾರ್ಥಿಗಳ ಎರಡು ಗುಂಪುಗಳನ್ನು ಮಾಡಿ, ಅವರ ಮೇಲೆ ನಡೆಸಿದ ಅಧ್ಯಯನ ಸಹ ಇಂತಹುದೇ ಫಲಿತಾಂಶ ನೀಡಿದೆ.  ಈ ಬಗ್ಗೆ ವಾಷಿಂಗ್ಟನ್ನಿನ `ಅಪ್ಲೈಡ್ ಫಿಜಿಯಾಲಜಿ'ಯ ಏಪ್ರಿಲ್ ನಿಯತಕಾಲಿಕದಲ್ಲಿ ವಿಸ್ತೃತ ವರದಿ ಪ್ರಕಟಿಸಲಾಯಿತು.

2007: ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದ ಸೇವ್ ದಿ ಚಿಲ್ಡ್ರನ್ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ನಿರ್ದೇಶಕಿ ವಿಪುಲ ಕದ್ರಿ (71) ಮುಂಬೈಯಲ್ಲಿ ನಿಧನರಾದರು. ಇವರ ಪುತ್ರಿ ಮನಾಶೆಟ್ಟಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರ ಪತ್ನಿ.

2007: ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕು ನೀರಮಾನ್ವಿ ಗ್ರಾಮದಲ್ಲಿ ಮಧ್ಯಾಹ್ನ ಆಟವಾಡಲು ಹೊಲಕ್ಕೆ ಹೋದ ಸಂದೀಪ ಎಂಬ 8 ವರ್ಷದ ಬಾಲಕ ಕೊಳವೆ ಬಾವಿಯೊಳಕ್ಕೆ ಬಿದ್ದ.

2007: ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಹಸ್ರ ಚಂಡಿಕಾ ಯಾಗದ ಪೂರ್ಣಾಹುತಿಯು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಿತು.

2007: ವಿದೇಶೀ ಮತ್ತು ದೇಶೀಯ ಗೋ ತಳಿಗಳ ಜೀನುಗಳು ತೀರಾ ವಿಭಿನ್ನ ಗುಣಗಳನ್ನು ಹೊಂದಿದ್ದು, ಈ ವಿಭಿನ್ನ ತಳಿಗಳ ನಡುವೆ ಸಂಕರ ಸಲ್ಲದು, ಇದರಿಂದ ಮೂಲ ದೇಶೀಯ ಶುದ್ಧ ತಳಿಗಳಿಗೆ ಆಪತ್ತು ಬರುತ್ತದೆ ಎಂದು ಥಾಯ್ಲೆಂಡಿನ ಡಾ. ಡೇವಿಡ್ ಸ್ಟೀವ್ ಹೊಸನಗರದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಗೋ ವಿಚಾರ ಮಂಥನ ಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಾವಯವ ಕೃಷಿ ತಜ್ಞ ಸುಭಾಶ ಪಾಳೇಕರ್ ಅಧ್ಯಕ್ಷತೆ ವಹಿಸಿದ್ದರು.

2006: ಪ್ರಜಾಪ್ರಭುತ್ವ ಸ್ಥಾಪನೆಗಾಗಿ ಎಡಬಿಡದೆ ನಡೆದ ಚಳವಳಿಗೆ ನೇಪಾಳದ ರಾಜಸತ್ತೆ ಕೊನೆಗೂ ಮಣಿಯಿತು. ಈ ದಿನ ರಾತ್ರಿ ಟೆಲಿವಿಷನ್ನಿನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ದೊರೆ ಜ್ಞಾನೇಂದ್ರ 2002ರಲ್ಲಿ ತಾವು ವಿಸರ್ಜಿಸಿದ್ದ ಸಂಸತ್ತಿಗೆ ಮರುಜೀವ ನೀಡಿ ಮತ್ತೆ ಸಮಾವೇಶಗೊಳಿಸುವುದಾಗಿಯೂ, ಮುಷ್ಕರ ನಿರತ ಸಪ್ತಪಕ್ಷಗಳ ಮೈತ್ರಿಕೂಟ ಮಾತುಕತೆಗೆ ಬರಬೇಕು ಎಂದೂ ಆಹ್ವಾನ ನೀಡಿದರು. ಚಳವಳಿ ನಿರತ ಪಕ್ಷಗಳು ಈ ಪ್ರಕಟಣೆಯನ್ನು ಸ್ವಾಗತಿಸಿದವು. 

2006: ಲಾಭದ ಹುದ್ದೆ ಹೊಂದಿದ ಕಾರಣಕ್ಕಾಗಿ ರಾಜ್ಯಸಭಾ ಸದಸ್ಯತ್ವದಿಂದ ಅನರ್ಹಗೊಂಡ ಸಮಾಜವಾದಿ ಪಕ್ಷದ ನಾಯಕಿ, ಹಿರಿಯ ಚಿತ್ರನಟಿ ಜಯಾ ಬಚ್ಚನ್ ಅವರು ತಮ್ಮ ವಿರುದ್ಧದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದರು..

2006: ಜಗತ್ತಿನ ಮೊತ್ತ ಮೊದಲ ತದ್ರೂಪಿ ನಾಯಿ ಸ್ನಪ್ಪಿ ಕೊರಿಯಾದ ಸೋಲ್ ನಲ್ಲಿ ತನ್ನ ಮೊದಲ ಹುಟ್ಟುಹಬ್ಬ ಆಚರಿಸಿತು. ಆದರೆ ಈ ನಾಯಿಯನ್ನು ಸೃಷ್ಟಿಸಿದ ವಿಜ್ಞಾನಿಗಳ ತಂಡ ಹಾಗೂ ಅದರ ನಾಯಕ ದಕ್ಷಿಣ ಕೊರಿಯಾದ ಹ್ವಾಂಗ್ ವೂ-ಸಕ್ ಅವರು ವಂಚನೆ ಮತ್ತು ನೈತಿಕತೆಯ ಉಲ್ಲಂಘನೆಗಾಗಿ ವಿಚಾರಣೆಗೆ ಗುರಿಯಾದರು. 2005ರಲ್ಲಿ ದಕ್ಷಿಣ ಕೊರಿಯಾದ ಈ ವಿಜ್ಞಾನಿಗಳ ತಂಡ ತದ್ರೂಪಿ ನಾಯಿ ಸೃಷ್ಟಿಯನ್ನು ಪ್ರಕಟಿಸಿದಾಗ ಟೈಮ್ ನಿಯತಕಾಲಿಕ ಈ ವರ್ಷದ ಅದ್ಭುತ ಸಂಶೋಧನೆಗಳಲ್ಲಿ ಇದು ಒಂದು ಬಣ್ಣಿಸಿತ್ತು. ಹ್ವಾನ್ ಅವರನ್ನು ಆಗ ಕೊರಿಯಾದ ಹೆಮ್ಮೆ ಎಂದು ಬಣ್ಣಿಸಲಾಗಿತ್ತು. ಆದರೆ ವರ್ಷಾಂತ್ಯದ ವೇಳೆಗೆ ಮಾನವ ಭ್ರೂಣ ಸಂಗ್ರಹಕ್ಕೆ ಸಂಬಂಧಿಸಿದಂತೆ ನೈತಿಕತೆಯನ್ನು ಉಲ್ಲಂಘಿಸಿದ ಆರೋಪಕ್ಕೆ ಹ್ವಾನ್ ಮತ್ತು ಅವರ ತಂಡ ಗುರಿಯಾಯಿತು.

2006: ಖ್ಯಾತ ಹಿನ್ನಲೆ ಗಾಯಕ, ಐದು ಫಿಲ್ಮ್ ಫೇರ್ ಪ್ರಶಸ್ತಿಗಳ ವಿಜೇತ ಉದಿತ್ ನಾರಾಯಣ್ ಅವರಿಗೆ ಬಿಹಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಪ್ರಕಾಶ್ ಅವರು  ನೋಟಿಸ್ ಕಳುಹಿಸಿ 15 ದಿನಗಳ ಒಳಗಾಗಿ ತಮ್ಮ ಮುಂದೆ ಹಾಜರಾಗಿ ರಂಜನಾ ನಾರಾಯಣ್ ಅವರನ್ನು ತನ್ನ ಪತ್ನಿ ಅಲ್ಲವೆಂದು ಹೇಳಿರುವುದು ಏಕೆ ಎಂದು ವಿವರಣೆ ನೀಡುವಂತೆ ಆಜ್ಞಾಪಿಸಿದರು. ವಾರದ ಹಿಂದೆ ಪಟ್ನಾದ ಐಶಾರಾಮಿ ಹೊಟೇಲ್ ಒಂದರಲ್ಲಿ ಉದಿತ್ ನಾರಾಯಣ್ ತನ್ನ ಪತ್ನಿ ದೀಪಾ ಮತ್ತು ಪುತ್ರ ಆದಿತ್ಯ ಜತೆ ಇದ್ದಾಗ ಅಲ್ಲಿಗೆ ರಂಜನಾ ನುಗ್ಗಿದ್ದರಿಂದ ಉದಿತ್ ನಾರಾಯಣ್ ಇಬ್ಬರನ್ನು ಮದುವೆಯಾದ ವಿಷಯ ಬೆಳಕಿಗೆ ಬಂದಿತ್ತು.

1973: ಕೇಶವಾನಂದ ಭಾರತೀ ಪ್ರಕರಣದಲ್ಲಿ ಭಾರತದ ಸುಪ್ರೀಂಕೋರ್ಟಿನ ಸಂವಿಧಾನ ಪೀಠವು ನೀಡಿದ್ದ ತನ್ನ ಹಿಂದಿನ ತೀರ್ಪನ್ನು ಬದಲಾಯಿಸಿ ಚಾರಿತ್ರಿಕ ತೀರ್ಪು ನೀಡಿತು. ಮೂಲಭೂತ ಹಕ್ಕುಗಳಿಗೆ ಸಂಸತ್ತು ತಿದ್ದುಪಡಿ ತರಲಾಗದು ಮತ್ತು ಅಂತಹ ಯಾವುದೇ ಬದಲಾವಣೆಗಳಿಗೆ ಹೊಸ ಸಂವಿಧಾನಬದ್ಧ ಶಾಸನಸಭೆಯ ರಚನೆಯಾಗಬೇಕು ಎಂಬುದಾಗಿ (ಗೋಲಕನಾಥ್ ಪ್ರಕರಣದಲ್ಲಿ) ಹಿಂದೆ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಬದಲಾಯಿಸಿತು. ಸಂವಿಧಾನದ ಕೆಲವು ಮೂಲಭೂತ ಲಕ್ಷಣಗಳನ್ನು ಮಾತ್ರ ಬದಲಾಯಿಸುವಂತಿಲ್ಲ ಎಂದು ಅದು ಹೇಳಿತು.

1973: ಸಚಿನ್ ತೆಂಡೂಲ್ಕರ್ ಹುಟ್ಟಿದ ದಿನ.

1971: ಕಲಾವಿದ ಶ್ರೀಧರ ಎಸ್. ಚವ್ಹಾಣ್ ಜನನ.

1962: ಕಲಾವಿದೆ ನಿರ್ಮಲ ಕುಮಾರಿ ಜನನ.

1960: ಕಲಾವಿದ ಕೆ.ವಿ. ಅಕ್ಷರ ಜನನ.

1958: ಕಲಾವಿದ ರಾಮಾನುಜನ್ ಜಿ.ಎಸ್. ಜನನ.

1947: ಕಲಾವಿದ ಅಚ್ಯುತರಾವ್ ಪದಕಿ ಜನನ.

1929: ಕನ್ನಡದ ವರನಟ ಡಾ. ರಾಜಕುಮಾರ್ (1929-2006) ಜನ್ಮದಿನ. ಮೂಲತಃ ಮುತ್ತುರಾಜ್ ಎಂಬ ಹೆಸರು ಇದ್ದ ಅವರು ಮುಂದೆ ಕನ್ನಡ ಚಲನಚಿತ್ರ ರಂಗದ ಮೇರು ನಟನಾಗಿ `ರಾಜಕುಮಾರ್' ಎಂಬ ಹೆಸರಿನಿಂದಲೇ ಮನೆ ಮಾತಾದರು. 2006ರ ಏಪ್ರಿಲ್ 12ರಂದು ತಮ್ಮ ಜನ್ಮದಿನಾಚರಣೆಗೆ 11 ದಿನ ಮೊದಲು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.

1927: ಖ್ಯಾತ ಗಾಯಕಿ ಜಯವಂತಿದೇವಿ ಹಿರೇಬೆಟ್ಟು ಅವರು ಪಡುಕೋಣೆ ರಮಾನಂದರಾಯರು- ಸೀತಾದೇವಿ ದಂಪತಿಯ ಮಗಳಾಗಿ ಮಂಗಳೂರಿನಲ್ಲಿ ಜನಿಸಿದರು. ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿಯಾದ ಸಂತ ಶಿಶುನಾಳ ಶರೀಫ ಪ್ರಶಸ್ತಿಯ ಪ್ರಥಮ ಪುರಸ್ಕೃತೆಯಾದ ಈಕೆ ಮಹಾತ್ಮ ಗಾಂಧೀಜಿವರ ಪ್ರಾರ್ಥನಾ ಸಭೆಯಲ್ಲಿ ವಂದೇ ಮಾತರಂ ಹಾಡಿದ್ದರು. ತ್ಯಾಗಯ್ಯ, ಕಲ್ಪನಾ ಚಿತ್ರಗಳಲ್ಲೂ ಹಿನ್ನೆಲೆ ಗಾಯಕರಾಗಿ ಹಾಡಿದ್ದರು. ಆಲ್ ಇಂಡಿಯಾ ರೇಡಿಯೋದಲ್ಲಿ ಅವರು ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮಗಳು ತುಂಬ ಹೆಸರುವಾಸಿ.

 1889: ಸರ್ ಸ್ಟಾಫರ್ಡ್ ಕ್ರಿಪ್ಸ್ (1889-1952) ಜನ್ಮದಿನ. ಭಾರತಕ್ಕೆ ಸ್ವಾತಂತ್ರ್ಯ ನೀಡುವ ನಿಟ್ಟಿನಲ್ಲಿ ಇಂಗ್ಲೆಂಡ್ ಮತ್ತು ಭಾರತದ ಮಧ್ಯೆ ಮಾತುಕತೆ ನಡೆಸುವ ಸಲುವಾಗಿ ಈತನ ನೇತೃತ್ವದಲ್ಲಿ ಭಾರತಕ್ಕೆ ನಿಯೋಗವೊಂದು ಬಂದಿತ್ತು. ಅದಕ್ಕೆ `ಕ್ರಿಪ್ಸ್ ಮಿಷನ್' ಎಂದೇ ಹೆಸರು ಬಂದಿತು.

1800: ಜಗತ್ತಿನಲ್ಲೇ ಅತ್ಯಂತ ದೊಡ್ಡದೆಂದು ಹೆಸರು ಪಡೆದಿರುವ ಯುನೈಟೆಡ್ ಸ್ಟೇಟ್ಸ್ ಲೈಬ್ರರಿ ಆಫ್ ಕಾಂಗ್ರೆಸ್ ವಾಷಿಂಗ್ಟನ್ ಡಿ.ಸಿ.ಯಲ್ಲಿ ಸ್ಥಾಪನೆಯಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Thursday, April 23, 2009

ಸಮುದ್ರ ಮಥನ 27: ಪ್ರೇಮವೆಂಬ ದೈವೀ ಭಾವದ ಸಂಗದಲ್ಲಿ

ಸಮುದ್ರ ಮಥನ 27:

 ಪ್ರೇಮವೆಂಬ ದೈವೀ ಭಾವದ ಸಂಗದಲ್ಲಿ


ಅಂತಹವನು ಶಬರಿ ಕಚ್ಚಿಕೊಟ್ಟ ಹಣ್ಣನ್ನು ತಿನ್ನುತ್ತಾನೆ, ಕಪಿ ರಾಜ ಸುಗ್ರೀವನ ಪಕ್ಕದಲ್ಲಿ ಕುಳಿತುಕೊಳ್ಳುತ್ತಾನೆ, ಶತ್ರು ಪಕ್ಷದ ವಿಭೀಷಣನೆಂಬ ರಾಕ್ಷಸನಿಗೆ ಸ್ನೇಹದ ಹಸ್ತವನ್ನು ಚಾಚುತ್ತಾನೆ, ಕಪಿ ಕುಲ ತಿಲಕ ಹನುಮಂತನ ಆಪ್ತ ಸಖನಾಗುತ್ತಾನೆ, ಬೇಟೆಗಾರ ಗುಹನ ಸ್ನೇಹ ಸಂಪಾದಿಸುತ್ತಾನೆ, ಪಕ್ಷಿ ರಾಜ ಜಟಾಯುವಿನ ಪ್ರಾಣ ಸಂಕಟದಲ್ಲಿರುವಾಗ ಮರುಗುತ್ತಾನೆ.

ಸಮಾಜದಲ್ಲಿ ಎರಡು ವರ್ಗಗಳು. ಒಂದು ಆಳುವ ವರ್ಗ, ಮತ್ತೊಂದು ಪ್ರಜಾ ವರ್ಗ. 
ಎರಡೂ ಸಮಾನಾಂತರ ಗತಿಯಲ್ಲಿ ಮುನ್ನಡೆಯುತ್ತಿರುತ್ತವೆ.

ಆಳುವವರು ಆಳುತ್ತಲೇ ಇರುತ್ತಾರೆ. ಅವರೆಂದೂ ಪ್ರಜೆಗಳ ಕೆಳಗೆ ಬರುವುದಿಲ್ಲ. ಹಾಗೆಯೇ, ಪ್ರಜೆಗಳು ಕೂಡ. ಅವರಿಗೆ ತಮ್ಮ ದಿನನಿತ್ಯದ ಜಂಜಡಗಳಿಂದ ಮೇಲೆದ್ದು ಆಳ್ವಿಕೆ ನಡೆಸುವಷ್ಟು ಚೈತನ್ಯವೇ ಉಳಿದಿರುವುದಿಲ್ಲ.

ಹಾಗಾಗಿ, ಆಳುವವರು ಉಳಿದವರನ್ನೆಲ್ಲ ತಮ್ಮ ಬಿಗಿ ಮುಷ್ಠಿಯಲ್ಲಿ ವಶಪಡಿಸಿಟ್ಟುಕೊಂಡಿರುತ್ತಾರೆ. ಅವರು ಯಾವತ್ತೂ ತಮ್ಮ ಅನುವರ್ತಿಗಳ ವಶವಾಗುವುದಿಲ್ಲ. ಅವರ ಸಾಮರ್ಥ್ಯ ಅವರನ್ನು ಇನ್ನೊಬ್ಬರ ವಶದಲ್ಲಿ ಇರಲು ಬಿಟ್ಟುಕೊಡುವುದಿಲ್ಲ.

ಇಂತಹ ನಡೆಗೆ ಅಪವಾದಗಳು ಇಲ್ಲದಿಲ್ಲ. ಆಳುವವರು ಯಥಾಪ್ರಕಾರ ತಮ್ಮ ಕರ್ತವ್ಯವೆಂಬಂತೆ ಆಳ್ವಿಕೆ ನಡೆಸುತ್ತಾರೆ. ಮತ್ತೊಂದೆಡೆ ಭಾವ ತೀವ್ರತೆಗೆ ಮಣಿದು ಪ್ರಜೆಗಳ ವಶಕ್ಕೂ ಹೋಗುತ್ತಾರೆ. ಸಂದರ್ಭಕ್ಕೆ ಉಚಿತವಾಗುವಂತೆ ವರ್ತಿಸುತ್ತಾ ಹೋಗುತ್ತಾರೆ. ಮತ್ತೂ ಹೇಳಬೇಕೆಂದರೆ ನಡೆ ಹಾಗ್ಹಾಗೆ ನಡೆದುಕೊಂಡು ಹೋಗುತ್ತದೆ.

ಇಂತಹ ನಡೆಗೆ ಬೇಕಾಗಿರುವುದು ಪ್ರೇಮವೆಂಬ ದೈವೀ ಭಾವ. ಅದು ಅವರನ್ನು ಪ್ರೇಮಿಸುವವರನ್ನು ಅವರ ವಶಕ್ಕೆ ತೆಗೆದುಕೊಳ್ಳಲು ಸಹಕರಿಸುತ್ತದೆ. ಅಂತೆಯೇ, ಇವರಿಗೆ ಇನ್ನಾರಲ್ಲೋ ಪ್ರೇಮ ಬಾಂಧವ್ಯ ಏರ್ಪಟ್ಟರೆ, ಅವರ ವಶದಲ್ಲಿರುವಂತೆಯೂ ಈ ಪ್ರೇಮ ನೋಡಿಕೊಳ್ಳುತ್ತದೆ.

ರಾಮಾಯಣವನ್ನೊಮ್ಮೆ ನೋಡಬೇಕು. ರಾಮ ಅಲ್ಲಿ ರಾಜ. ಎಲ್ಲರನ್ನೂ ಆಳುವವನು. ಆಳ್ವಿಕೆಯಲ್ಲಿ ರಾಮರಾಜ್ಯವೆಂಬ ಆದರ್ಶವನ್ನೇ ಕೊಟ್ಟವನು. ಅಂತಹವನು ಶಬರಿ ಕಚ್ಚಿಕೊಟ್ಟ ಹಣ್ಣನ್ನು ತಿನ್ನುತ್ತಾನೆ, ಕಪಿ ರಾಜ ಸುಗ್ರೀವನ ಪಕ್ಕದಲ್ಲಿ ಕುಳಿತುಕೊಳ್ಳುತ್ತಾನೆ, ಶತ್ರು ಪಕ್ಷದ ವಿಭೀಷಣನೆಂಬ ರಾಕ್ಷಸನಿಗೆ ಸ್ನೇಹದ ಹಸ್ತವನ್ನು ಚಾಚುತ್ತಾನೆ, ಕಪಿ ಕುಲ ತಿಲಕ ಹನುಮಂತನ ಆಪ್ತ ಸಖನಾಗುತ್ತಾನೆ, ಬೇಟೆಗಾರ ಗುಹನ ಸ್ನೇಹ ಸಂಪಾದಿಸುತ್ತಾನೆ, ಪಕ್ಷಿ ರಾಜ ಜಟಾಯುವಿನ ಪ್ರಾಣ ಸಂಕಟದಲ್ಲಿರುವಾಗ ಮರುಗುತ್ತಾನೆ, 

ಹೀಗೇ ಸಾಗುತ್ತ ವೃಕ್ಷ-ಪುಷ್ಪಗಳಿಗೆ, ಹಕ್ಕಿ-ಪಕ್ಷಿಗಳಿಗೆ, ನದಿ-ತೊರೆಗಳಿಗೆ ವಶವಾಗುತ್ತಾನೆ. ಅಷ್ಟಕ್ಕೇ ನಿಲ್ಲದೇ ಅವೂ ಅವನ ವಶವಾಗುತ್ತವೆ. 'ವಶ ಭಾವ' ಪರಸ್ಪರವಾಗುತ್ತದೆ.

ಹೀಗೆ ಪ್ರೀತಿ ವರ್ಗಭೇದಗಳನ್ನು ಮೀರಿ ಎಲ್ಲರನ್ನೂ ಬೆಳೆಸುತ್ತದೆ. ಒಂದು ಮತ್ತೊಂದರಲ್ಲಿ ಕರಗಲು, ಕಡೆಯಲ್ಲಿ ಒಂದಾಗಲು ಅನುವು ಮಾಡಿಕೊಡುತ್ತದೆ. ಪ್ರೀತಿ ಗೆಲ್ಲುತ್ತದೆ, ಗೆಲುವಿನ ನಗೆಯನ್ನು ಬೀರುತ್ತದೆ.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ
 

ಇಂದಿನ ಇತಿಹಾಸ History Today ಏಪ್ರಿಲ್ 23

ಇಂದಿನ ಇತಿಹಾಸ

ಏಪ್ರಿಲ್ 23

 ಪುಷ್ಪಕುಮಾರ್ ದಹಾ ಅಲಿಯಾಸ್ `ಪ್ರಚಂಡ' ಅವರ ನೇತೃತ್ವದಲ್ಲಿಯೇ ಮುಂದಿನ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನೇಪಾಳದ ಕಮ್ಯುನಿಸ್ಟ್ ಪಕ್ಷ (ಸಿಪಿಎನ್-ಎಂ) ಕಠ್ಮಂಡುವಿನಲ್ಲಿ ಘೋಷಿಸಿತು. ಈ ಸಂಬಂಧ ನಗರದಲ್ಲಿ ಸಭೆ ಸೇರಿದ ಪಕ್ಷದ ವರಿಷ್ಠರು, ಪ್ರಚಂಡ ಪ್ರಧಾನಿಯಾಗಿ ಅಥವಾ ರಾಷ್ಟ್ರಾಧ್ಯಕ್ಷರಾಗಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಬೇಕೆಂದು ತೀರ್ಮಾನಿಸಿದರು. 

ಇಂದು ವಿಶ್ವ ಪುಸ್ತಕ ದಿನ.

 2008: ಕೇರಳದ ತ್ರಿಶ್ಶೂರ್ ಜಿಲ್ಲೆಯ ಇರಿಂಜಲಕೂಡ ಕೂಡಮಾಣಿಕ್ಯ ದೇವಸ್ಥಾನದಲ್ಲಿ ಉತ್ಸವ ನಡೆಯುತ್ತಿದ್ದ ವೇಳೆ ಆನೆಯೊಂದು ಯದ್ವಾತದ್ವ ಓಡಿ ತುಳಿದ ಘಟನೆಯಲ್ಲಿ ಮಹಿಳೆಯೊಬ್ಬರ ಸಹಿತ ಮೂವರು ಮೃತರಾದರು. `ತಿರುವಲ್ಲ ಉಣ್ಣಿಕೃಷ್ಣನ್' ಹೆಸರಿನ ಈ ಸಾಕಿದ ಆನೆಯನ್ನು ಉತ್ಸವದ ಸಲುವಾಗಿ ಬೇರೆಡೆಯಿಂದ ಕರೆತರಲಾಗಿತ್ತು. ದೇವಸ್ಥಾನದಲ್ಲಿ `ಕರ್ಚಶಿವೇಲಿ' ಧಾರ್ಮಿಕ ವಿಧಿ ನಡೆದ ಕೆಲವೇ ಕ್ಷಣದಲ್ಲಿ ಈ ದುರಂತ ಘಟಿಸಿತು.

2008: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವರ್ದಯಪಾಳೆಂನಲ್ಲಿ ಇರುವ ಕಲ್ಕಿ ಭಗವಾನ್ ಆಶ್ರಮದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಕುಡಿಯುವ ನೀರಿಗಾಗಿ ನೂಕುನುಗ್ಗಾಟ ನಡೆಸಿದಾಗ ಕಾಲ್ತುಳಿತ ಉಂಟಾಗಿ ಐವರು ಮೃತರಾದರು. ಸುಡುಬಿಸಿಲಿನ ಈ ಸನ್ನಿವೇಶದಲ್ಲಿ ಆಶ್ರಮವು ಸಮರ್ಪಕವಾಗಿ ಕುಡಿವ  ನೀರಿನ ವ್ಯವಸ್ಥೆ ಮಾಡದೆ ಇದ್ದುದು ಈ ಘಟನೆಗೆ ಕಾರಣ ಎಂದು ಚಿತ್ತೂರು ಜಿಲ್ಲಾ ಪೊಲೀಸ್ ವರಿಷ್ಠರಾದ  ಕೆ. ಲಕ್ಷ್ಮಿ ರೆಡ್ಡಿ ತಿಳಿಸಿದರು. ಕಲ್ಕಿ ಭಗವಾನ್  ಏಕತಾ ವಿ.ವಿ. ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಲ್ಕಿ ಭಗವಾನ್  ದರ್ಶನಕ್ಕಾಗಿ ದೇಶದ ನಾನಾ ಭಾಗಗಳಿಂದ ಜನರು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು.

 2008: ಪುಷ್ಪಕುಮಾರ್ ದಹಾ ಅಲಿಯಾಸ್ `ಪ್ರಚಂಡ' ಅವರ ನೇತೃತ್ವದಲ್ಲಿಯೇ ಮುಂದಿನ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನೇಪಾಳದ ಕಮ್ಯುನಿಸ್ಟ್ ಪಕ್ಷ (ಸಿಪಿಎನ್-ಎಂ) ಕಠ್ಮಂಡುವಿನಲ್ಲಿ ಘೋಷಿಸಿತು. ಈ ಸಂಬಂಧ ನಗರದಲ್ಲಿ ಸಭೆ ಸೇರಿದ ಪಕ್ಷದ ವರಿಷ್ಠರು, ಪ್ರಚಂಡ ಪ್ರಧಾನಿಯಾಗಿ ಅಥವಾ ರಾಷ್ಟ್ರಾಧ್ಯಕ್ಷರಾಗಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಬೇಕೆಂದು ತೀರ್ಮಾನಿಸಿದರು. ರಾಜಪ್ರಭುತ್ವ ಕೊನೆಗೊಳಿಸಿ, ಗಣರಾಜ್ಯವನ್ನು ಸ್ಥಾಪಿಸುವ ತಮ್ಮ ಈ ಹಿಂದಿನ ತೀರ್ಮಾನವನ್ನು ಮತ್ತೊಮ್ಮೆ ಪುನರುಚ್ಚರಿಸಿದರು.

2008: ಭಾರತದ ಮಹಿಳಾ ಡಿಸ್ಕಸ್ ಥ್ರೋ ಸ್ಪರ್ಧಿ ಕೃಷ್ಣ ಪೂನಿಯ ಅವರು ಬೀಜಿಂಗ್ ಒಲಿಂಪಿಕ್ ಕೂಟದಲ್ಲಿ ಪಾಲ್ಗೊಳ್ಳಲು ಅರ್ಹತೆ ಗಿಟ್ಟಿಸಿದರು. ಅಮೆರಿಕದಲ್ಲಿ ನಡೆದ ಮಹಿಳೆಯರ ಆಹ್ವಾನಿತ ಕೂಟದಲ್ಲಿ ಒಲಿಂಪಿಕ್ ಕೂಟಕ್ಕೆ ಅರ್ಹತೆ ಗಿಟ್ಟಿಸಲು ಬೇಕಾದಷ್ಟು ದೂರವನ್ನು ಸಾಧಿಸಲು ಕೃಷ್ಣ ಪೂನಿಯ ಯಶಸ್ವಿಯಾದರು. ಕ್ಯಾಲಿಫೋರ್ನಿಯಾದ ಹಿಲ್ಮರ್ ಲಾಜರ್ ಕ್ರೀಡಾಂಗಣದಲ್ಲಿ ಏಪ್ರಿಲ್ 17 ರಿಂದ 20ರ ವರೆಗೆ ನಡೆದ ಅಥ್ಲೆಟಿಕ್ ಕೂಟದ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಕೃಷ್ಣ ಡಿಸ್ಕಸನ್ನು 59.04 ಮೀ. ದೂರ ಎಸೆದರು. ಇದರೊಂದಿಗೆ ಕೃಷ್ಣ ಪೂನಿಯ ಅವರು ಬೀಜಿಂಗ್ ಕೂಟಕ್ಕೆ ಅರ್ಹತೆ ಪಡೆದ ಭಾರತದ ಐದನೇ ಅಥ್ಲೀಟ್ ಎನಿಸಿದರು. ವಿಕಾಸ್ ಗೌಡ ಅವರು ಪುರುಷರ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಅರ್ಹತೆ ಪಡೆದಿದ್ದಾರೆ.

2008: ಪಾಕಿಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಏಕೈಕ ಸಿಖ್ ಸಂಚಾರಿ ಪೊಲೀಸ್ ವಾರ್ಡನ್ ಮತಭೇದದಿಂದ ಅವಮಾನಿತರಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಬೆಳಕಿಗೆ ಬಂತು. ಗುಲಾಬ್ ಸಿಂಗ್ ಅವರು ಪಕ್ಷಭೇದ ನೀತಿಯಿಂದ ಅವಮಾನಿತರಾಗಿ ಎರಡು ದಿನಗಳ ಹಿಂದೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದವರು. ತಾವು ಮುಸ್ಲಿಮ್ ಜನಾಂಗಕ್ಕೆ ಸೇರಿದವರಲ್ಲ ಎಂಬ ಕಾರಣಕ್ಕೆ ಸಹೊದ್ಯೋಗಿಗಳು ಕೀಳಾಗಿ ಕಾಣುತ್ತಿದ್ದರು ಎಂದು ಸಿಂಗ್ ಆರೋಪಿಸಿದರು. ಅಲ್ಲದೆ ಸಿಖ್ ಧರ್ಮದ ಬಗ್ಗೆ ಅವರು ಹೀನಾಯವಾಗಿ ಮಾತನಾಡಿ ರಂಜನೆ ಪಡೆಯುತ್ತಿದ್ದರು. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ತಮ್ಮ ಮೇಲೆ ಅವಮಾನ ಹೆಚ್ಚಾಯಿತು. ಆದ್ದರಿಂದ ನೊಂದು ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಹೇಳಿದರು.

2008: ಪುಟ್ಟ ಚಾಕೊಲೆಟ್ಟಿಗೆ ಇರುವ ತಾಕತ್ತು ಸಾಮಾನ್ಯವಲ್ಲ. ಕೊಲೆಸ್ಟರಾಲ್ ಅಂಶವನ್ನು ಕರಗಿಸಬಲ್ಲ ಶಕ್ತಿ ಚಾಕೊಲೆಟ್ಟಿಗೆ ಇದೆ ಎಂದು ನ್ಯೂಯಾರ್ಕಿನ `ಜರ್ನಲ್ ಆಫ್ ನ್ಯೂಟ್ರಿಷನ್' ಎನ್ನುವ ನಿಯತಕಾಲಿಕವು ವಿಶೇಷ ವರದಿಯೊಂದರಲ್ಲಿ ಪ್ರಕಟಿಸಿತು. ರಕ್ತದೊತ್ತಡಕ್ಕೂ ಚಾಕೊಲೆಟ್ ಮದ್ದು ಎಂಬುದು ಈ ವರದಿಯ ಪ್ರತಿಪಾದನೆ. ರಕ್ತದೊತ್ತಡ ಮತ್ತು ಕೊಲೆಸ್ಟರಾಲ್ ತೊಂದರೆ ಇದ್ದವರ ಮೇಲೆ ಪ್ರತ್ಯೇಕವಾಗಿ ಚಾಕೊಲೆಟ್ ತಿನ್ನಿಸುವ  ಪ್ರಯೋಗ ನಡೆಸಲಾಯಿತು. ಚಾಕೊಲೆಟ್ ಸೇವನೆಯಿಂದ ಅವರ ಮೇಲಾದ ಪರಿಣಾಮಗಳನ್ನು ಪರಿಗಣಿಸಿದಾಗ ಸತ್ಯಾಂಶ ಬೆಳಕಿಗೆ ಬಂತು ಎಂಬುದು ಸಂಶೋಧಕರ ಪ್ರತಿಪಾದನೆ ಎಂದು ವರದಿ ವಿವರಿಸಿತು.

2007: ಸೋವಿಯತ್ ಒಕ್ಕೂಟದ ವಿಭಜನೆಯ ನಂತರದ ರಷ್ಯಾದ ಪ್ರಥಮ ಚುನಾಯಿತ ಅಧ್ಯಕ್ಷ ಬೋರಿಸ್ ಯೆಲ್ಸಿನ್ (76) ನಿಧನರಾದರು. ರಷ್ಯಾ ಕಂಡ ಅಪರೂಪದ ನಾಯಕ, ಯೆಲ್ಸಿನ್ ಜನಪ್ರಿಯತೆಯ ಉತ್ತುಂಗ, ವಿರೋಧದ ಅಲೆ ಎರಡನ್ನೂ ಎದುರಿಸಿದ ಮುಖಂಡ.  ಅತ್ಯಂತ ಪರಿಣಾಮಕಾರಿ ಸುಧಾರಕನಾಗಿ 1991ರಲ್ಲಿ ಗೊರ್ಬಚೇವ್ ವಿರುದ್ಧ ಸ್ಪರ್ಧಿಸಿ ಗೆದ್ದು, ಅಧಿಕಾರಕ್ಕೆ ಬಂದ ಯೆಲ್ಸಿನ್ ನಂತರದ ದಿನಗಳಲ್ಲಿ ವ್ಯಾಪಕ ಭ್ರಷ್ಟಾಚಾರ, ಆರ್ಥಿಕತೆಯ ಕುಸಿತ ಹಾಗೂ ಅಪಾರ ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ಕಾರಣರಾದರು.

2007: ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆಗಸಕ್ಕೆ ಚಿಮ್ಮಿದ ಪಿ ಎಸ್ ಎಲ್ ವಿ -ಸಿ8 ಗಗನನೌಕೆಯು ಇಟಲಿಯ ಉಪಗ್ರಹ `ಅಗೈಲ್'ನ್ನು ಕಕ್ಷೆಯಲ್ಲಿ ಯಶಸ್ವಿಯಾಗಿ ಕೂರಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಇತಿಹಾಸದಲ್ಲಿ ಪ್ರಮುಖ ಸಾಧನೆ ಮಾಡಿತು. ಇದೇ ಮೊದಲ ಬಾರಿಗೆ ಇಸ್ರೊ ವಾಣಿಜ್ಯಿಕ ಉದ್ದೇಶಕ್ಕಾಗಿ ವಿದೇಶೀ ಉಪಗ್ರಹವನ್ನು ಉಡಾವಣೆ ಮಾಡಿದ್ದು, ಈ ಯಶಸ್ಸು ಜಾಗತಿಕ ಉಪಗ್ರಹ ಉಡಾವಣೆ ಕ್ಷೇತ್ರದಲ್ಲಿ ಭಾರತಕ್ಕೆ ಮಹತ್ವದ ಸ್ಥಾನವನ್ನು ದೊರಕಿಸಿಕೊಟ್ಟಿತು. ಮಧ್ಯಾಹ್ನ 3.30ಕ್ಕೆ ಗಗನಕ್ಕೆ ಚಿಮ್ಮಿದ ಪಿ. ಎಸ್ .ಎಲ್. ವಿ -ಸಿ 8' 22 ನಿಮಿಷಗಳ ನಂತರ 352 ಕೆ.ಜಿ. ತೂಕದ ಇಟಲಿಯ `ಅಗೈಲ್'ನ್ನು ಭೂಮಿಯಿಂದ 550 ಕಿ.ಮೀ. ಎತ್ತರದಲ್ಲಿ ಕಕ್ಷೆಯಲ್ಲಿ ಕೂರಿಸಿತು.

2007: ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ನೀಡಲಾದ ಶೇಕಡಾ 27ರ ಮೀಸಲಾತಿ ಮೇಲಿನ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತು. ಐಐಎಂ, ಐಐಟಿಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶೇಕಡಾ 27 ಒಬಿಸಿ ಮೀಸಲಾತಿ ಅನುಷ್ಠಾನಗೊಳಿಸುವುದು ಅಸಾಧ್ಯ ಎಂದು ನ್ಯಾಯಾಲಯ ತಿಳಿಸಿತು.

2007: ಗೋ ಸಂರಕ್ಷಣೆಗಾಗಿ ಸಂತ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲು ಶಿವಮೊಗ್ಗ ಜಿಲ್ಲೆ ಹೊಸನಗರದ ಶ್ರಿ ರಾಮಚಂದ್ರಾಪುರ ಮಠದ ಆವರಣದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಸಂತ ಸಮಾವೇಶವು ನಿರ್ಧರಿಸಿತು. ಈ ನಿಟ್ಟಿನಲ್ಲಿ ನಿರ್ಣಯವೊಂದನ್ನು ಮಂಡಿಸಿ ಅಂಗೀಕರಿಸಲಾಯಿತು.

2007: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಪೂರೈಸಿದ ಬೆಂಗಳೂರು ಪರಪ್ಪನ ಅಗ್ರಹಾರದ ವಿಶೇಷ ನ್ಯಾಯಾಲಯವು ಪ್ರಮುಖ ಅಪರಾಧಿ ಅಬ್ದುಲ್ ಕರೀಮ್ ತೆಲಗಿ ಸೇರಿದಂತೆ ಐವರಿಗೆ ತಲಾ 10 ವರ್ಷಗಳ ಸೆರೆವಾಸ ಮತ್ತು 70,000 ರೂಪಾಯಿಗಳ ದಂಡ ವಿಧಿಸಿತು. ನ್ಯಾಯಾಧೀಶ ವಿಶ್ವನಾಥ ವಿರೂಪಾಕ್ಷ ಅಂಗಡಿ ಅವರು ಸಂಜೆ ನಾಲ್ಕು ಗಂಟೆಗೆ ತೀರ್ಪನ್ನು ಪ್ರಕಟಿಸಿದರು.

2007: ಭಾರತೀಯ ಮೂಲದ ಪತ್ರಕರ್ತ ಐಜಾಜ್ ಝೂಕ ಸೈಯದ್ ಅವರಿಗೆ 2006ರ ಸಾಲಿನ ಪ್ರತಿಷ್ಠಿತ ಲಾರೆಂಜೊ ನಟಾಲಿ ಪ್ರಶಸ್ತಿ ಲಭಿಸಿತು. ಅವರು ಬರೆದ ಸೂಡಾನ್ ದೇಶದ ದಾರ್ ಪುರದಲ್ಲಿನ ಶೋಚನೀಯ ಸ್ಥಿತಿಗತಿಗಳ ಕುರಿತ ಬರಹಕ್ಕೆ ಈ ಬರಹ ಬಂದಿತು. ಪ್ರಶಸ್ತಿಯನ್ನು ಯುರೋಪಿಯನ್ ಯೂನಿಯನ್ 1992ರಲ್ಲಿ ಸ್ಥಾಪಿಸಿದ್ದು, ಮಾನವ ಹಕ್ಕುಗಳು, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶ್ರೇಷ್ಠ ಪತ್ರಿಕೋದ್ಯಮಕ್ಕೆ ನೀಡಲಾಗುತ್ತದೆ.

2007: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಕೃಷಿ, ಆರ್ಥಿಕ ತಜ್ಞ ಡಾ. ಪಿ.ಜಿ. ಚೆಂಗಪ್ಪ ಅವರನ್ನು ರಾಜ್ಯಪಾಲ ಚತುರ್ವೇದಿ ನೇಮಕ ಮಾಡಿದರು.  

2006: ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ಸಾರ್ವಭೌಮ ವೇದಿಕೆಯಲ್ಲಿ ದೇವ ದೇವೋತ್ತಮ ಸೀತಾಮಾತಾ ಸಹಿತ ಶ್ರೀರಾಮಚಂದ್ರನಿಗೆ ಮಂತ್ರ , ವೇದಘೋಷಗಳ ಮಧ್ಯೆ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ರಾಮಾಯಣ ಕಾಲದ ವೈಭವವನ್ನು ಆಧುನಿಕ ಯುಗದಲ್ಲಿ ಪ್ರತ್ಯಕ್ಷೀಕರಿಸುವ ಪ್ರಯತ್ನವಾಗಿ ನಡೆದ ರಾಮಾಯಣ ಮಹಾಸತ್ರದ ಪ್ರಧಾನ ಅಂಗವಾದ ಈ ಕಾರ್ಯಕ್ರಮ ಈ ದಿನ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ ನೆರವೇರಿತು. ದೇಶದ 500 ನದಿಗಳಿಂದ ಸಂಗ್ರಹಿಸಲಾಗಿದ್ದ ಜಲದಿಂದ ಶ್ರೀರಾಮಚಂದ್ರ ಸೀತಾಮಾತೆಯ ವಿಗ್ರಹಗಳಿಗೆ ಅಭಿಷೇಕ ನಡೆಸಲಾಯಿತು. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ 10 ದಿನಗಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿದ್ದರು. ದೇಶಾದ್ಯಂತದ ಮೂರು ಲಕ್ಷಕ್ಕೂ ಅಧಿಕ ಮಂದಿ 10 ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಮ್ಮ ಜೀವನದ ಸರ್ವಸ್ವವನ್ನೂ ಇನ್ನು ಮುಂದೆ ಗೋ ಸಂರಕ್ಷಣೆಗೆ ಸಮರ್ಪಿಸುವುದಾಗಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಘೋಷಿಸಿದರು. 

2006: ಮಾಜಿ ಪ್ರಧಾನಿ ವಿಶ್ವನಾಥ ಪ್ರತಾಪ ಸಿಂಗ್ (ವಿ.ಪಿ. ಸಿಂಗ್) ಅವರು ಜನ ಮೋರ್ಚಾ ಹೆಸರಿನ ಹೊಸ ಪಕ್ಷ ಸ್ಥಾಪನೆಯನ್ನು ಪ್ರಕಟಿಸಿದರು ಮತ್ತು ಖ್ಯಾತ ಹಿಂದಿ ಚಿತ್ರನಟ ಹಾಗೂ ಸಮಾಜವಾದಿ ಪಕ್ಷದಿಂದ ಉಚ್ಚಾಟನೆಗೊಂಡ ರಾಜ್ ಬಬ್ಬರ್ ಅವರನ್ನು ಈ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು.

1992: ಭಾರತದ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಸತ್ಯಜಿತ್ ರೇ ಅವರು ಆಸ್ಕರ್ ಪ್ರಶಸ್ತಿ ಪುರಸ್ಕೃತರಾದ ಮೂರು ವಾರಗಳ ಬಳಿಕ ಕೋಲ್ಕತದಲ್ಲಿ ಮೃತರಾದರು.

1990: ಚಿತ್ರನಟಿ ಹಾಗೂ ನಟ ಚಾರ್ಲಿ ಚಾಪ್ಲಿನ್ ಅವರ ಮಾಜಿ ಪತ್ನಿ ಪೌಲೆಟ್ ಗೊಡ್ಡಾರ್ಡ್ ಮೃತರಾದರು. ಅಕೆ ಚಾರ್ಲಿ ಚಾಪ್ಲಿನ್ ಜೊತೆಗೆ `ಮಾಡರ್ನ್ ಟೈಮ್ಸ್' ಹಾಗೂ `ದಿ ಗ್ರೇಟ್ ಡಿಕ್ಟೇಟರ್' ಚಿತ್ರಗಳಲ್ಲಿ ನಟಿಸಿದ್ದರು.

1985: ಶಾ ಬಾನೊ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು. ಬಡ, ಅನಕ್ಷರಸ್ಥ ಮುಸ್ಲಿಂ ಮಹಿಳೆ ಶಾ ಬಾನೊ ತನ್ನ ವಿಚ್ಛೇದಿತ ಪತಿ ಮಹಮ್ಮದ್ ಅಹ್ಮದನಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದಳು. ಆಕೆಯ ಪರವಾಗಿ ತೀರ್ಪು ನೀಡಿದ ಮಧ್ಯಪ್ರದೇಶ ಹೈಕೋರ್ಟ್, ವಿಚ್ಛೇದಿತ ಮಹಿಳೆಗೆ  ಬದುಕಿಗೆ ಯಾವುದೇ ಆದಾಯ ಇಲ್ಲದಿದ್ದರೆ ಆಕೆಯ ಮರುಮದುವೆ ಅಥವಾ ಮರಣದವರೆಗೆ ಯಾವುದೇ ಧರ್ಮದ ಭೇದವಿಲ್ಲದೆ ಜೀವನಾಂಶ ನೀಡಬೇಕು ಎಂದು ಹೇಳಿತ್ತು.

1985: ಕೊಕಾ ಕೋಲ ಕಂಪೆನಿಯು ತಾನು ಕೋಕ್ ನ ರಹಸ್ಯ ಫಾರ್ಮುಲಾವನ್ನು ಬದಲಾಯಿಸುತ್ತಿರುವುದಾಗಿ ಪ್ರಕಟಿಸಿತು. ಆದರೆ ಸಾರ್ವಜನಿಕರಿಂದ ವ್ಯಕ್ತವಾದ ಪ್ರತಿಭಟನೆಯನ್ನು ಅನುಸರಿಸಿ ನಂತರ ತನ್ನ ಮೊದಲಿನ ಫಾರ್ಮುಲಾವನ್ನೇ ಉಳಿಸಿಕೊಂಡಿತು.

1978: ಕಲಾವಿದೆ ಪೂರ್ಣಿಮಾ ಡಿ. ಸಾಗರ ಜನನ.

1967: ರಷ್ಯದ ಸೋಯುಜ್ 1 ಬಾಹ್ಯಾಕಾಶ ನೌಕೆಯ ಉಡ್ಡಯನ ನಡೆಯಿತು. ಅದು 17 ಸುತ್ತುಗಳನ್ನು ಮುಗಿಸಿ ಭೂಕಕ್ಷೆಗೆ ಮರಳುವಾಗ ಸ್ಫೋಟಗೊಂಡು ಗಗನಯಾನಿ ವ್ಲಾಡಿಮೀರ್ ಕೊಮಾರೋವ್ ಅಸುನೀಗಿದರು. 

1964: ಕಲಾವಿದೆ ಮಾಲಿನಿ ಜನನ.

1958: ಕಲಾವಿದ ಎಂ. ರಾಘವೇಂದ್ರ ಜನನ.

1956: ಬೀದಿ ನಾಟಕಗಳ ಮೂಲಕ ಧಾರವಾಡ ಜಿಲ್ಲೆಯಲ್ಲಿ ಸಾಕ್ಷರತಾ ಆಂದೋಲನ ಕೈಗೊಂಡ ಕಲಾವಿದ ವೀರೇಶ ಗುತ್ತಲ ಅವರು ಕೃಷ್ಣಪ್ಪ ಗುತ್ತಲ- ಶಾರದಾಬಾಯಿ ದಂಪತಿಯ ಮಗನಾಗಿ ಹಾವೇರಿ ತಾಲ್ಲೂಕಿನ ಕಿತ್ತೂರ ಗ್ರಾಮದಲ್ಲಿ ಜನಿಸಿದರು.

1949: ಕಲಾವಿದೆ ಟಿ.ಎನ್. ಪದ್ಮಾ ಜನನ.

1913: ಹಾಸ್ಯಬ್ರಹ್ಮ ಎಂದೇ ಖ್ಯಾತರಾಗಿದ್ದ ರಾಯಸದ ಭೀಮಸೇನರಾವ್ 'ಬೀಚಿ'(23-4-1913 ರಿಂದ 7-12-1980) ಹುಟ್ಟಿದ ದಿನ. ಶ್ರೀನಿವಾಸರಾವ್- ಭಾರತಮ್ಮ ದಂಪತಿಯ ಪುತ್ರರಾಗಿ ಬಳ್ಳಾರಿ ಜಿಲ್ಲೆಯ ಹರಪನಹಳಿಯಲ್ಲಿ ಜನಿಸಿದ ಅವರು ಅ.ನ.ಕೃ. ಅವರ ಸಂಧ್ಯಾರಾಗ ಓದಿ ಕನ್ನಡ ದೀಕ್ಷೆ ಸ್ವೀಕರಿಸಿ ಕನ್ನಡದಲ್ಲಿ ಬರೆಯಲು ಆರಂಭಿಸಿದರು. ಕನ್ನಡ ಹಾಸ್ಯ ಸಾಹಿತ್ಯದಲ್ಲಿ ಅಮರರಾದ ಅವರ ತಿಂಮ ಪಾತ್ರ ಖ್ಯಾತ ಹಾಸ್ಯ ಬರಹಗಾರ ಪಿ.ಜಿ. ಓಡ್ ಹೌಸ್ ಅವರ ಜೀವ್ಸ್ ಪಾತ್ರವನ್ನೇ ಹೋಲುವ ಕನ್ನಡದ ಸೃಷ್ಟಿ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

ಇಂದಿನ ಇತಿಹಾಸ History Today ಏಪ್ರಿಲ್ 22

ಇಂದಿನ ಇತಿಹಾಸ

ಏಪ್ರಿಲ್ 22

ಕ್ರಿಕೆಟ್ ಜಗತ್ತಿನ ಧ್ರುವತಾರೆ, ದಾಖಲೆಗಳ ವೀರ ವೆಸ್ಟ್ ಇಂಡೀಸ್ ನ ಬ್ರಯನ್ ಲಾರಾ ಬಾರ್ಬಡಾಸ್ ನಲ್ಲಿ ನಡೆದ ಎರಡನೇ ಹಂತದ ಕೊನೆಯ ಪಂದ್ಯದಲ್ಲಿ ತಮ್ಮ ವಿಶ್ವಕಪ್ ನ ಕೊನೆಯ ಪಂದ್ಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಇತಿಶ್ರೀ ಹಾಡಿದರು.

2008: ಸಂಸತ್ ಭವನ ದಾಳಿ ಪ್ರಕರಣದ ಆರೋಪಿ ಅಫ್ಜಲ್ ಗುರುವಿಗೆ ಕ್ಷಮಾದಾನ ನೀಡುವ ಕುರಿತ ಮನವಿಗೆ ಗೃಹ ಸಚಿವಾಲಯವು, ರಾಷ್ಟ್ರಪತಿ ಕಲಾಂ ಅವರಿಗೆ ಅವರ ಅಧಿಕಾರಾವಧಿ ಕೊನೆಯ ದಿನದವರೆಗೂ ಸೂಚನೆ ಕಳಿಸಿರಲಿಲ್ಲ ಎಂಬ ವಿಚಾರ ಬಹಿರಂಗಗೊಂಡಿತು. ಇದರೊಂದಿಗೆ ಕಲಾಂ ಅವರು ಉದ್ದೇಶಪೂರ್ವಕವಾಗಿ ಕ್ಷಮಾದಾನದ ಮನವಿಯನ್ನು  ಪರಿಶೀಲಿಸದೇ ಹಾಗೇ ಇಟ್ಟಿದ್ದರು ಎನ್ನುವ ವರದಿಗಳಿಗೆ ಎಳೆದಂತಾಯಿತು. ಕಲಾಂ ಅವರ ಅಧಿಕಾರಾವಧಿ ಮುಗಿದ  2007 ರ ಜುಲೈ 25 ರ ತನಕವೂ ಗೃಹ ಸಚಿವಾಲಯ ಈ ಬಗ್ಗೆ ಯಾವುದೇ ಶಿಫಾರಸು ನೀಡಿರಲಿಲ್ಲ ಎಂದು  ಕಲಾಂ ಅವರಿಗೆ ಕಾರ್ಯದರ್ಶಿಯಾಗಿದ್ದ ಪಿ.ಎಂ.ನಾಯರ್ ಅವರು `ರಾಷ್ಟ್ರಪತಿಯವರೊಂದಿಗೆ ನನ್ನ ದಿನಗಳು' ಕೃತಿಯಲ್ಲಿ ಬಹಿರಂಗಪಡಿಸಿದರು.

2008: ಕೇರಳದ ಗುರುವಾಯೂರು ಶ್ರೀ ಕೃಷ್ಣ ದೇವಾಲಯದಲ್ಲಿ ತ್ರಿಶೂರ್ ಜಿಲ್ಲೆಯ ಕುಟ್ಟೂರು ಗ್ರಾಮದ ಸತ್ಯನ್ ಎಂಬ ಭಕ್ತನೊಬ್ಬ ದೇವರ ಎದುರಿನಲ್ಲಿ ತನ್ನ ತುಲಾಭಾರಕ್ಕೆ  72 ಕಿ.ಲೋ. ತೂಕದ ಪ್ಯಾರಾಸಿಟಮಲ್ ಗುಳಿಗೆ (ಮಾತ್ರೆ)ಗಳನ್ನು  ಬಳಸಿ ತುಲಾಭಾರದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದ. ಈ ದೇವಾಲಯದಲ್ಲಿ ನಿತ್ಯವೂ ನೂರಾರು ಭಕ್ತರು ಬಾಳೆಹಣ್ಣಿನಿಂದ ಹಿಡಿದು ಹಲಸಿನ ಹಣ್ಣು ಹಾಗೂ ಇತರೆ ವಸ್ತುಗಳಿಂದ ತುಲಾಭಾರ ಮಾಡಿಸಿಕೊಂಡು ಆ ವಸ್ತುಗಳನ್ನು  ದೇವಾಲಯಕ್ಕೆ ನೀಡುವುದು ವಾಡಿಕೆ. ಆದರೆ ಇದೇ ಮೊದಲ ಬಾರಿಗೆ ಸತ್ಯನ್ ತಮ್ಮ 72 ಕಿ.ಲೋ. ತೂಕದ ದೇಹವನ್ನು ಗುಳಿಗೆಗಳ ಮೂಲಕ ತುಲಾಭಾರ ಮಾಡಿಸಿಕೊಂಡು ವಿಶಿಷ್ಟತೆ ಮೆರೆದರು. ದೇವಾಲಯದ ಅಧಿಕಾರಿಗಳು ಈ ಗುಳಿಗೆಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಿದರು.

2008: ಕರ್ನಾಟಕದಲ್ಲಿ ಮೇ 16ರಂದು ನಡೆಯುವ ಎರಡನೇ ಹಂತದ ವಿಧಾನಸಭಾ ಚುನಾವಣೆಗಳಿಗಾಗಿ ಚುನಾವಣಾ ಆಯೋಗವು ಈದಿನ ಅಧಿಸೂಚನೆ ಹೊರಡಿಸಿತು. ರಾಯಚೂರು, ಕೊಪ್ಪಳ, ಉತ್ತರ ಕನ್ನಡ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು  ದಕ್ಷಿಣ ಕನ್ನಡ ಈ ಹತ್ತು ಜಿಲ್ಲೆಗಳ 66 ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯುವುದು.

2008: ಬ್ರಿಟನ್ ಮಹಾಚುನಾವಣೆಯಲ್ಲಿ ಹಿಂದು ಮತ್ತು  ಸಿಖ್ ಸಮುದಾಯಗಳು ಅತ್ಯಂತ ಹೆಚ್ಚಿನ ಮತದಾನ ಸಾಮರ್ಥ್ಯ ಪಡೆದಿವೆ ಎಂದು ಸಂಶೋಧನೆಯೊಂದು ಬಹಿರಂಗಪಡಿಸಿತು. 2001ರಲ್ಲಿ ಶೇಕಡಾ 61.3ರಷ್ಟು ಹಿಂದುಗಳು ಮತದಾನ ಮಾಡಿದ್ದರೆ, ಸಿಖ್ ಸಮುದಾಯ ಶೇಕಡಾ 59.7ರಷ್ಟು ಹಾಗೂ ಮುಸ್ಲಿಂ ಸಮುದಾಯ ಶೇಕಡಾ 58.5ರಷ್ಟು ಮತದಾನ ಮಾಡಿದ್ದವು ಎಂಬ ವಿಚಾರವನ್ನು  ಸಂಶೋಧನೆ ಬಹಿರಂಗಪಡಿಸಿತು. ಹಿಂದು ಕೌನ್ಸಿಲ್ ಯುಕೆ (ಎಚ್ ಸಿ ಯು ಕೆ) ಈ  ಸಂಶೋಧನೆಯನ್ನು  ನಡೆಸಿತು. ಸಾಮಾಜಿಕ ಸಂಶೋಧನಾ ಸಂಘಟನೆ ಜೋಸೆಫ್ ರೌನ್ ಟ್ರೀ ಫೌಂಡೇಷನ್ ಇದಕ್ಕೆ  ನಿಧಿ  ಸಹಾಯ ಮಾಡಿತ್ತು. ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಎಡ್ವರ್ಡ್ ಫೀಲ್ಡ್ ಹೌಸ್ ಮತ್ತು  ಡೇವಿಡ್ ಕಟ್ಸ್ ಈ ಸಂಶೋಧನೆಗೆ ನೆರವಾಗಿದ್ದರು.

 2008: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಬೆಂಗಳೂರು, ರಾಮನಗರ, ದಾವಣಗೆರೆ, ಕೊಪ್ಪಳ ಮತ್ತು ಬೆಳಗಾವಿಯಲ್ಲಿ ವಿವಿಧ ಇಲಾಖೆಗಳ ಒಬ್ಬ ಡಿಸಿಪಿ, ಒಬ್ಬ ಹೆಚ್ಚುವರಿ ಎಸ್ಪಿ ಸೇರಿದಂತೆ ಎಂಟು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು 45 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದರು.

2008: ಬಿಜೆಪಿ ಮಹಾರಾಷ್ಟ್ರ ಘಟಕದ ಕಾರ್ಯ ನಿರ್ವಹಣೆ ವಿರುದ್ಧ ಬಂಡಾಯದ ಬಾವುಟ ಬೀಸಿದ್ದ ಪಕ್ಷದ ಹಿರಿಯ ನಾಯಕ ಗೋಪಿನಾಥ ಮುಂಡೆ ಅವರು ನವದೆಹಲಿಗೆ ಆಗಮಿಸಿ ಪಕ್ಷದ ಹಿರಿಯ ನಾಯಕ ಎಲ್. ಕೆ. ಆಡ್ವಾಣಿ ಮತ್ತು ಅಧ್ಯಕ್ಷ ರಾಜನಾಥ್ ಸಿಂಗ್ ಅವರಲ್ಲಿ ತಮ್ಮ ದುಗುಡ ತೋಡಿಕೊಂಡರು ಹಾಗೂ ವರಿಷ್ಠರ ಸೂಚನೆ ಮೇರೆಗೆ ತಾವು ನೀಡಿದ ರಾಜೀನಾಮೆಯನ್ನು ಹಿಂದಕ್ಕೆ ಪಡೆದರು. ಇದರೊಂದಿಗೆ ಮೂರು ದಿನಗಳಿಂದ ಉದ್ಭವಿಸ್ದಿದ ಮಹಾರಾಷ್ಟ್ರ ಬಿಜೆಪಿ ಘಟಕದ ಬಿಕ್ಕಟ್ಟು ಕೊನೆಗೊಂಡಿತು.

2008: ರಾಜ್ಯದ ಖ್ಯಾತ ವನ್ಯಜೀವಿ ತಜ್ಞರಾದ ಕೃಪಾಕರ ಸೇನಾನಿ ಜೋಡಿ ನಿರ್ಮಿಸಿದ `ವೈಲ್ಡ್ ಡಾಗ್ ಡೈರಿಸ್'ಗೆ ಫ್ರಾನ್ಸಿನ ಪ್ರತಿಷ್ಠಿತ ಪ್ರಶಸ್ತಿ ದೊರಕಿತು. ಫ್ರಾನ್ಸ್ ಚಿತ್ರೋತ್ಸವದಲ್ಲಿ ವನ್ಯಜೀವಿ ಚಿತ್ರ ವಿಭಾಗದ ಅತ್ಯುತ್ತಮ ಪುರಸ್ಕಾರ ಹಾಗೂ ಎರಡು ಸಾವಿರ ಡಾಲರ್ ನಗದು ಈ ಚಿತ್ರಕ್ಕೆ ದೊರಕಿತು. ನ್ಯಾಷನಲ್ ಜಿಯಾಗ್ರಾಫಿಕ್ ಚಾನೆಲ್ಗಾಗಿ ನಿರ್ಮಿಸಿದ ಈ ಚಿತ್ರಕ್ಕೆ ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರಕಿವೆ. ಬಿಬಿಸಿ ವೈಲ್ಡ್ ಸ್ಕ್ರೀನ್, ಬರ್ಲಿನ್ ಹಾಗೂ ಜರ್ಮನಿ ವನ್ಯಜೀವಿ ಚಿತ್ರೋತ್ಸವದಲ್ಲಿ ನಾಮಕರಣಗೊಂಡುದರ ಜೊತೆಗೆ ಜಪಾನಿನ ವನ್ಯಜೀವಿ ಚಿತ್ರೋತ್ಸವ, ಸಿಂಗಪುರದ ಏಷ್ಯನ್ ಟೆಲಿಫಿಲಂ ಪ್ರಶಸ್ತಿ ಹಾಗೂ ನವದೆಹಲಿಯಲ್ಲಿ ವಾತಾವರಣ್ ಅಂತಾರಾಷ್ಟ್ರೀಯ ಪ್ರಶಸ್ತಿ ಈ ಚಿತ್ರಕ್ಕೆ ದೊರಕಿದೆ.  

2007: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂಬುದಾಗಿ ಘೋಷಿಸಿ ಗೋ ಹತ್ಯೆಯನ್ನು ದೇಶದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರವೇ ಗೋಹತ್ಯಾ ನಿಷೇದ ಮಸೂದೆ ಜಾರಿಗೊಳಿಸಬೇಕು ಎಂದು ಮಾಜಿ ರಾಜ್ಯಪಾಲ ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ಅವರ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಆವರಣದಲ್ಲಿ ನಡೆದ ವಿಶ್ವ ಗೋ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮನವಿ ಮಾಡಿದರು.

2007: ಭಾರತ -ರಷ್ಯಾ ಜಂಟಿ ಸಹಭಾಗಿತ್ವದಲ್ಲಿ ನೌಕಾಪಡೆಗಾಗಿ ಅಭಿವೃದ್ಧಿ ಪಡಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿಯನ್ನು ಒರಿಸ್ಸಾದ ಬಾಲಸೋರ್ ಸಮೀಪದ ಚಂಡೀಪುರದ ಕ್ಷಿಪಣಿ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಇದು ಬ್ರಹ್ಮೋಸ್ನ 10ನೇ ಪ್ರಾಯೋಗಿಕ ಪರೀಕ್ಷೆ.

2007: ಕ್ರಿಕೆಟ್ ಜಗತ್ತಿನ ಧ್ರುವತಾರೆ, ದಾಖಲೆಗಳ ವೀರ ವೆಸ್ಟ್ ಇಂಡೀಸ್ ನ ಬ್ರಯನ್ ಲಾರಾ ಬಾರ್ಬಡಾಸ್ ನಲ್ಲಿ ನಡೆದ ಎರಡನೇ ಹಂತದ ಕೊನೆಯ ಪಂದ್ಯದಲ್ಲಿ ತಮ್ಮ ವಿಶ್ವಕಪ್ ನ ಕೊನೆಯ ಪಂದ್ಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ಇತಿಶ್ರೀ ಹಾಡಿದರು.

2007: ಬುದ್ಧಿ ಮಾಂದ್ಯ ಮಕ್ಕಳ ಮಧುರಂ ನಾರಾಯಣನ್ ಕೇಂದ್ರದ ಸಂಸ್ಥಾಪಕ ಹಾಗೂ ಮಾಜಿ ಏರ್ ವೈಸ್ ಮಾರ್ಷಲ್ ವಿ. ಕೃಷ್ಣಸ್ವಾಮಿ (81) ತಮಿಳುನಾಡಿನ ಚೆನ್ನೈಯಲ್ಲಿ ನಿಧನರಾದರು. ಅವರು ತಮಿಳುನಾಡಿನ ವಾಯುಪಡೆ ಮತ್ತು ಹಿರಿಯರ ಸೇವಾ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬುದ್ಧಿಮಾಂದ್ಯ ಮಕ್ಕಳಿಗಾಗಿ ಸ್ಥಾಪಿಸಿದ ಮಧುರಂ ನಾರಾಯಣನ್ ಕೇಂದ್ರಕ್ಕಾಗಿ 2004ರಲ್ಲಿ ಅವರನ್ನು ರಾಷ್ಟ್ರಪತಿಗಳು ಗೌರವಿಸಿದ್ದರು.

2007: ಬೆಂಗಳೂರು ಉದ್ಯಾನನಗರಿಯಲ್ಲಿ ಏಪ್ರಿಲ್ 21ರ ನಡುರಾತ್ರಿ ಸುರಿದ ಭಾರಿ ಮಳೆಗೆ ರಾಜಧಾಮಿಯ ನಿವಾಸಿಗಳು ತತ್ತರಿಸಿದರು. ಭಾರತಿ ನಗರದ ದೊಡ್ಡ ಚರಂಡಿಯಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದು ಸೇರಿ ಇಬ್ಬರು ಮೃತರಾದರು. ಮಧ್ಯರಾತ್ರಿ 12.30 ರಿಂದ ಸತತ ಮೂರು ಗಂಟೆಗಳ ಕಾಲ ಮಳೆ ಬಂದಿದ್ದು, ಒಟ್ಟಾರೆ 75 ಮಿ.ಮೀ (7.5 ಸೆಂ.ಮೀ) ಮಳೆಯಾಯಿತು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 48 ಮಿ.ಮೀ (4.8 ಸೆಂ.ಮೀ) ಮಳೆ ಸುರಿದು, ನಗರದಲ್ಲಿ ಭಾರಿ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಯಿತು.

2007: ದೊರೆಯ ಆಸ್ತಿಪಾಸ್ತಿ ರಾಷ್ಟ್ರೀಕರಣ ಮಾಡುವ ತನ್ನ ಬದ್ಧತೆಯನ್ನು ಈಡೇರಿಸುವಲ್ಲಿ ಸರ್ಕಾರವು ವಿಫಲವಾಗಿದೆ ಎಂದು ಆಪಾದಿಸಿ ನೇಪಾಳದ ಮಾವೋವಾದಿಗಳು ಕಠ್ಮಂಡುವಿನಲ್ಲಿ ದೊರೆಯ ಆಸ್ತಿಪಾಸ್ತಿ ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ಆರಂಭಿಸಿದರು. ದೊರೆಯ ಆಸ್ತಿಪಾಸ್ತಿ ವಶಕ್ಕೆ ಕಾನೂನು ರೂಪಿಸುವಲ್ಲಿ ಸಂಸತ್ತು ವಿಫಲವಾಗಿದೆ. ಹಾಗಾಗಿ ಈಗ ಯಂಗ್ ಕಮ್ಯೂನಿಸ್ಟ್ ಲೀಗ್ ಆ ಕಾರ್ಯ ಮಾಡಿ ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಬಳಸುವುದು ಎಂದು ಸಿಪಿಎನ್ ಮಾವೋವಾದಿ ಹಿಟ್ ಮನ್ ಶಾಕ್ಯದ ಕೇಂದ್ರೀಯ ಸಮಿತಿ ತಿಳಿಸಿತು.

2007:  ಬಾಂಗ್ಲಾದೇಶದ ಸೇನೆ ಬೆಂಬಲಿತ ಮಧ್ಯಂತರ ಸರ್ಕಾರವು ಮಾಜಿ ಪ್ರಧಾನಿ ಹಸೀನಾ ಅವರ ಪುನರಾಗಮನಕ್ಕೆ ನಿಷೇಧ ವಿಧಿಸಿದ ಹಿನ್ನೆಲೆಯಲ್ಲಿ ಬ್ರಿಟಿಷ್ ಸರ್ಕಾರವು ಹಸೀನಾ ಅವರನ್ನು ಬ್ರಿಟನ್ ಬಿಟ್ಟು ಹೊರಡದಂತೆ ನಿರ್ಬಂಧಿಸಿತು. ಆಕೆಯನ್ನು ಢಾಕಾಗೆ ಒಯ್ಯಬೇಕಿದ್ದ ಬ್ರಿಟಿಷ್ ಏರ್ವೇಸ್ ಸಂಸ್ಥೆಯು ಟಿಕೆಟ್ ಹೊಂದ್ದಿದರೂ ಹಸೀನಾ ಅವರಿಗೆ ವಿಮಾನ ಏರಲು ಅವಕಾಶ ನಿರಾಕರಿಸಿತು. ಢಾಕಾಗೆ ಹೊರಡುವ ವಿಮಾನದ ನಿರ್ಗಮನ ವೇಳೆಯಿಂದ 90 ನಿಮಿಷಗಳಷ್ಟು ಮೊದಲೇ ಹಸೀನಾ ಹೀಥ್ರೂ ವಿಮಾನ ನಿಲ್ದಾಣ ತಲುಪಿದ್ದರು.

2006: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಮೋದ ಮಹಾಜನ್ (56) ಅವರ ಮೇಲೆ ಒಡಹುಟ್ಟಿದ ಸಹೋದರ ಪ್ರವೀಣ್ ಮಹಾಜನ್ ಮಾತಿನ ಚಕಮಕಿ ಮಧ್ಯೆ ಸಿಟ್ಟಿಗೆದ್ದು ಗುಂಡು ಹಾರಿಸಿದರು. ತೀವ್ರವಾಗಿ ಗಾಯಗೊಂಡ ಪ್ರಮೋದ್ ಮಹಾಜನ್ ಅವರನ್ನು ಅತ್ಯಂತ ಗಂಭೀರ ಸ್ಥಿತಿಯಲ್ಲಿ ಮುಂಬೈಯ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಯಿತು. ಮುಂಬೈಯ ವರ್ಲಿಯ ಪ್ರಮೋದ್ ಮಹಾಜನ್ ಮನೆಯಲ್ಲೇ ಈ ಗುಂಡು ಹಾರಾಟದ ಘಟನೆ ನಡೆಯಿತು.

2006: ವರನಟ ಡಾ. ರಾಜ್ ಕುಮಾರ್ ಅವರ ಉತ್ತರಕ್ರಿಯೆಯನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೊ ಸಮಾಧಿ ಬಳಿ ಕುಟುಂಬ ಸದಸ್ಯರು ವಿಧಿವತ್ತಾಗಿ ನೆರವೇರಿಸಿದರು.

2006: ಗಣ್ಯ ವ್ಯಕ್ತಿಗಳಿಂದ ಹತ್ಯೆಗೀಡಾದ ರೂಪದರ್ಶಿ ಜೆಸ್ಸಿಕಾಲಾಲ್ ಅವರ ತಂದೆ ಅಜಿತ್ ಕುಮಾರ್ ಲಾಲ್ ಅವರು ನವದೆಹಲಿಯಲ್ಲಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾದ ಒಂದು ತಿಂಗಳ ಬಳಿಕ ನಿಧನರಾದರು. 1999ರ ಏಪ್ರಿಲ್ 29ರಂದು ಹೋಟೆಲಿನಲ್ಲಿ ಹರ್ಯಾಣ ಸಚಿವ ವಿನೋದ ಶರ್ಮಾ ಅವರ ಪುತ್ರ ಮನು ಶರ್ಮಾ ಮತ್ತು ಇತರರು ಮದ್ಯ ಸರಬರಾಜು ಮಾಡಲು ನಿರಾಕರಿಸಿದ್ದಕ್ಕಾಗಿ ಜೆಸ್ಸಿಕಾಲಾಲ್ ಅವರನ್ನು ಗುಂಡಿಟ್ಟು ಕೊಂದಿದ್ದರು. 2000ನೇ ಇಸವಿಯಲ್ಲಿ ಆಕೆಯ ತಾಯಿ ಮೃತಳಾಗಿದ್ದಳು. ತಂದೆ ಅಂದಿನಿಂದಲೇ ಅಸ್ವಸ್ಥರಾಗಿದ್ದರು.. 2006ರ ಫೆಬ್ರುವರಿ 21ರಂದು ದೆಹಲಿಯ ನ್ಯಾಯಾಲಯವೊಂದು ಜೆಸ್ಸಿಕಾಲಾಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಿದ ಬಳಿಕ ಆಕೆಯ ತಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದರು.

1994: ಅಮೆರಿಕದ 37ನೇ ಅಧ್ಯಕ್ಷ ರಿಚರ್ಡ್ ಎಂ. ನಿಕ್ಸನ್ ತಮ್ಮ 81ನೇ ವಯಸ್ಸಿನಲ್ಲಿ ನ್ಯೂಯಾರ್ಕಿನ ಆಸ್ಪತ್ರೆಯೊಂದರಲ್ಲಿ ಮೃತರಾದರು.

1970: ಅಮೆರಿಕವು ಮೊತ್ತ ಮೊದಲ `ಅರ್ಥ್ ಡೇ' (ಭೂ ದಿನ) ಆಚರಿಸಿತು. ಕೈಗಾರಿಕೀಕರಣದ ದುಷ್ಪರಿಣಾಮ ಮತ್ತು ಪರಿಸರ ಬಗ್ಗೆ ಜಾಗೃತಿ ಮೂಡಿಸುವ ಪ್ರಥಮ ಪ್ರಯತ್ನ ಇದಾಗಿತ್ತು.

1967: ಕಲಾವಿದ ರವೀಂದ್ರ ಎಲ್. ಜನನ.

1965: ಕಲಾವಿದೆ ಶಾಂತಲಕ್ಷ್ಮಿ ಜನನ.

1950: ಕಲಾವಿದ ಗಂಗಾಧರ ಸ್ವಾಮಿ ಜನನ.

1949: ಕಲಾವಿದ ವಸಂತ ಲಕ್ಷ್ಮಿ ಬೇಲೂರು ಜನನ.

1945: ಹಾಸ್ಯನಟರಾಗಿ ಪ್ರಖ್ಯಾತರಾಗಿರುವ ಎಂ.ಎಸ್. ಉಮೇಶ್ ಅವರು ಎ.ಎಲ್. ಶ್ರೀಕಂಠಯ್ಯ ಮತ್ತು ತಾಯಿ ನಂಜಮ್ಮ ದಂಪತಿಯ ಮಗನಾಗಿ ಮೈಸೂರಿನಲ್ಲಿ ಜನಿಸಿದರು. ಮಗುವಾಗಿದ್ದಾಗಲೇ ರಂಗಪ್ರವೇಶ ಮಾಡಿ ರಂಗಭೂಮಿಯತ್ತ ಒಲವು ಬೆಳೆಸಿಕೊಂಡ ಉಮೇಶ್, ಕೆ. ಹಿರಣ್ಣಯ್ಯ ಮಿತ್ರ ಮಂಡಳಿಯಲ್ಲಿ ಅನಕೃ ಅವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಪಾತ್ರಧಾರಿಯಾಗಿ ರಂಗಪ್ರವೇಶಿಸಿದರು. ಮುಂದೆ ಕಥಾ ಸಂಗಮ ಚಲನ ಚಿತ್ರದ ತಿಮ್ಮರಾಯಿ ಪಾತ್ರದೊಂದಿಗೆ ಚಿತ್ರರಂಗ ಪ್ರವೇಶಿಸಿದ ಅವರು 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪ್ರವೇಶಿಸಿ ಉತ್ತಮ ನಟನಾಗಿ ಮಿಂಚಿದರು.

1921: ಕಲಾವಿದ ದೇವಪ್ಪಯ್ಯ ಅಪ್ಪಯ್ಯ ಜನನ. 

1904: ಜ್ಯೂಲಿಯಸ್ ರಾಬರ್ಟ್ ಒಪ್ಪೆನ್ಹೀಮರ್ (1904-67) ಜನ್ಮದಿನ. ಈತ ಅಣುಬಾಂಬ್ ಅಭಿವೃದ್ಧಿ ಕಾಲದಲ್ಲಿ (1943-45) ಲಾಸ್ ಅಲಮೋಸ್ ಲ್ಯಾಬೋರೇಟರಿ ಹಾಗೂ ಪ್ರಿನ್ಸ್ ಟನ್ನ ಇನ್ ಸ್ಟಿಟ್ಯೂಟ್ ಫಾರ್ ಅಡ್ವಾನ್ಸಡ್ ಸ್ಟಡಿಯ ನಿರ್ದೇಶಕನಾಗಿದ್ದ.

1500: ಪೆಡ್ರೊ ಅಲ್ವರೆಝ್ ಕಾಬ್ರೆಲ್ ಬ್ರೆಜಿಲನ್ನು ಶೋಧಿಸಿದ. ಆತ ಇದಕ್ಕೆ `ಐಲ್ಯಾಂಡ್ ಆಫ್ ಟ್ರು ಕ್ರಾಸ್' ಎಂದು ಹೆಸರು ಇಟ್ಟ. ನಂತರ ದೊರೆ ಮ್ಯಾನ್ಯುಯೆಲ್ `ಹೋಲಿ ಕ್ರಾಸ್' ಎಂಬುದಾಗಿ ಮರುನಾಮಕರಣ ಮಾಡಿದ. ಅಂತಿಮವಾಗಿ ಅದಕ್ಕೆ ಈಗಿನ ಬ್ರೆಜಿಲ್ ಎಂಬ ಹೆಸರು ಬಂತು. ಇದಕ್ಕೆ ಅಲ್ಲಿ ಸಿಗುವ `ಪೌ-ಬ್ರೆಸಿಲ್' ಎಂಬ ಬಣ್ಣದ ಮರ (ಡೈವುಡ್) ಕಾರಣ. 

(ಸಂಗ್ರಹ: ನೆತ್ರಕೆರೆ ಉದಯಶಂಕರ)

Wednesday, April 22, 2009

ಇಂದಿನ ಇತಿಹಾಸ History Today ಏಪ್ರಿಲ್ 21

ಇಂದಿನ ಇತಿಹಾಸ

ಏಪ್ರಿಲ್ 21

96 ವರ್ಷಗಳ ಹಿಂದೆ ತನ್ನ ಚೊಚ್ಚಲ ಯಾನ ಕಾಲದಲ್ಲೇ ಸಮುದ್ರದಲ್ಲಿ ಮುಳುಗಿ ಹೋದ `ಟೈಟಾನಿಕ್' ದುರಂತ ನೌಕೆಯ ಟಿಕೆಟ್ ಒಂದು ಈದಿನ ಲಂಡನ್ನಿನಲ್ಲಿ ನಡೆದ ಹರಾಜಿನಲ್ಲಿ 33,000 ಪೌಂಡುಗಳಿಗೆ ಮಾರಾಟವಾಯಿತು. ಟೈಟಾನಿಕ್ ದುರಂತ ಸಮಯದಲ್ಲಿ ಬದುಕಿ ಉಳಿದಿದ್ದ ಲಿಲಿಯನ್ (ಆ)ಏಸ್ಪ್ಲಂಡ್ ಅವರ ಸಂಗ್ರಹದಲ್ಲಿ ಇದ್ದ ಟಿಕೆಟ್ ಇದು. ಲಿಲಿಯನ್ `ಟೈಟಾನಿಕ್' ಹಡಗಿನಲ್ಲಿ ತನ್ನ ತಂದೆ ತಾಯಿ ಹಾಗೂ ಸಹೋದರರ ಜೊತೆಗಿದ್ದಳು.

2008: 96 ವರ್ಷಗಳ ಹಿಂದೆ ತನ್ನ ಚೊಚ್ಚಲ ಯಾನ ಕಾಲದಲ್ಲೇ ಸಮುದ್ರದಲ್ಲಿ ಮುಳುಗಿ ಹೋದ `ಟೈಟಾನಿಕ್' ದುರಂತ ನೌಕೆಯ ಟಿಕೆಟ್ ಒಂದು ಈದಿನ ಲಂಡನ್ನಿನಲ್ಲಿ ನಡೆದ ಹರಾಜಿನಲ್ಲಿ 33,000 ಪೌಂಡುಗಳಿಗೆ ಮಾರಾಟವಾಯಿತು. ಟೈಟಾನಿಕ್ ದುರಂತ ಸಮಯದಲ್ಲಿ ಬದುಕಿ ಉಳಿದಿದ್ದ ಲಿಲಿಯನ್ (ಆ)ಏಸ್ಪ್ಲಂಡ್ ಅವರ ಸಂಗ್ರಹದಲ್ಲಿ ಇದ್ದ ಟಿಕೆಟ್ ಇದು. ಲಿಲಿಯನ್ `ಟೈಟಾನಿಕ್' ಹಡಗಿನಲ್ಲಿ ತನ್ನ ತಂದೆ ತಾಯಿ ಹಾಗೂ ಸಹೋದರರ ಜೊತೆಗಿದ್ದಳು. ಆಕೆಯ ವಯಸ್ಸು ಆಗ ಕೇವಲ ಐದು ವರ್ಷ.  ಹೆನ್ರಿ ಅಲ್ಡ್ರಿಜ್ ಮತ್ತು  ಅವರ ಮಗ ಡೆವಿಝೆಸ್ ಅವರಿಗೆ ಸೇರಿದ ಹರಾಜು ಸಂಸ್ಥೆಯು ಈ ಟಿಕೆಟ್ಟನ್ನು ಹರಾಜಿಗಿಟ್ಟಿತ್ತು. ಸ್ವೀಡಿಷ್ ಸಂಗ್ರಾಹಕರೊಬ್ಬರು ಈ ಟಿಕೆಟ್ ಖರೀದಿಸಿದರು ಎಂದು ಹರಾಜು ಸಂಸ್ಥೆ ತಿಳಿಸಿತು. ಟೈಟಾನಿಕ್  ಟಿಕೆಟ್ ಬಗ್ಗೆ  ಕಂಡು ಬಂದಂತಹ ಕುತೂಹಲ ಹರಾಜು ಸಂಘಟಕರನ್ನೇ ದಂಗುಬಡಿಸಿತು. `ಚೀನಾ, ಅಮೆರಿಕ, ಸ್ವೀಡನ್, ಐರ್ಲೆಂಡ್ ಮತ್ತು  ಇಂಗ್ಲೆಂಡಿನಿಂದ ಜನ ಹರಾಜು ಕೂಗಲು ಮುಂದೆ ಬಂದರು. ಹರಾಜು ನಡೆದ ಸ್ಥಳ ಜನ ಕೂರಲು ತುಂಬಾ  ಕಿರಿದಾಗಿ, ನಾವು ಇನ್ನಷ್ಟು ಆಸನಗಳನ್ನು ಒದಗಿಸಬೇಕಾಯಿತು' ಎಂದು ಹರಾಜು ಸಂಸ್ಥೆಯನ್ನು  ನಡೆಸುತ್ತಿರುವ ಆಂಡ್ರ್ಯೂ ಆಲ್ಡ್ರಿಜ್ ಹೇಳಿದರು. ಆ(ಏ)ಸ್ಪ್ಲಂಡ್ ಸಂಗ್ರಹಗಳು ಒಟ್ಟು  100,000 ಪೌಂಡುಗಳಿಗೂ ಹೆಚ್ಚಿನ ದರಕ್ಕೆ ಮಾರಾಟವಾದವು ಎಂದು ಅವರು ನುಡಿದರು. ಆ(ಏ)ಸ್ಪ್ಲಂಡ್ ಅವರು ತಮ್ಮ 99ನೇ  ವಯಸ್ಸಿನಲ್ಲಿ 2006ರ ಮೇ 6ರಂದು ನಿಧನರಾಗಿದ್ದರು. ಆಕೆ ತಮ್ಮ ಟಿಕೆಟ್ಟನ್ನು ಅಮೆರಿಕದಲ್ಲಿನ ತನ್ನ ಮನೆಯ ಶೂ ಬಾಕ್ಸಿನಲ್ಲಿ ಇಟ್ಟಿದ್ದರು. ನಂತರ ತಮ್ಮ ಸಂಗ್ರಹಗಳನ್ನು ಸಹೋದರ ಸಂಬಂಧಿಗೆ ನೀಡಿದ್ದರು. ಸಹೋದರ ಸಂಬಂಧಿ ಅದನ್ನು  ಮಾರಾಟ ಮಾಡಿದರು. ಸ್ವೀಡನ್ನಿನಿಂದ ಅಮೆರಿಕಕ್ಕೆ  ವಲಸೆ ಹೋಗುವ ಸಲುವಾಗಿ  ಆ(ಏ)ಸ್ಪ್ಲಂಡ್ ಅವರು ಐದು ವರ್ಷದವಳಿದ್ದಾಗ ತನ್ನ ಕುಟುಂಬದ ಸದಸ್ಯರ ಜೊತೆಗೆ ಟೈಟಾನಿಕ್ ನೌಕೆ ಏರಿದ್ದರು.

2008: ಬೆಲೆ ಏರಿಕೆ ಹಾಗೂ ಪಕ್ಷದ ನಾಯಕಿ  ಮಮತಾ ಬ್ಯಾನರ್ಜಿ ವಿರುದ್ಧ ನಡೆದ `ಹಲ್ಲೆ'ಯನ್ನು ಪ್ರತಿಭಟಿಸಲು ತೃಣಮೂಲ ಕಾಂಗ್ರೆಸ್ ಹಾಗೂ ಎಸ್ ಯು ಸಿ ಐ ಕರೆಯ ಮೇರೆಗೆ ನಡೆದ 12 ಗಂಟೆಗಳ `ಬಂದ್' ಪರಿಣಾಮವಾಗಿ ಜನಜೀವನ  ಹಾಗೂ ರೈಲು ಸೇವೆ ಅಸ್ತವ್ಯಸ್ತಗೊಂಡಿತು. ಬಂದ್ ಬೆಂಬಲಿಗರು ವಿವಿಧ ನಿಲ್ದಾಣಗಳಲ್ಲಿ ರೈಲುಗಾಡಿಗಳ  ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದರಿಂದ ಹೌರಾ ಮತ್ತು ಸಿಯಾಲ್ಡಾ ವಿಭಾಗಗಳಲ್ಲಿ ರೈಲುಸೇವೆ ಅಸ್ತವ್ಯಸ್ತಗೊಂಡಿತು ಎಂದ ರೈಲ್ವೆ ಮೂಲಗಳು ತಿಳಿಸಿದವು.

2008: ಬಿಜೆಪಿ  ನಾಯಕ ಗೋಪಿನಾಥ ಮುಂಡೆ ಅವರು ಹಠಾತ್ತನೆ ಪಕ್ಷದ ಎಲ್ಲ ಹುದ್ದೆಗಳಿಗೂ ರಾಜೀನಾಮೆ ನೀಡಿ ಬಿಜೆಪಿಗೆ  ಮಂಡೆಬಿಸಿಯಾಗುವಂತೆ ಮಾಡಿದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಾರಾಷ್ಟ್ರ ಘಟಕದ ಭಿನ್ನಾಭಿಪ್ರಾಯಗಳನ್ನು  ನಿವಾರಿಸುವ  ಸಲುವಾಗಿ  ತತ್ ಕ್ಷಣ ದೆಹಲಿಗೆ ಬರುವಂತೆ ಮುಂಡೆ ಹಾಗೂ ರಾಜ್ಯ ಘಟಕ ಮುಖ್ಯಸ್ಥ ನಿತಿನ್ ಗಡ್ಕರಿ ಅವರಿಗೆ ವರಿಷ್ಠರು ಸೂಚಿಸಿದರು.

2008: ವಿಶ್ವ ಭೂಮಿ ದಿನದ ಸ್ಮರಣಾರ್ಥ ವಿಶೇಷ ಸಂಗೀತ ವಿಡಿಯೋ ಒಂದನ್ನು ಹೊರತಂದ ನ್ಯಾಷನಲ್ ಜಿಯಾಗ್ರಾಫಿಕ್ ಚಾನೆಲಿನ ಮನೋಭಾವಕ್ಕೆ ತಕ್ಕಂತಹ ಸಂಗೀತ ನೀಡಿದ ಹೆಗ್ಗಳಿಕೆಗೆ ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಕನ್ನಡಿಗ ಸಂದೀಪ ಚೌಟ ಪಾತ್ರರಾದರು. ಈ ವಿಡಿಯೊ ಸಂಗೀತಕ್ಕೆ `ಬೆಂಗಳೂರು ಬ್ಯಾಂಡ್ ಕರ್ಮಾ 6' ತಂಡದ ಪ್ರತಿಭಾನ್ವಿತ ಗಾಯಕರು ಧ್ವನಿಗೂಡಿಸಿದ್ದರು. `ಅಥರ್್-ಎ ಸಾಂಗ್ ಫಾರ್ ಲೈಫ್' ಎಂಬ ಹೆಸರಿನ ಈ ವಿಡಿಯೋದ ಗುರಿ ಜನರಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸಿ, ಪರಿಸರ ಸಂರಕ್ಷಣೆಗೆ ಸ್ವಯಂ ಪ್ರೇರಣೆಯಿಂದ ಕಾರ್ಯಪ್ರವೃತ್ತವಾಗಲು ಪ್ರೇರೇಪಣೆ ನೀಡುವುದು. ಸಮೀರ್ ಅವರು ಸಾಹಿತ್ಯ ಒದಗಿಸಿದ್ದರು. ಚಾನೆಲಿನ ತಿತಿತಿ.ಟಿಚಿಣರಜಠಣತ.ಛಿಠ.ಟಿ  ಈ ವೆಬ್ಸೈಟಿನಿಂದ ಆಸಕ್ತರು ಹಾಡನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

2008: ರಾಜೀವ್ ಗಾಂಧಿ ಹತ್ಯೆಯ ಆರೋಪದ ಮೇರೆಗೆ ಅಜೀವ ಕಾರಾಗೃಹ ಶಿಕ್ಷೆಗೆ ಗುರಿಯಾದ ಮುರುಗನ್ ಮತ್ತು ಆತನ ಪತ್ನಿ ನಳಿನಿ ಅವರ ಬಾಂಧವ್ಯ ಈಚೆಗೆ ಪ್ರಿಯಾಂಕಾ ಗಾಂಧಿ ಅವರ ಜೈಲು ಭೇಟಿಯ ಬಳಿಕ ಹಳಸಿದ್ದು ಬೆಳಕಿಗೆ ಬಂತು. ಜೈಲಿನ ನಿಯಮದಂತೆ ಮುರುಗನ್ ಮತ್ತು ನಳಿನಿ ಪ್ರತಿ 15 ದಿನಗಳಿಗೊಮ್ಮೆ ನಿರ್ದಿಷ್ಟ ಸಮಯ ಪರಸ್ಪರರನ್ನು ಭೇಟಿ ಮಾಡಬಹುದಿತ್ತು. ಏಪ್ರಿಲ್ 19ರಂದು ಸಹ ಇಂತಹ ಭೇಟಿಯ ದಿನವಾಗಿತ್ತು. ಆದರೆ ಪತಿಯನ್ನು ಭೇಟಿ ಮಾಡಲು ನಳಿನಿ ನಿರಾಕರಿಸಿದಳು. ಪ್ರಿಯಾಂಕಾ ಅವರು ನಳಿನಿಯನ್ನು ಮಾರ್ಚ್ 19ರಂದು ಭೇಟಿಯಾಗಿದ್ದರು. ಈ ವಿಷಯದಲ್ಲಿ ಮುರುಗನ್ ತೀವ್ರ ಸಿಟ್ಟು ಮಾಡಿಕೊಂಡು ಪತ್ನಿಯೊಂದಿಗೆ ತಗಾದೆ ತೆಗೆದಿದ್ದ. ಸಮಯ ಮೀರಿದ್ದರಿಂದ ಮುಂದಿನ ಭೇಟಿಯಲ್ಲಿ ಮಾತನಾಡುವೆ ಎಂದೂ ಅವನು ಹೇಳಿದ್ದ. ಆದರೆ ಪತ್ನಿಯ ಮೇಲಿನ ಸಿಟ್ಟಿನ ಕಾರಣಕ್ಕೆ ಏಪ್ರಿಲ್ 5ರಂದು ಆತ ಪತ್ನಿಯನ್ನು ಭೇಟಿ ಮಾಡಲಿಲ್ಲ. ಇದಕ್ಕೆ ಪ್ರತಿಯಾಗಿ ನಳಿನಿಯೂ ಏಪ್ರಿಲ್ 19ರಂದು ಪತಿಯನ್ನು ಭೇಟಿ ಮಾಡಲು ನಿರಾಕರಿಸಿದಳು. ಇದಕ್ಕೆ ಮೊದಲು ಏಪ್ರಿಲ್ 15ರಂದು ಲಂಡನ್ನಿನಿಂದ ಆಗಮಿಸಿದ್ದ ಮುರುಗನ್ ತಾಯಿ ಮತ್ತು ಸಹೋದರರನ್ನು ಸಹ ಭೇಟಿ ಮಾಡಲು ನಳಿನಿ ನಿರಾಕರಿಸಿದ್ದಳು.

2008: ದೇಶದ ಮೊತ್ತ ಮೊದಲ ಸಂಘಟಿತ ಸ್ವರೂಪದ ಚಿನ್ನದ ವಹಿವಾಟಿಗೆ ಮುಂಬೈಯಲ್ಲಿ ಚಾಲನೆ ನೀಡಲಾಯಿತು. ನಗದು ಹಣಕ್ಕೆ ಖರೀದಿಸುತ್ತಿದ್ದತೆ ಸ್ಥಳದಲ್ಲಿಯೇ ಚಿನ್ನ ವಿತರಿಸುವ (ಸ್ಪಾಟ್ ಮಾರ್ಕೆಟ್) ಈ ವಹಿವಾಟನ್ನು ಮುಂಬೈ ಷೇರುಪೇಟೆ, ಮುಂಬೈ ಚಿನ್ನದ ವ್ಯಾಪಾರಿಗಳ ಸಂಘ ಮತ್ತು ಅನಿಲ್ ಅಂಬಾನಿ ಸಮೂಹದ ರಿಲಯನ್ಸ್ ಮನಿ ಸಹಯೋಗದಲ್ಲಿ ಆರಂಭಿಸಲಾಯಿತು. ಸದ್ಯಕ್ಕೆ ದೇಶದ ಚಿನ್ನಾಭರಣ ವರ್ತಕರು ಮತ್ತು ಖರೀದಿದಾರರು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಚಿನ್ನದ ಬೆಲೆ ಏರಿಳಿತ ಆಧರಿಸಿ ಖರೀದಿ ವಹಿವಾಟು ನಡೆಸುತ್ತಾರೆ. 

2008: ಪಾಕಿಸ್ಥಾನವು ಅಣ್ವಸ್ತ್ರ ಸಿಡಿಸಬಲ್ಲ `ಹತ್ಫ್-6' (ಶಾಹೀನ್-2) ಕ್ಷಿಪಣಿಯ ಪ್ರಾಯೋಗಿಕ ಪರೀಕ್ಷೆಯನ್ನು 2ನೇ ಬಾರಿ ನಡೆಸಿತು. ನೌಕಾದಳದ ಮುಖ್ಯಸ್ಥ ಮೊಹಮ್ಮದ್ ಅಫ್ಜಲ್ ತಾಹೀರ್, ಸೇನಾಧಿಕಾರಿಗಳು ಮತ್ತು ತಂತ್ರಜ್ಞರು ಹತ್ಫ್ ಪ್ರಾಯೋಗಿಕ ಪರೀಕ್ಷೆಗೆ ಸಾಕ್ಷಿಯಾದರು. ಪಾಕಿಸ್ಥಾನವು 1998ರಿಂದ ಕ್ಷಿಪಣಿ ಪರೀಕ್ಷೆಗಳನ್ನು ನಡೆಸಿದೆ. ಗಾವ್ರಿ-1 ಅದರ ಮೊತ್ತ ಮೊದಲ ಯಶಸ್ವಿ ಪ್ರಾಯೋಗಿಕ ಪರೀಕ್ಷೆಯಾಗಿತ್ತು. ಆನಂತರ ಶಾಹೀನ್, ಘಜ್ನವೀ ಮತ್ತು ಅಬೀದಲೀ ಕ್ಷಿಪಣಿಗಳ ಪ್ರಾಯೋಗಿಕ ಪರೀಕ್ಷೆ ನಡೆಸಿತ್ತು. ಹತ್ಫ್-3 (ಘಜ್ನವೀ), ಹತ್ಫ್-5 (ಗಾವ್ರಿ) ಮತ್ತು ಹತ್ಫ್-4 (ಶಾಹೀನ್-1) ಈಗಾಗಲೇ ಪಾಕಿಸ್ಥಾನ ಸೇನೆಯ ಬತ್ತಳಿಕೆ ಸೇರಿಕೊಂಡಿವೆ. ಅತ್ಯಂತ ದೂರ ಹಾಗೂ ನಿಗದಿತ ಪ್ರದೇಶಕ್ಕೆ ಅಣ್ವಸ್ತ್ರಗಳನ್ನು ಚಿಮ್ಮಿಸಬಲ್ಲ ಶಾಹೀನ್-1 ಕ್ಷಿಪಣಿಯ ಮಾದರಿಯಲ್ಲೇ ಹತ್ಫ್-6 ಸಹ ಇದೆ. ಆದರೆ ಇದರ ದೂರ ಸಾಮರ್ಥ್ಯ ಅತ್ಯಂತ ಹೆಚ್ಚು (ಸುಮಾರು ಎರಡು ಸಾವಿರ ಕಿಲೋ ಮೀಟರ್). ಈ ಕ್ಷಿಪಣಿ ಸಾಂಪ್ರದಾಯಿಕ ಮತ್ತು ಅಣ್ವಸ್ತ್ರ ಎರಡನ್ನೂ ಸಮರ್ಥವಾಗಿ ಚಿಮ್ಮಿಸಬ್ಲಲುದು ಎಂದು ಪಾಕ್ ಸೇನಾ ಪ್ರಕಟಣೆ ತಿಳಿಸಿತು.

2008: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾಗಿ ಎಚ್. ಎಸ್.ಸುಧೀಂದ್ರ ಕುಮಾರ್ (ಅಧ್ಯಕ್ಷ), ಮಂಡಿಬೆಲೆ ರಾಜಣ್ಣ (ಉಪಾಧ್ಯಕ್ಷ), ಗಂಗಾಧರ ಮೊದಲಿಯಾರ್ (ಪ್ರಧಾನ ಕಾರ್ಯದರ್ಶಿ), ಎಂ.ಯೂಸೂಫ್  ಪಟೇಲ್, ಅಶೋಕ ಕಾಶೆಟ್ಟಿ ಹಾಗೂ ಯಲ್ಲಪ್ಪ ತಳವಾರ್ (ಕಾರ್ಯದರ್ಶಿ) ಜಿ.ಸಿ.ಲೋಕೇಶ್ (ಖಜಾಂಚಿ) ಆಯ್ಕೆಯಾದರು.  

2007: ಧರೆಯ ಮೇಲಿನ ಸಕಲ ಜೀವಿಗಳಿಗೂ ಲೇಸನ್ನೇ ಬಯಸುವ ಗೋವಿನ ತಳಿಗಳ ಸಂರಕ್ಷಣೆಗಾಗಿ ಶಿವಮೊಗ್ಗ ಜಿಲ್ಲೆ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಆವರಣದಲ್ಲಿ ಆರಂಭವಾದ ವೈಶಿಷ್ಟ್ಯಪೂರ್ಣವಾದ 10 ದಿನಗಳ ಸಡಗರದ ವಿಶ್ವ ಗೋ ಸಮ್ಮೇಳನವನ್ನು ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ದೇಸೀ ಜಾನುವಾರುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಗೋ ಬ್ಯಾಂಕುಗಳನ್ನು ಸ್ಥಾಪಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ಅವರು ನುಡಿದರು.

2007: ಬಿಜೆಪಿ ಸಂಸತ್ ಸದಸ್ಯ ಬಾಬುಭಾಯಿ ಕಟಾರ ಶಾಷಾಮೀಲಾದ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಾರ ಅವರ ಆಪ್ತ ಸಹಾಯಕ ಮತ್ತು ಒಬ್ಬ ಮಹಿಳೆ ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಯಿತು.

2007: ಹ್ಯೂಸ್ಟನ್ನಿನ `ನಾಸಾ' ಜಾನ್ ಸನ್ ಬಾಹ್ಯಾಕಾಶ ಕೇಂದ್ರದಲ್ಲಿ ವಿಲಿಯಂ ಫಿಲಿಪ್ಸ್ ಎಂಬ ಎಂಜಿನಿಯರನೊಬ್ಬ ಸಿನಿಮೀಯ ರೀತಿಯಲ್ಲಿ ತನ್ನ ಸಹೋದ್ಯೋಗಿ ಡೇವಿಡ್ ಬೆವರ್ಲಿ ಅವರನ್ನು ಗುಂಡು ಹಾರಿಸಿ ಕೊಂದು ತಾನು ಸ್ವತಃ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡ. `ನಾಸಾ'ಕ್ಕೆ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಜಾಕೋಬ್ ಎಂಜಿನಿಯರಿಂಗಿನ ಉದ್ಯೋಗಿಯಾದ ವಿಲಿಯಂ ಫಿಲಿಪ್ಸ್ ಕಳೆದ 12-13 ವರ್ಷದಿಂದ ನಾಸಾಕ್ಕಾಗಿ ಕೆಲಸ ಮಾಡುತ್ತಿದ್ದ..

2007: ವಿಶ್ವಸುಂದರಿ, ಅಭಿನೇತ್ರಿ ಐಶ್ವರ್ಯ ರೈ ಬಚ್ಚನ್ ಅವರು ಬಚ್ಚನ್ ಪರಿವಾರ ಸೇರಿಕೊಳ್ಳುವ ಮುನ್ನ ವಿವಾಹದ ಬಳಿಕ ನಡೆಯುವ ಸಾಂಪ್ರದಾಯಿಕ ಬೀಳ್ಕೊಡುಗೆ `ಬಿದಾಯಿ' ಕಾರ್ಯಕ್ರಮದ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಬಿಕ್ಕಳಿಸಿ ಅಳುತ್ತಾ ತವರಿಗೆ ವಿದಾಯ ಹೇಳಿದರು. ನಂತರ ಸಾಂಪ್ರದಾಯಿಕ ದೊಲಿ (ಪಲುಂಕ್ವಿನ್) ಉಡುಪಿನಲ್ಲಿ ಹೊರಗೆ ಬಂದ ಐಶ್ ಅಲಂಕೃತ ಕಾರಿನಲ್ಲಿ ಅಭಿಷೇಕ್ ಜೊತೆ ಕುಳಿತು ಮಾಧ್ಯಮದವರಿಗೆ ಸಿಗದೆ ಗಂಡನ ಮನೆಗೆ ತೆರಳಿದರು.

2007: ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಪೂರೈಸಿದ ಬೆಂಗಳೂರಿನ ಪರಪ್ಪನ ಅಗ್ರಹಾರದ ವಿಶೇಷ ನ್ಯಾಯಾಲಯವು ಪ್ರಮುಖ ಆರೋಪಿ ಅಬ್ದುಲ್ ಕರೀಂ ತೆಲಗಿ ಸೇರಿದಂತೆ ಐವರನ್ನು ತಪ್ಪಿತಸ್ಥರು ಎಂದು ಘೋಷಿಸಿತು. ನೂರಕ್ಕೂ ಹೆಚ್ಚು ಪುಟಗಳ ತೀರ್ಪನ್ನು ನ್ಯಾಯಾಧೀಶ ವಿಶ್ವನಾಥ ವಿರೂಪಾಕ್ಷ ಅಂಗಡಿ ಅವರು 6 ಗಂಟೆಗಳ ಕಾಲ ಓದಿದರು. ಅನೀಸ್ ಖಾನ್, ಬದ್ರುದ್ದೀನ್, ಇಲಿಯಾಸ್ ಅಹಮದ್, ವಜೀರ್ ಅಹಮದ್ ಸಾಲಿಕ್ ಯಾನೆ ಎಂ.ಎಚ್. ಸಾಲಿಕ್ ಅಪರಾಧಿಗಳೆಂದು ಘೋಷಿತರಾದ ಇತರ ಆರೋಪಿಗಳು.

2007: ಐಎಎಸ್ ಅಧಿಕಾರಿಗಳಾದ ಕರ್ನಾಟಕ ಸರ್ಕಾರದ ಕಾರ್ಯದರ್ಶಿ ರಾಜೀವ ಚಾವ್ಲಾ ಮತ್ತು ಕೇಂದ್ರ ಉಕ್ಕು ಸಚಿವಾಲಯದ ಕಾರ್ಯದರ್ಶಿ ಆರ್. ಎಸ್. ಪಾಂಡೆ ಅವರಿಗೆ  ಪ್ರಧಾನಿ ಮನಮೋಹನ್ ಸಿಂಗ್ ಅವರು ನವದೆಹಲಿಯಲ್ಲಿ ಅತ್ಯುತ್ತಮ ಸಾರ್ವಜನಿಕ ಆಡಳಿತ ಸೇವಾ ಪುರಸ್ಕಾರ ಪ್ರದಾನ ಮಾಡಿದರು.

2007: ಬಾಹ್ಯಾಕಾಶ ಪ್ರವಾಸಿ ಚಾರ್ಸ್ ಸಿಮೊನೀ ಅವರು ಎರಡು ವಾರಗಳ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ವಾಸ್ತವ್ಯದ ಬಳಿಕ ಭೂಮಿಗೆ ವಾಪಸ್ ಹೊರಟರು.

2006: ಅರಾಜಕತೆ ಹಾಗೂ ದೇಶವ್ಯಾಪಿ ಪ್ರತಿಭಟನೆಯಿಂದ ತತ್ತರಿಸಿದ್ದ ನೇಪಾಳದಲ್ಲಿ ದಿಢೀರ್ ಬೆಳವಣಿಗೆ ಸಂಭವಿಸಿ ರಾಜಕೀಯ ಅಧಿಕಾರವನ್ನು ಜನರಿಗೆ ಹಸ್ತಾಂತರಿಸಲು ದೊರೆ ಜ್ಞಾನೇಂದ್ರ ಸಮ್ಮತಿಸಿದರು. ಪ್ರಧಾನಿ ಸ್ಥಾನಕ್ಕೆ ಯಾರನ್ನಾದರೂ ಹೆಸರಿಸುವಂತೆ ಅವರು ಏಳು ಪಕ್ಷಗಳ ರಾಜಕೀಯ ಒಕ್ಕೂಟಕ್ಕೆ ಮನವಿ ಮಾಡಿದರು.

2006: ಸಾಂಸ್ಕತಿಕ ವಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳನ್ನು ಸರ್ಕಾರ ಪ್ರಕಟಿಸಿತು. 2005ರ ಸಾಲಿನ ಪ್ರತಿಷ್ಠಿತ ಟಿ.ಚೌಡಯ್ಯ ಪ್ರಶಸ್ತಿಗೆ ಹಿಂದೂಸ್ಥಾನಿ ತಬಲಾ ವಾದಕ ದತ್ತಾತ್ರೇಯ ಸದಾಶಿವ ಗರುಡ, ಕನಕ ಪುರಂದರ ಪ್ರಶಸ್ತಿಗೆ ಗಮಕ ಕ್ಷೇತ್ರದ ಬಿ. ಎಸ್. ಎಸ್. ಕೌಶಿಕ್, ದಾನಚಿಂತಾಮಣಿ ಪ್ರಶಸ್ತಿಗೆ ಲೇಖಕಿ ಡಾ. ವೀಣಾ ಶಾಂತೇಶ್ವರ, ಡಾ. ಗುಬ್ಬಿ ವೀರಣ್ಣ ಪ್ರಶಸ್ತಿಗೆ ವೃತ್ತಿ ರಂಗಭೂಮಿಯ ರೇಣುಕಮ್ಮ ಮುಳಗೋಡು, ಸಂತ ಶಿಶುನಾಳ ಷರೀಫ ಪ್ರಶಸ್ತಿಗೆ ಗಾಯಕ ಈಶ್ವರ ಮಿಣಚಿ, ಜಕಣಾಚಾರಿ ಪ್ರಶಸ್ತಿಗೆ ಸಿದ್ದಲಿಂಗಯ್ಯ, ಶಾಂತಲಾ ನಾಟ್ಯ ಪ್ರಶಸ್ತಿಗೆ ಲೀಲಾ ರಾಮನಾಥನ್ ಆಯ್ಕೆಯಾದರು.

2006: ಅಂಗವಿಕಲ ವ್ಯಕ್ತಿಗಳು ಸ್ವತಂತ್ರವಾಗಿ ಚಲಾಯಿಸಬಹುದಾದ ಕಾರಿನ ಮಾದರಿಯೊಂದನ್ನು ಅಭಿವೃದ್ಧಿ ಪಡಿಸಿರುವುದಾಗಿ ಬೆಳಗಾವಿಯ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಾದ ಡೇನಿಯಲ್ ಸುನಾಥ ಮತ್ತು ಪ್ರದೀಪ ಸರಪುರ ಬಹಿರಂಗ ಪಡಿಸಿದರು.

2006: ಮುಸ್ಲಿಂ ಸಮುದಾಯದಲ್ಲಿ ಪತಿ ಮೂರುಬಾರಿ ತಲಾಖ್ ಹೇಳಿದ ಮಾತ್ರಕ್ಕೆ ಗಂಡ- ಹೆಂಡತಿ ಬೇರೆ ಬೇರೆಯಾಗಿ ಬದುಕಬೇಕು ಎಂದು ಒತ್ತಾಯಿಸುವ ಹಕ್ಕು ಯಾರಿಗೂ ಇಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತು. ಒರಿಸ್ಸಾದ ಮುಸ್ಲಿಂ ಸಮುದಾಯವು ಷರಿಯತ್ ಹೆಸರಿನಲ್ಲಿ ತಮ್ಮ ಪತಿಯ ಜೊತೆ ಬದುಕಲು ತಮಗೆ ಅನುಮತಿ ನಿರಾಕರಿಸಿದ ಸಂಬಂಧ ನಜ್ಮಾ ಬೀವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ವಿಚಾರಣಾ ಪೀಠ ಈ ತೀರ್ಪು ನೀಡಿತು.

 1946: ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಎಸ್. ವೆಂಕಟರಾಘವನ್ ಜನ್ಮದಿನ. ಇವರು ಜಗತ್ತಿನ ಅತ್ಯುತ್ತಮ ಕ್ರಿಕೆಟ್ ಅಂಪೈರುಗಳಲ್ಲಿ ಒಬ್ಬರು ಎಂಬ ಖ್ಯಾತಿ ಪಡೆದವರು.

1926: ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ಜನ್ಮದಿನ.

1920: ಪತ್ರಿಕಾರಂಗ, ಸಾಹಿತ್ಯ, ಸ್ವಾತಂತ್ರ್ಯ ಚಳವಳಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಖ್ಯಾತಿ ಪಡೆದಿದ್ದ ತ.ರಾ. ಸುಬ್ಬರಾಯ (ತ.ರಾ.ಸು) (21-4-1920 ರಿಂದ 10-4-1984) ಹುಟ್ಟಿದ ದಿನ. ಹರಿಹರ ತಾಲ್ಲೂಕಿನ ಮಲೆಬೆನ್ನೂರಿನಲ್ಲಿ ರಾಮಸ್ವಾಮಯ್ಯ- ಸೀತಮ್ಮ ದಂಪತಿಯ ಪುತ್ರರಾಗಿ ತ.ರಾ.ಸು. ಜನಿಸಿದರು.

1920: ಸುಗಮ ಸಂಗೀತ ಕ್ಷೇತ್ರದ ಹರಿಕಾರ ಎ.ವಿ. ಕೃಷ್ಣಮಾಚಾರ್ಯ (ಪದ್ಮಚರಣ್) (21-4-1920ರಿಂದ 22-7-2002) ಅವರು ಅಸೂರಿ ವೀರ ರಾಘವಾಚಾರ್ಯ- ಜಾನಕಮ್ಮ ದಂಪತಿಯ ಮಗನಾಗಿ ಚಿತ್ತೂರು ಜಿಲ್ಲೆಯ ಮದನಪಲ್ಲಿ ತಾಲ್ಲೂಕಿನ ಬಡಿಕಾಯಲಪಲ್ಲೆ ಗ್ರಾಮದ `ಗುತ್ತಿ' ಎಂಬಲ್ಲಿ ಜನಿಸಿದರು.

1910: ಮಾರ್ಕ್ ಟ್ವೇನ್ ಎಂದೇ ಖ್ಯಾತನಾಗಿದ್ದ ಬರಹಗಾರ ಸ್ಯಾಮುಯೆಲ್ ಲಾಂಗ್ಹೋರ್ಮ್ ಕ್ಲೆಮೆನ್ಸ್ 74ನೇ ವಯಸ್ಸಿನಲ್ಲಿ ಮೃತನಾದ. 1835ರಲ್ಲಿ ಹುಟ್ಟಿದ ಆತನ ಬದುಕಿನಲ್ಲಿ 76 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುವ ಹ್ಯಾಲಿ ಧೂಮಕೇತು ಭಾರೀ ಪರಿಣಾಮ ಬೀರಿತ್ತು. `ಹ್ಯಾಲಿಯನ್ನು ಕಾಣದೆ ಸತ್ತರೆ ನನಗೆ ಭ್ರಮನಿರಸನವಾಗುತ್ತದೆ' ಎಂದು ಆತ ಬರೆದಿದ್ದ. ಆತನಿಗೆ ಭ್ರಮನಿರಸನವಾಗಲಿಲ್ಲ..  ಹ್ಯಾಲಿ ಕಾಣಿಸಿದ ನಂತರ ಆತ ಮೃತನಾದ. 

1619: ಡಚ್ ಸರ್ಜನ್ ಜಾನ್ ವ್ಯಾನ್ ರೀಬೀಕ್ ಜನ್ಮದಿನ. ಈತ 1652ರಲ್ಲಿ ಕೇಪ್ ಟೌನನ್ನು ಸ್ಥಾಪಿಸಿದ. 

1526: ಮೊದಲನೆಯ ಪಾಣಿಪತ್ ಯುದ್ಧದಲ್ಲಿ ಮೊಘಲ್ ದೊರೆ ಬಾಬರ್, ಲೋದಿಯ ಆಡಳಿತಗಾರ ಇಬ್ರಾಹಿಂ ಲೋದಿಯನ್ನು ಸೋಲಿಸಿ ಕೊಲೆಗೈದ. 

(ಸಂಗ್ರಹ: ನೆತ್ರಕೆರೆ ಉದಯಶಂಕರ)

Advertisement